ತಾಲೂಕು, ಜಿಲ್ಲಾಸ್ಪತ್ರೆಯ ICU ವಾರ್ಡ್‌ಗಳಲ್ಲಿ ಇನ್ಮುಂದೆ CC ಕ್ಯಾಮೆರಾ ಕಣ್ಗಾವಲು

ಕೊರೋನಾ ಸೋಂಕಿತರನ್ನು ವೈದ್ಯರೇ ಕೊಲ್ಲುತ್ತಿದ್ದಾರೆ ಎನ್ನುವಂತ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮವೊಂದು ಕೈಗೊಂಡಿದೆ.

Karnataka Health Dept Orders cc cameras installed in ICU Ward at government hospitals rbj

ಬೆಂಗಳೂರು, (ಮೇ.08): ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳ ಐಸಿಯು ವಾರ್ಡ್‌ ಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ಮೇ 11ರೊಳಗೆ ಸಿಸಿ ಕ್ಯಾಮರಾ ಅಳವಡಿಸುವಂತೆ ಆರೋಗ್ಯ ಇಲಾಖೆ ಇಂದು (ಶನಿವಾರ) ಸುತ್ತೋಲೆ ಹೊರಡಿಸಿದೆ. ಆಸ್ಪತ್ರೆಗಳಲ್ಲಿ ಇತ್ತಿಚೇಗೆ ಆಕ್ಸಿಜನ್ ಕಳವು , ಸಿಬ್ಬಂದಿಗಳ ನಿರ್ಲಕ್ಷ್ಯದ ಬಗ್ಗೆ ಅನೇಕ ಆರೋಪಗಳು ಕೇಳಿ ಬಂದಿತ್ತು. ಹೀಗಾಗಿ ಸಿಸಿ ಕ್ಯಾಮರಾ ಅಳವಡಿಕೆಗೆ ಆರೋಗ್ಯ ಇಲಾಖೆ ಮುಂದಾಗಿದೆ.

ಹಣ ವಸೂಲಿಗೆ ಕಡಿವಾಣ, ಸಿಟಿ ಸ್ಕ್ಯಾನಿಂಗ್‌ಗೆ ದರ ನಿಗದಿ ಮಾಡಿದ ರಾಜ್ಯ ಸರ್ಕಾರ

ಇನ್ನು ವಾರ್ಡ್, ಐಸಿಯು ಸೇರಿ ಸಿಸಿಟಿವಿ ಅಳವಡಿಸಿಕೊಳ್ಳಲು ತಗಲುವ ವೆಚ್ಚವನ್ನು ಆರೋಗ್ಯ ರಕ್ಷಾ ಸಮಿತಿ ಅನುದಾನದಿಂದ ಅಥವಾ ಆಸ್ಪತ್ರೆಯ ಲಭ್ಯವಿರುವ ಇತರೇ ಅನುದಾನದಿಂದ ಭರಿಸಿಕೊಳ್ಳಲು ಸೂಚಿಸಿ, ಆದೇಶಿಸಿದೆ. 

ತೆಗೆದುಕೊಂಡು ಕ್ರಮದ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಹಾಗೂ ಜಿಲ್ಲೆಗಳ ನೋಡಲ್ ಅಧಿಕಾರಿಗಳು ಪರಿಶೀಲಿಸಿ, ದಿನಾಂಕ 12-05-2021ರ ಒಳಗೆ ವರದಿ ಸಲ್ಲಿಸುವಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ವೈದ್ಯರ ಮೇಲೆ ಹದ್ದಿನ ಕಣ್ಣು: ಕೋವಿಡ್‌ ಆಸ್ಪತ್ರೆಯಲ್ಲೀಗ ಸಿಸಿ ಕ್ಯಾಮೆರಾ...!

Latest Videos
Follow Us:
Download App:
  • android
  • ios