ಚಿತ್ರದುರ್ಗ ಶ್ರೀ ಜಗದ್ಗುರು ಮುರುಘರಾಜೇಂದ್ರ ಮಠಕ್ಕೆ ರಾಜ್ಯ ಸರ್ಕಾರದಿಂದ ಆಡಳಿತಾಧಿಕಾರಿ ನೇಮಕ ಮಾಡಿರುವುದನ್ನು ಹೈಕೋರ್ಟ್‌ ರದ್ದುಗೊಳಿಸಿದೆ.

ಬೆಂಗಳೂರು (ಮೇ 22): ಚಿತ್ರದುರ್ಗ ಶ್ರೀ ಜಗದ್ಗುರು ಮುರುಘರಾಜೇಂದ್ರ ಮಠಕ್ಕೆ ರಾಜ್ಯ ಸರ್ಕಾರದಿಂದ ಆಡಳಿತಾಧಿಕಾರಿ ನೇಮಕ ಮಾಡಿರುವುದನ್ನು ಹೈಕೋರ್ಟ್‌ ರದ್ದುಗೊಳಿಸಿದೆ. ಜೊತೆಗೆ, ಸರ್ಕಾರದಿಂದ ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡುವ ಅಧಿಕಾರ ಇಲ್ಲವೆಂದು ಹೈಕೋರ್ಟ್‌ ಆದೇಶ ಹೊರಡಿಸಿದೆ.

ನಾಲ್ಕು ವಾರಗಳು ಮುಂದುವರೆಯಲು ಅವಕಾಶ: ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ರದ್ದು ಪಡಿಸಿದ ಹೈಕೋರ್ಟ್. ಸರ್ಕಾರಕ್ಕೆ ಮಠದ ಆಡಳಿತಾಧಿಕಾರಿ ನೇಮಿಸುವ ಅಧಿಕಾರವಿಲ್ಲವೆಂದು ತೀರ್ಪು ನೀಡಲಾಗಿದೆ. ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ರವರಿದ್ದ ಹೈಕೋರ್ಟ್ ಪೀಠದಿಂದ ತೀರ್ಪು ಹೊರಡಿಸಲಾಗಿದೆ. ವೀರಶೈವ ಮುಖಂಡರು, ಸಮಾಜದ ಪ್ರಮುಖರು ಆಡಳಿತ ನಡೆಸಬಹುದು. ಇನ್ನು 4 ವಾರಗಳ ಕಾಲ ಮಾತ್ರ ಆಡಳಿತಾಧಿಕಾರಿ ಮುಂದುವರಿಯಬಹುದು. 4 ವಾರಗಳ ನಂತರ ಆಡಳಿತಾಧಿಕಾರಿಗೆ ಅಧಿಕಾರವಿಲ್ಲ ಎಂದು ಸ್ಪಷ್ಟವಾಗಿ ಸೂಚನೆ ನೀಡಲಾಗಿದೆ.

Chitradurga: ಮುರುಘಾ ಮಠಕ್ಕೆ ಆಡಳಿತಾಧಿಕಾರಿಯಾಗಿ ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎಸ್. ವಸ್ತ್ರದ್‌ ನೇಮಕ

ಮುರುಘಾ ಶ್ರೀಗಳಿಂದ ರಿಟ್‌ ಅರ್ಜಿ ಸಲ್ಲಿಕೆ: ಮುರುಘಾ ಮಠದ ನಿಯಮಾವಳಿಯಂತೆ ಮಠಾಧಿಪತಿ ಅನುಪಸ್ಥಿತಿಯಲ್ಲಿ ಸಮಾಜದ ಮುಖಂಡರು ಮಾತ್ರ ಮಠದ ಆಡಳಿತವನ್ನು ನಡೆಸಬಹುದು ಎಂದು ಹೈಕೋರ್ಟ್ ಏಕಸದಸ್ಯ ಪೀಠದಿಂದ ಆದೇಶ ನೀಡಲಾಗಿದೆ. ಸರ್ಕಾರದಿಂದ ಮಠಕ್ಕೆ ಸರ್ಕಾರದಿಂದ ನೇಮಕ ಮಾಡಲಾಗಿದ್ದ ಆಡಳಿತಾಧಿಕಾರಿಯನ್ನು ಹಿಂಪಡೆಯುವಂತೆ ಮನವಿ ಮಾಡಲಾಗಿತ್ತು. ಆದರೂ, ಹಿಂಪಡೆಯದ ಹಿನ್ನೆಲೆಯಲ್ಲಿ ಸರ್ಕಾರದ ನೇಮಕದ ವಿರುದ್ಧ ಡಾ. ಶಿವಮೂರ್ತಿ ಮುರುಘಾಶರಣರು ರಿಟ್ ಅರ್ಜಿ ಸಲ್ಲಿಸಿದ್ದರು. ಈ ಮೂಲಕ ಆಡಳಿತಾಧಿಕಾರಿ ನೇಮಿಸುವ ಸರ್ಕಾರದ ಕ್ರಮ ಪ್ರಶ್ನಿಸಿದ್ದರು. ಈಗ ಸರ್ಕಾರಕ್ಕೆ ಮುಖಭಂಗವಾದಂತಾಗಿದೆ.

ಪೋಕ್ಸೋ ನ್ಯಾಯಾಲಯದ ಆದೇಶ ರದ್ದು: ಧಾರ್ಮಿಕ ಸಂಸ್ಥೆ ದುರುಪಯೋಗ ಕಾಯ್ದೆಯನ್ನು ಸದರಿ ಪ್ರಕರಣದಲ್ಲಿ ಜಾರಿಗೊಳಿಸಲಾಗದು ಎಂದು ಹೈಕೋರ್ಟ್ ತಿಳಿಸಿದೆ. ಧಾರ್ಮಿಕ ಸಂಸ್ಥೆ ದುರುಪಯೋಗ ಕಾಯ್ದೆ ಜಾರಿಗೆ ಆದೇಶಿಸಿದ್ದ ಸೆಷನ್ ಪೋಕ್ಸೋ ನ್ಯಾಯಾಲಯ. ಈಗ ಪೋಕ್ಸೋ ನ್ಯಾಯಾಲಯದ ಆದೇಶವನ್ನೂ ಹೈಕೋರ್ಟ್ ರದ್ದುಗೊಳಿಸಿದೆ. 

ಡಿಸೆಂಬರ್‌ 13ರಂದು ಆಡಳಿತಾಧಿಕಾರಿ ನೇಮಕ: ಚಿತ್ರದುರ್ಗ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹತ್ಯಠದ ಪೀಠಾಧಿಪತಿ ಮತ್ತು ಎಸ್.ಜೆ.ಎಂ. ವಿದ್ಯಾಪೀಠದ ಅಧ್ಯಕ್ಷರು ಆಗಿರುವ ಶ್ರೀ ಶಿವಮೂರ್ತಿ ಮುರುಘಾ ಶರಣರು ಸೆ.1 ರಿಂದ ನ್ಯಾಯಾಂಗ ಬಂಧನದಲ್ಲಿ ಇರುವುದರಿಂದ ಸದರಿ ಸಂಸ್ಥೆಯ ನಿರ್ವಹಣೆಯಲ್ಲಿ ಈ ಸಂಸ್ಥೆಯ ದಿನನಿತ್ಯದ ಕಾರ್ಯಚಟುವಟಣೆಗೆ ಹಾಗೂ ಮೇಲುಸ್ತುವಾರಿ ನಡೆಸಲು ಸಾರ್ವಜನಿಕ ಹಿತದೃಷ್ಟಿಯಿಂದ ಮಠದ ಚರ ಸ್ಥಿರ ಆಸ್ತಿಗಳನ್ನು ಸಂರಕ್ಷಣೆ ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಮಠದ ಆಡಳಿತ ಆಸ್ತಿ ಸಂರಕ್ಷಣೆ ಹಿತದೃಷ್ಟಿಯಿಂದ ಹಾಗೂ ಸಂಸ್ಥೆಯ ಹಣ ದುರುಪಯೋಗ ಆಗದಂತೆ ಲೆಕ್ಕಪತ್ರಗಳನ್ನು ನಿರ್ವಹಿಸುವ ಹಾಗೂ ಒಟ್ಟಾರೆ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ನಡೆಸುವ ಹಿತದೃಷ್ಟಿಯಿಂದ ಪಿ.ಎಸ್.ವಸ್ತ್ರದ್ ಐ.ಎ.ಎಸ್ (ನಿವೃತ್ತರು) ಇವರನ್ನು ಟ್ರಸ್ಟ್ ಮತ್ತು ಶಿಕ್ಷಣ ಸಂಸ್ಥೆಗೆ 'ಆಡಳಿತಾಧಿಕಾರಿ'ಯನ್ನಾಗಿ ನೇಮಿಸಿ ಆದೇಶಿಸಿದೆ.

Murugha Mutt Administrator : ಮುರುಘಾಮಠ ಆಡಳಿತಾಧಿಕಾರಿ ನೇಮಕಕ್ಕೆ ಮಠಾಧೀಶರ ವಿರೋಧ

ಸಾರ್ವಜನಿಕ ಆಸ್ತಿ ರಕ್ಷಣೆಗಾಗಿ ಆಡಳಿತಾಧಿಕಾರಿ ನೇಮಕ: ರಾಜ್ಯದ ಅಡ್ವಕೇಟ್ ಜನರಲ್ ಹಾಗೂ ಚಿತ್ರದುರ್ಗ ಜಿಲ್ಲಾಧಿಕಾರಿಗಳ ವರದಿ ಹಾಗೂ ದಾಖಲಾತಿಗಳನ್ನು ಪರಿಶೀಲಿಸಿ, ಸಾರ್ವಜನಿಕ ಹಿತಾಸಕ್ತಿಗೆ ದಕ್ಕೆಯಾಗುವ ಸಂಭವವಿರುವುದರಿಂದ ಮಠದ ಆಡಳಿತದಲ್ಲಿ ಅವ್ಯವಹಾರ ಹಾಗೂ ಹಣಕಾಸಿನ ದುರುಪಯೋಗ ಹಾಗೂ ಆಸ್ತಿಗಳ ಪರಬಾರೆ ಹಿನ್ನೆಲೆಯಲ್ಲಿ ಆಡಳಿತಾಧಿಕಾರಿಯನ್ನು ನೇಮಿಸುವುದು ಅವಶ್ಯಕವೆಂದು ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎಸ್. ವಸ್ತ್ರದ್‌ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಲಾಗಿತ್ತು.