ವೃದ್ಧನ ಶಿಕ್ಷೆಯನ್ನು ಕಡಿತಗೊಳಿಸಿ, ಅಂಗನವಾಡಿಯಲ್ಲಿ ಉಚಿತ ಸೇವೆ ಸಲ್ಲಿಸುವಂತೆ ವಿಭಿನ್ನ ಶಿಕ್ಷೆ ನೀಡಿದ ಹೈಕೋರ್ಟ್!
ಆಯುಧಗಳಿಂದ ಹಲ್ಲೆ ನಡೆಸಿ ಗಾಯಗೊಳಿಸಿದ ಪ್ರಕರಣದ ಆರೋಪಿಯ ಶಿಕ್ಷೆಯನ್ನು ಭಾರೀ ಪ್ರಮಾಣದಲ್ಲಿ ಕಡಿತಗೊಳಿಸಿ ಕರ್ನಾಟಕ ಹೈಕೋರ್ಟ್ ವಿಭಿನ್ನ ರೀತಿಯಲ್ಲಿ ಶಿಕ್ಷೆ ವಿಧಿಸಿರುವ ಅಪರೂಪದ ಪ್ರಸಂಗ ನಡೆದಿದೆ.
ಬೆಂಗಳೂರು (ಫೆ.25): ಹಲವು ವರ್ಷಗಳ ಹಿಂದೆ ಆಯುಧಗಳಿಂದ ಹಲ್ಲೆ ನಡೆಸಿ ಗಾಯಗೊಳಿಸಿದ ಪ್ರಕರಣದ ಆರೋಪಿಯ ಶಿಕ್ಷೆಯನ್ನು ಭಾರೀ ಪ್ರಮಾಣದಲ್ಲಿ ಕಡಿತಗೊಳಿಸಿ ಕರ್ನಾಟಕ ಹೈಕೋರ್ಟ್ ವಿಭಿನ್ನ ರೀತಿಯಲ್ಲಿ ಶಿಕ್ಷೆ ವಿಧಿಸಿರುವ ಅಪರೂಪದ ಪ್ರಸಂಗ ನಡೆದಿದೆ. 2008ರಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಗಾಯಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಐತಪ್ಪ ನಾಯ್ಕ (81) ಎಂಬಾತನಿಗೆ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ 2 ವರ್ಷ ಶಿಕ್ಷೆ ವಿಧಿಸಿತ್ತು. ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಶಿಕ್ಷೆಯ ಪ್ರಮಾಣವನ್ನು ಮೂರು ದಿನಗಳಿಗೆ ಇಳಿಸಿ ಒಂದು ವರ್ಷ ಅಂಗನವಾಡಿಯಲ್ಲಿ ಉಚಿತವಾಗಿ ಸೇವೆ ಸಲ್ಲಿಸುವಂತೆ ಆದೇಶ ನೀಡಿದೆ.
2008ರಲ್ಲಿ ವಯೋವೃದ್ಧ ಐತಪ್ಪ ನಾಯ್ಕ ವ್ಯಕ್ತಿಯೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಗಾಯಗೊಳಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಐತಪ್ಪನನ್ನು ಪೊಲೀಸರು ಬಂಧಿಸಿದ್ದರು. ಅದರಂತೆ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಆರೋಪಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಆದರೆ ಮಕ್ಕಳಿಲ್ಲದ ಕಾರಣ ಪತ್ನಿಯನ್ನು ನೋಡಿಕೊಳ್ಳಬೇಕಾದ ಕಾರಣ ವೃದ್ಧ ಐತಪ್ಪ ನಾಯ್ಕ ಶಿಕ್ಷೆ ಕಡಿತಗೊಳಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಗರ್ಲ್‌ಫ್ರೆಂಡ್‌ಗೆ ಮೆಸೇಜ್ ಕಳುಹಿಸಿದ ಸಿಟ್ಟಿಗೆ ಗೆಳೆಯನ ಕೊಂದು ಖಾಸಗಿ ಅಂಗ ಬೇರ್ಪಡಿಸಿ ಪಾಗಲ್ ಪ್ರೇಮಿ!
ಹೈಕೋರ್ಟ್ನಲ್ಲಿ ನ್ಯಾಯಮೂರ್ತಿ ಆರ್. ನಟರಾಜ್ ಅವರಿದ್ದ ಏಕಸದಸ್ಯ ಪೀಠ, ಅರ್ಜಿ ವಿಚಾರಣೆಗೆ ಕೈಗೆತ್ತಿಕೊಂಡಿತು. ಆರೋಪಿ ಪರ ವಕೀಲ ದಿನೇಶ್ ಕುಮಾರ್ ಕೆ.ರಾವ್ ವಾದ ಮಂಡಿಸಿದರು. ನ್ಯಾಯಧೀಶರ ಮುಂದೆ ವಾದ ಮಂಡಿಸಿದ ವಕೀಲ ದಿನೇಶ್ ಕುಮಾರ್ ಆರೋಪಿ ತಮ್ಮ ತಪ್ಪನ್ನು ಒಪ್ಪಿಕೊಳ್ಳಲು ಮತ್ತು ಸಮಾಜ ಸೇವೆ ಮಾಡಲು ಸಿದ್ಧರಾಗಿದ್ದಾರೆ. ಹಾಗಾಗಿ ಶಿಕ್ಷೆಯನ್ನು ಕಡಿಮೆ ಮಾಡುವಂತೆ ಮನವಿ ಮಾಡಿದರು.
ಕಾರಿನೊಳಗೆ ಧೂಮಪಾನ ಮಾಡಿದ ಅಧಿಕಾರಿಗೆ ಬೆದರಿಕೆ ಹಾಕಿ ಹಣ,ಚಿನ್ನ ದೋಚಿದ ಬೈ
ವಕೀಲರ ವಾದವನ್ನು ಪರಿಗಣನೆಗೆ ತೆಗೆದುಕೊಂಡ ನ್ಯಾಯಾಧೀಶರು ಆರೋಪಿ ಐತಪ್ಪ ನಾಯ್ಕಗೆ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ವಿಧಿಸಿದ್ದ ಎರಡು ವರ್ಷಗಳ ಶಿಕ್ಷೆಯನ್ನು ಮೂರು ದಿನಗಳಿಗೆ ಇಳಿಸಿತು. ಜೊತೆಗೆ 2023ರ ಫೆ.20ರಿಂದ ಮಿತನಡ್ಕ ಅಂಗನವಾಡಿಯಲ್ಲಿ ಒಂದು ವರ್ಷ ಉಚಿತವಾಗಿ ಸೇವೆ ಸಲ್ಲಿಸಬೇಕು ಎಂದು ಆದೇಶಿಸಿತು. ಈ ಮೂಲಕ ವಿನೂತನ ರೀತಿಯಲ್ಲಿ ಶಿಕ್ಷೆ ನೀಡಿತು.