ಕರ್ನಾಟಕದಲ್ಲಿ 5.42 ಕೋಟಿ ಮತದಾರರು; ದ್ರಾವಿಡ್, ಚಂದ್ರಶೇಖರ ಕಂಬಾರ, ಗಿರೀಶ್‌ಗೌಡ ಚುನಾವಣಾ ರಾಯಭಾರಿಗಳು
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 5.42 ಕೋಟಿ ಜನರು ಮತದಾನ ಮಾಡಲು ಅರ್ಹರಾಗಿದ್ದಾತರೆ. ಕರ್ನಾಟಕ ಚುನಾವಣಾ ರಾಯಭಾರಿಗಳಾಗಿ ರಾಹುಲ್ ಡ್ರಾವಿಡ್, ಚಂದ್ರಶೇಖರ್ ಕಂಬಾರ್, ಗಿರೀಶ್‌ಗೌಡ ಆಯ್ಕೆಯಾಗಿದ್ದಾರೆ.
ಬೆಂಗಳೂರು (ಮಾ.16): ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, 5,42,08,088 ಜನರು ಮತದಾನಕ್ಕೆ ಅರ್ಹರಾಗಿದ್ದಾರೆ. ಭಾರತದ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್, ಸಾಹಿತಿ ಡಾ. ಚಂದ್ರಶೇಖರ ಕಂಬಾರ, ಹಾಗೂ ಅಥ್ಲೀಟ್ ಗಿರೀಶ್ ಗೌಡ (ಪ್ಯಾರಾ ಒಲಂಪಿಯನ್) ಅವರನ್ನು ಕರ್ನಾಟಕ ಚುನಾವಣಾ ರಾಯಭಾರಿಗಳಾಗಿ ನೇಮಕ ಮಾಡಲಾಗಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.
ಲೋಕಸಭಾ ಚುನಾವಣೆ ಘೋಷಣೆಯಾದ ಬೆನ್ನಲ್ಲಿಯೇ ಕರ್ನಾಟಕ ಲೋಕಸಭಾ ಕ್ಷೇತ್ರಗಳ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಅವರು ಮತದಾರರು, ಮತಗಟ್ಟೆಗಳ ಬಗ್ಗೆ ಮಾಹಿತಿ ನೀಡಿದರು. ರಾಜ್ಯದಲ್ಲಿ ಪುರುಷರು- 2,71,21,407 ಮಹಿಳೆಯರು- 2,70,81,748 ಹಾಗೂ ತೃತೀಯ ಲಿಂಗಿಗಳು- 4,933 ಸೇರಿ ಒಟ್ಟು - 5,42,08,088 ಮತದಾರರಿದ್ದಾರೆ. ಒಟ್ಟು 58,834 ಮತಗಟ್ಟೆಗಳಲ್ಲಿ ಕರ್ನಾಟಕದಲ್ಲಿ ಏ.26 ಮತ್ತು ಮೇ 7ರಂದು 2 ಹಂತಗಳಲ್ಲಿ ಮತದಾನ ನಡೆಯಲಿದೆ. ಇನ್ನು ಚುನಾವಣೆ ಫಲಿತಾಂಶ - ಜೂನ್ 4ರಂದು ಘೋಷಣೆಯಾಗಲಿದೆ ಎಂದರು.
Lok Sabha election 2024: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಯಾವಾಗ ಮತದಾನ?
ರಾಜ್ಯದಲ್ಲಿ 11,24,622 ಯುವ ಮತದಾರರು ಮೊದಲ ಬಾರಿಗೆ ಮತಯದಾನ ಮಾಡಲಿದ್ದಾರೆ. ಇನ್ನು 38,794 ಬುಡಕಟ್ಟು ಮತದಾರರಿದ್ದಾರೆ. 85 ವರ್ಷ ಮೇಲ್ಪಟ್ಟ 5,70,168 ಮತದಾರರು ಮನೆಯಲ್ಲಿಯೇ ಮತದಾನ ಮಾಡಲಿದ್ದಾರೆ. ಜೊತೆಗೆ 3,51,153 ಸಿಬ್ಬಂದಿ ಪೋಸ್ಟಲ್ ವೋಟಿಂಗ್ ಮಾಡಲಿದ್ದಾರೆ. ಇದರೊಂದಿಗೆ 3,200 ಸಾಗರೋತ್ತರ ಮತದಾರರು ಇದ್ದಾರೆ. ರಾಜ್ಯದಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ 31,74,098 ಮತದಾರರಿದ್ದು, ಅತಿಹೆಚ್ಚು ಮತದಾರರಿರುವ ಕ್ಷೇತ್ರವಾಗಿದೆ. ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕೇವಲ 15,72,958 ಮತದಾರರಿದ್ದು, ಅತಿ ಕಡಿಮೆ ಮತದಾರರನ್ನು ಹೊಂದಿರುವ ಕ್ಷೇತ್ರವಾಗಿದೆ ಎಂದು ಮಾಹಿತಿ ನೀಡಿದರು.
224 ಮತಗಟ್ಟೆಗಳನ್ನು ದಿವ್ಯಾಂಗರು ನಿರ್ವಹಣೆ ಮಾಡುತ್ತಾರೆ: ಇನ್ನು ಲೋಕಸಭಾ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಕೆಲವು ಮತಗಟ್ಟೆಗಳನ್ನು ದಿವ್ಯಾಂಗರು ನಿರ್ವಹಣೆ ಮಾಡುತ್ತಾರೆ. ರಾಜ್ಯದಲ್ಲಿ ಈ ಬಾರಿ 224 ಮತಗಟ್ಟೆಗಳನ್ನು ದಿವ್ಯಾಂಗರು ನಿರ್ವಹಣೆ ಮಾಡಲು ವ್ಯವಸ್ಥೆ ಮಾಡಲಾಗುತ್ತದೆ. ಈ ಮೂಲಕ ತಾವು ಸಾಮಾನ್ಯರಂತೆ ಚುನಾವಣೆ ಪ್ರಕ್ರಿಯೆಗಳನ್ನು ಪಾಲ್ಗೊಳ್ಳಬಹುದು ಎಂಬುದಕ್ಕೆ ಪ್ರೇರಣೆ ನೀಡಲಾಗುತ್ತದೆ ಎಂದು ತಿಳಿಸಿದರು.
ಕರ್ನಾಟಕದ ಮತದಾರರ ವಿವರ
- ಪುರುಷರು- 2,71,21,407
- ಮಹಿಳೆಯರು- 2,70,81,748
- ತೃತೀಯ ಲಿಂಗಿಗಳು- 4,933
- ಒಟ್ಟು - 5,42,08,088
- ಒಟ್ಟು ಮತಗಟ್ಟೆ - 58,834
- ಮತದಾನ - ಏ.26 ಮತ್ತು ಮೇ 7
- ಫಲಿತಾಂಶ - ಜೂನ್ 4
ಚುನಾವಣೆ ಘೋಷಣೆ ಬೆನ್ನಲ್ಲೇ Phir Ek Baar Modi Sarkar ಎಂದು ಟ್ವೀಟ್ ಮಾಡಿದ ಪ್ರಧಾನಿ ಮೋದಿ!
18ನೇ ಲೋಕಸಭೆಗೆ ಏಪ್ರಿಲ್ 19 ರಿಂದ ಜೂನ್ 1 ರವರೆಗೆ ದೇಶಾದ್ಯಂತ ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಉತ್ತರ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತ ಏಪ್ರಿಲ್ 26 (ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ಸೆಂಟ್ರಲ್), 2ನೇ ಹಂತದ ಚುನಾವಣೆ ಮೇ 7 (ಶಿವಮೊಗ್ಗ, ದಾವಣಗೆರೆ, ಹಾವೇರಿ, ಉತ್ತರ ಕನ್ನಡ, ಬಳ್ಳಾರಿ, ಧಾರವಾಡ, ಕೊಪ್ಪಳ, ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ರಾಯಚೂರು, ಬಿಜಾಪುರ ಕಲಬುರಗಿ ಮತ್ತು ಬೀದರ್) ರಂದು ನಡೆಯಲಿದೆ. ಫಲಿತಾಂಶ ಜೂನ್ 4ಕ್ಕೆ ಪ್ರಕಟವಾಗಲಿದೆ.