ಬೆಂಗಳೂರು (ನ. 26): ತಮಿಳುನಾಡಿನಲ್ಲಿ ಅಬ್ಬರಿಸುತ್ತಿರುವ 'ನಿವಾರ್' ಚಂಡಮಾರುತ ರಾಜ್ಯದ ಮೇಲೆಯೂ ಪ್ರಭಾವ ಬೀರುವ ಲಕ್ಷಣಗಳು ಕಾಣಿಸುತ್ತಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ. ಭಾರೀ ಮಳೆಯ ನಿರೀಕ್ಷೆಯೂ ಇದೆ. 

ಇಂದಿನಿಂದ 2 ದಿನ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಕೆಲ ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ. 

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ 2 ದಿನ ಮಳೆಯಾಗುವ ಸಾಧ್ಯತೆ ಇದೆ. 

"