Idgah Maidan ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಕೋರ್ಟ್ ಬ್ರೇಕ್

ಬೆಂಗಳೂರಿನ ಚಾಮರಾಜಪೇಟೆಯ ವಿವಾದಿತ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಕರ್ನಾಟಕ ಹೈಕೋರ್ಟ್ ಬ್ರೇಕ್ ಹಾಕಿದೆ.

Karnataka High Court Breaks To ganeshotsava In Chamrajpet idgah maidan rbj

ಬೆಂಗಳೂರು, (ಆಗಸ್ಟ್.25): ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಕರ್ನಾಟಕ ಹೈಕೋರ್ಟ್ ಅನುಮತಿ ನಿರಾಕರಿಸಿದೆ.

ಚಾಮರಾಜಪೇಟೆ ಮೈದಾನ(Chamrajpet Idgah Maidan) ಮಾಲೀಕತ್ವಕ್ಕೆ ಸಂಬಂಧಿಸಿ BBMP ಆದೇಶದ ವಿರುದ್ಧ ವಕ್ಫ್ ಬೋರ್ಡ್ ಹೈಕೋರ್ಟ್(High Court) ಮೆಟ್ಟಿಲೇರಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವಕ್ಕೆ ಅವಕಾಶ ಇಲ್ಲ.. ಈದ್ಗಾ ಮೈದಾನ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್ ಇಂದು(ಆ.25) ಆದೇಶ ಹೊರಡಿಸಿದೆ.

ಚಾಮರಾಜಪೇಟೆ ಮೈದಾನ ಗಣೇಶೋತ್ಸವಕ್ಕೆ ಭರದ ಸಿದ್ಧತೆ

ಈ ಹಿನ್ನೆಲೆಯಲ್ಲಿ ಗಣೇಶ ಪ್ರತಿಷ್ಠಾಪಿಸಲು ಆವಕಾಶವಿಲ್ಲ. ಬಕ್ರೀದ್  ಹಾಗೂ ರಂಜಾನ್ ಪ್ರಾರ್ಥನೆಗೆ ಯಥಾಪ್ರಕಾರ ಅವಕಾಶ ನೀಡಲಾಗಿದೆ. ಹಾಗೂ ಚಾಮರಾಜಪೇಟೆ ಈದ್ಗಾ ಜಾಗವನ್ನು ಆಟದ ಮೈದಾನವಾಗಿಯೂ ಬಳಕೆ ಮಾಡಲು, ಮೊದಲು ಇದ್ದಂತೆ ಯಥಾಸ್ಥಿತಿ ಕಾಯಲು ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರಿದ್ದ ಪೀಠ ಆದೇಶ ಹೊರಡಿಸಿ ವಿಚಾರಣೆಯನ್ನು ಸೆಪ್ಟೆಂಬರ್ 23ಕ್ಕೆ ಮುಂದೂಡಿದೆ. 

ಚಾಮರಾಜಪೇಟೆ ಮೈದಾನದಲ್ಲಿ 11 ದಿನ ಗಣೇಶೋತ್ಸವಕ್ಕೆ ಕಂದಾಯ ಇಲಾಖೆ ಅನುಮತಿ ನೀಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ಉತ್ಸವ ಆಚರಣೆಗೆ ಪೂರ್ವ ಸಿದ್ಧತೆ ಆರಂಭಗೊಂಡಿದ್ದವು. ಆದ್ರೆ,ಇದಕ್ಕೆ ಕೋರ್ಟ್‌ ಬ್ರೇಕ್ ಹಾಕಿದ್ದು, ಹಿಂದೂ ಸಂಘಟನೆಗಳಿಗೆ ನಿರಾಸೆಯಾಗಿದೆ.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಶರತ್ತುಬದ್ಧ ಅನುಮತಿ ?

ವಕ್ಫ್ ಬೋರ್ಡ್ ಅಧ್ಯಕ್ಷರ ಮೊದಲ ಪ್ರತಿಕ್ರಿಯೆ
ಚಾಮರಾಜಪೇಟೆ ಮೈದಾನಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಬೆನ್ನಲೆ ಬೆಂಗಳೂರಿನಲ್ಲಿ ವಕ್ಫ್ ಬೋರ್ಡ್ ಅಧ್ಯಕ್ಷ ಮೌಲಾನಾ ಮೊಹಮ್ಮದ್ ಶಫಿ ಸಆದಿ ಸುದ್ದಿಗೋಷ್ಠಿ ನಡೆಸಿದ್ದು, ನ್ಯಾಯಾಲಯದ ಆದೇಶ ನಮಗೆ ಸಂತೋಷತಂದಿದೆ. ಚಾಮರಾಜಪೇಟೆಯಲ್ಲಿ ಇರುವುದು ನಮ್ಮ‌ ಈದ್ಗಾ ಮೈದಾನ. ಬಿಬಿಎಂಪಿ ಹಾಗೂ ನಮಗೂ ವ್ಯಾಜ್ಯ ಇತ್ತು. ಈಗಾಗಲೇ ಸುಪ್ರೀಂಕೋರ್ಟ್ ಆದೇಶ ಸಹ ಮಾಡಿತ್ತು. BBMP ಜಂಟಿ ಆಯುಕ್ತ ಸ್ವಲ್ಪ ಎಡವಟ್ಟು ಮಾಡಿಕೊಂಡಿದ್ದಾರೆ. ಮೈದಾನ ಸಂಬಂಧ ಈಗ ನ್ಯಾಯಾಲಯ ಆದೇಶ ಮಾಡಿದೆ ಎಂದರು.

DC ಮೊದಲ ಪ್ರತಿಕ್ರಿಯೆ
ಕೋರ್ಟ್‌ ಆದೇಶದ ಬಗ್ಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀನಿವಾಸ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ವಿಚಾರ ಹೈಕೋರ್ಟ್​ ಆದೇಶದಂತೆ ಯಥಾಸ್ಥಿತಿ ಕಾಪಾಡುತ್ತೇವೆ. ಗಣೇಶೋತ್ಸವ ಸಂಬಂಧ 7 ಸಂಘಟನೆಗಳು ಅರ್ಜಿ ಸಲ್ಲಿಸಿದ್ದವು. ಗಣೇಶೋತ್ಸವ ಮಾಡಬೇಡಿ ಎಂದು 2 ಸಂಘಟನೆ ಅರ್ಜಿ ಸಲ್ಲಿಸಿವೆ. ಹೈಕೋರ್ಟ್ ಆದೇಶ ಸಂಬಂಧ ಸರ್ಕಾರದ ಜತೆ ಚರ್ಚಿಸುತ್ತೇವೆ. ಈದ್ಗಾ ಮೈದಾನ ಸಂಬಂಧ ಹೈಕೋರ್ಟ್ ಆದೇಶ ಪಾಲಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

Latest Videos
Follow Us:
Download App:
  • android
  • ios