ಚಿತ್ರದುರ್ಗ: ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಕರಣದಲ್ಲಿ ಆರೋಪವಿರುವುದು ಎಸ್‌ಐ ಮೇಲೆ ಮಾತ್ರ. ಆದರೆ ಇಡೀ ಕುಟುಂಬದವರ ವಿರುದ್ಧ ದೂರು ನೀಡಲಾಗಿದೆ. ಮಹಿಳೆಯ ದೂರು ಆಧರಿಸಿ ಆರೋಪಿಯ ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ವಿರುದ್ಧ ಹೈಕೋರ್ಟ್ ಕೆಂಡಾಮಂಡಲ! ಪ್ರಕರಣವೇನು?
ಬೆಂಗಳೂರ (ಜೂ.20): ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಆರೋಪ ಎದುರಿಸುತ್ತಿದ್ದ ಪ್ರೊಬೇಷನರಿ ಸಬ್ಇನ್ಸ್‌ಪೆಕ್ಟರ್‌ವೊಬ್ಬರ ಸಹೋದರನನ್ನು ಬಂಧಿಸಿದ ಪೊಲೀಸರ ಕ್ರಮವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಈ ಸಂಬಂಧ ಚಿತ್ರದುರ್ಗ ಮಹಿಳಾ ಠಾಣೆಯ ತನಿಖಾಧಿಕಾರಿಗೆ ಖುದ್ದು ಹಾಜರಾಗುವಂತೆ ಕೋರ್ಟ್ ನಿರ್ದೇಶನ ನೀಡಿದೆ.
ವಿವಾಹಿತ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸುವುದು ಹೇಗೆ?
ದಾವಣಗೆರೆಯ ಎನ್.ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ನಡೆಸಿತು. ವಿನಾಕಾರಣ ಆರೋಪಿ ಸಹೋದರನ ಬಂಧನ ಆಘಾತಕಾರಿ ಎಂದು ಹೇಳಿ, ‘ವಿವಾಹಿತ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸುವುದು ಹೇಗೆ ಎಂದು ಪ್ರಶ್ನಿಸಿತು.
ಆರೋಪವಿರುವುದು ಎಸ್‌ಐ ಮೇಲೆ ಬಂಧಿಸಿದ್ದು ಸಹೋದರನನ್ನ!
ತನಿಖೆಗೆ ಮಧ್ಯಂತರ ತಡೆ ನೀಡಿರುವುದಲ್ಲದೆ, ತಕ್ಷಣವೇ ಬಂಧಿತನ ಬಿಡುಗಡೆ ಮಾಡಬೇಕು. ಅಷ್ಟೇ ಅಲ್ಲ, ಪ್ರಕರಣದಲ್ಲಿ ಸಂಬಂಧವಿಲ್ಲದವರನ್ನು ಬಂಧಿಸಿದ್ದು ಏಕೆ? ಎಂದು ಪ್ರಮಾಣಪತ್ರ ಸಲ್ಲಿಸಲು ತನಿಖಾಧಿಕಾರಿಗೆ ಸೂಚನೆ ನೀಡಿ ನ್ಯಾಯಾಲಯ ವಿಚಾರಣೆಯನ್ನು ಜೂ.25ಕ್ಕೆ ಮುಂದೂಡಿತು. ಅರ್ಜಿದಾರರ ಪರ ವಕೀಲ ಭರತ್ ಕುಮಾರ್, ‘ಪ್ರಕರಣದಲ್ಲಿ ಆರೋಪವಿರುವುದು ಎಸ್‌ಐ ಮೇಲೆ ಮಾತ್ರ. ಆದರೆ ಇಡೀ ಕುಟುಂಬದವರ ವಿರುದ್ಧ ದೂರು ನೀಡಲಾಗಿದೆ. ಮಹಿಳೆಯ ದೂರು ಆಧರಿಸಿ ಆರೋಪಿಯ ಸಹೋದರನನ್ನು ಪೊಲೀಸರು ಬಂಧಿಸಿರುವುದು ಕಾನೂನು ಬಾಹಿರ ಕ್ರಮ. ಕೂಡಲೇ ಆತನ ಬಿಡುಗಡೆಗೆ ಆದೇಶ ನೀಡಬೇಕು ಎಂದು ಕೋರಿದರು.


