ಮಹಿಳೆ ಎಂ​ದ ಮಾತ್ರಕ್ಕೆ ​ಬೇಲ್‌ ಕೊಡಲು ಆಗಲ್ಲ: ಹೈಕೋರ್ಟ್‌

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಕಾರಣಕ್ಕೆ ಕುತ್ತಿಗೆ ಸೀಳಿ ಪತಿಯನ್ನು ಕೊಲೆಗೈದ ಮಹಿಳೆಗೆ ಜಾಮೀನು ನೀಡಲು ನಿರಾಕರಿಸಿದ ಹೈಕೋರ್ಟ್‌, ಮಹಿಳೆ ಎಂಬ ಕಾರಣಕ್ಕಾಗಿ ಜಾಮೀನು ಮಂಜೂರಾತಿಗೆ ಪರಿಗಣಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.

karnataka high court denies bail to accused who had killed husband for her illicit relationship gvd

ಬೆಂಗಳೂರು (ಜು.05): ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಕಾರಣಕ್ಕೆ ಕುತ್ತಿಗೆ ಸೀಳಿ ಪತಿಯನ್ನು ಕೊಲೆಗೈದ ಮಹಿಳೆಗೆ ಜಾಮೀನು ನೀಡಲು ನಿರಾಕರಿಸಿದ ಹೈಕೋರ್ಟ್‌, ಮಹಿಳೆ ಎಂಬ ಕಾರಣಕ್ಕಾಗಿ ಜಾಮೀನು ಮಂಜೂರಾತಿಗೆ ಪರಿಗಣಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಪತಿಯ ಕೊಲೆ ಪ್ರಕರಣದ ಆರೋಪಿಯಾದ ಡಿಲ್ಲಿ ರಾಣಿ ಎಂಬುವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿ ಮೊಹಮ್ಮದ್‌ ನವಾಜ್‌ ಅವರ ಏಕ ಸದಸ್ಯ ಪೀಠ ಈ ಆದೇಶ ಮಾಡಿದೆ.

ಆರೋಪಿ ಡಿಲ್ಲಿ ರಾಣಿ ಮಹಿಳೆಯಾಗಿದ್ದು, ಜಾಮೀನು ನೀಡಬೇಕು ಎಂಬ ಆಕೆಯ ಪರ ವಕೀಲರ ವಾದ ತಿರಸ್ಕರಿಸಿದ ಹೈಕೋರ್ಟ್‌, ಡಿಲ್ಲಿ ರಾಣಿ ಸಹ ಘಟನೆಯಲ್ಲಿ ಗಾಯಗೊಂಡಿರುವ ಕಾರಣ ಆಕೆ ಅಮಾಯಕಳಾಗಿದ್ದಾರೆ ಎಂಬ ವಕೀಲರು ವಾದ ಒಪ್ಪಲಾಗದು. ಅರ್ಜಿದಾರೆ ಹಾಗೂ ಆಕೆಯ ಅಪ್ರಾಪ್ತ ಮಕ್ಕಳಿಬ್ಬರು ನೆಲೆಸಿದ್ದ ಮನೆಯಲ್ಲಿ ಪತಿ ಶಂಕರರೆಡ್ಡಿ ಕೊಲೆಯಾಗಿದ್ದಾರೆ. ಪ್ರಕರಣದ ಎರಡನೇ ಆರೋಪಿನೊಂದಿಗೆ (ಪ್ರಿಯಕರ) ಡಿಲ್ಲಿ ರಾಣಿ ಅಕ್ರಮ ಸಂಬಂಧ ಹೊಂದಿರುವುದನ್ನು ಘಟನೆಯ ಮೂವರ ಸಾಕ್ಷಿಗಳ ಹೇಳಿಕೆ ಸ್ಪಷ್ಟಪಡಿಸುತ್ತದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಕಾರಣಕ್ಕೆ ಪತಿ ಶಂಕರರೆಡ್ಡಿಯನ್ನು ಕೊಲೆ ಮಾಡಲಾಗಿದೆ ಎಂದು ನ್ಯಾಯಪೀಠ ಹೇಳಿದೆ.

ಪ್ರತಿಪಕ್ಷ ನಾಯಕ, ಅಧ್ಯಕ್ಷ ಬಿಜೆಪಿ ಕಸರತ್ತು: ಅಭಿಪ್ರಾಯ ಪಡೆದು ವೀಕ್ಷಕರು ದಿಲ್ಲಿಗೆ ವಾಪಸ್‌

ಡಿಲ್ಲಿರಾಣಿ ಮತ್ತು ಆರ್‌.ಶಂಕರರೆಡ್ಡಿ ದಂಪತಿಗೆ ಇಬ್ಬರು ಮಕ್ಕಳಿದ್ದರು. ಶಂಕರರೆಡ್ಡಿ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದು. ಡಿಲ್ಲಿರಾಣಿ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ಆಂಧ್ರಪ್ರದೇಶದಲ್ಲಿ ವಾಸವಾಗಿದ್ದರು. ಅಲ್ಲಿ ಮತ್ತೊಬ್ಬ ವ್ಯಕ್ತಿಯೊಂದಿಗೆ ಡಿಲ್ಲಿರಾಣಿ ಅಕ್ರಮ ಸಂಬಂಧ ಬೆಳೆಸಿಕೊಂಡಿದ್ದರು. ನಂತರ ಮಕ್ಕಳಿಗೆ ಶಿಕ್ಷಣ ಕೊಡಿಸಲು ಬೆಂಗಳೂರಿಗೆ ಕುಟುಂಬವನ್ನು ಶಂಕರರೆಡ್ಡಿ ಬೆಂಗಳೂರಿಗೆ ಕರೆತಂದಿದ್ದರು.

ಗ್ಯಾರಂಟಿಗೆ ಬಿಜೆಪಿ ಹೋರಾಟ: ಬಿಎಸ್‌ವೈ ನೇತೃತ್ವದಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರತಿಭಟನೆ

ಅಕ್ರಮ ಸಂಬಂಧ ಮುಂದುವರಿಸಲು ಅಡ್ಡಿಯಾಗುತ್ತಾರೆ ಎಂಬ ಕಾರಣಕ್ಕೆ ಡಿಲ್ಲಿರಾಣಿ ಮತ್ತು ಪ್ರಿಯಕರ ಶಂಕರ ರೆಡ್ಡಿಯನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು. 2022ರ ಫೆ.24ರಂದು ಮಕ್ಕಳೊಂದಿಗೆ ಡಿಲ್ಲಿ ರಾಣಿ ಬೆಂಗಳೂರಿಗೆ ಬಂದು, ಪತಿಯೊಂದಿಗೆ ಯಶವಂತಪುರದ ಮೋಹನಕುಮಾರ ನಗರದಲ್ಲಿ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದರು. ಸಂಚಿನ ಪ್ರಕಾರ ಡಿಲ್ಲಿರಾಣಿ, ಫೆ.24ರಂದು ರಾತ್ರಿ 11.30 ಗಂಟೆ ವೇಳೆ ಮನೆಯಲ್ಲಿ ನಿದ್ರಿಸುತ್ತಿದ್ದ ಶಂಕರರೆಡ್ಡಿಯ ಕುತ್ತಿಗೆಯನ್ನು ಚಾಕುವಿನಿಂದ ಕೊಯ್ದು ಕೊಲೆ ಮಾಡಿದ್ದಳು. ಅದೇ ಚಾಕುವಿನಿಂದ ಕೈಗಳ ಮೇಲೆ ಗಾಯ ಮಾಡಿಕೊಂಡಿದ್ದಳು. ಜತೆಗೆ, ಮಾಂಗಲ್ಯ ಸರ, ಕಿವಿಯೋಲೆಯನ್ನು ಬಚ್ಚಿಟ್ಟಿದ್ದಳು. ಆ ಮೂಲಕ ದರೋಡೆ ಮತ್ತು ಕೊಲೆ ಎಂಬುದಾಗಿ ಬಿಂಬಿಸಲು ಪ್ರಯತ್ನಿಸಿದ್ದಳು.

Latest Videos
Follow Us:
Download App:
  • android
  • ios