ಶಾಸಕ ಎಸ್.ಆರ್. ವಿಶ್ವನಾಥ್ ಅವರನ್ನು ಬಿಡಿಎ ಅಧ್ಯಕ್ಷರನ್ನಾಗಿ ಮಾಡಿರುವ ನೇಮಕಾತಿಯನ್ನು ರದ್ದುಪಡಿಸುವಂತೆ ಸಲ್ಲಿಸಲಾಗಿದ್ದ ಪಿಐಎಲ್ ಅನ್ನು ಕೋರ್ಟ್ ಇತ್ಯಾರ್ಥಗೊಳಿಸಿದೆ.
ಬೆಂಗಳೂರು, (ಸೆಪ್ಟೆಂಬರ್.03): ಲಾಭದಾಯಕವಾದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷ ಹುದ್ದೆ ಹೊಂದಿರುವ ಹಿನ್ನೆಲೆಯಲ್ಲಿ ಎಸ್.ಆರ್.ವಿಶ್ವನಾಥ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿ ಕುರಿತು ಕರ್ನಾಟಕ ಕೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.
ಶಾಸಕ ಎಸ್.ಆರ್. ವಿಶ್ವನಾಥ್ ಅವರ ಬಿಡಿಎ ಅಧ್ಯಕ್ಷ ನೇಮಕಾತಿ ರದ್ದುಪಡಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿ ತೀರ್ಪು ನೀಡಿದೆ. ಬದಲಿಗೆ ಬಿಡಿಎ ಅಧ್ಯಕ್ಷ, ಸದಸ್ಯರ ನೇಮಕಕ್ಕೆ ನಿಯಮ ರೂಪಿಸಿ ಎಂದು ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ. ಇದರೊಂದಿಗೆ ಶಾಸಕ ಎಸ್.ಆರ್. ವಿಶ್ವನಾಥ್‌ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಇನ್ನು ಶಾಸಕರಾಗಿ ಲಾಭದಾಯಕ ಹುದ್ದೆ ಹೊಂದಿದ ಆರೋಪಿಸಿ ಶಾಸಕ ಸ್ಥಾನದಿಂದ ಎಸ್.ಆರ್.ವಿಶ್ವನಾಥ್ ಅವರನ್ನು ಅನರ್ಹ ಕೋರಿಕೆಗೆ ಬಗ್ಗೆ ಸಹ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಲಾಭದಾಯಕ ಹುದ್ದೆ: ಬಿಜೆಪಿ ಶಾಸಕ ವಿಶ್ವನಾಥ್‌ಗೆ ಹೈಕೋರ್ಟ್ ನೋಟಿಸ್
ಅರ್ಜಿದಾರರ ಮನವಿ ರಾಜ್ಯಪಾಲರ ಪರಿಶೀಲನೆಯಲ್ಲಿದೆ. ರಾಜ್ಯಪಾಲರ ಕಚೇರಿಗೆ ನಿರ್ದೇಶನ ಸಾಧ್ಯವಿಲ್ಲ ಎಂದು ಹಂಗಾಮಿ ಸಿಜೆ ಅಲೋಕ್ ಅರಾಧೆ, ನ್ಯಾ.ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ಆದೇಶ ಹೊರಡಿಸಿದೆ.
ವಿಶ್ವನಾಥ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿ ಕುರಿ ತುಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ವಕೀಲ ಎ.ಎಸ್.ಹರೀಶ್ ಸಲ್ಲಿಸಿದ್ದ ಪಿಐಎಲ್ ಇತ್ಯರ್ಥವಾದಂತಾಗಿದ್ದು, ಶಾಸಕ ಎಸ್.ಆರ್. ವಿಶ್ವನಾಥ್‌ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಅರ್ಜಿದಾರರ ಪರ ವಕೀಲರ ವಾದ:
ಕಾನೂನು ಪ್ರಕಾರ ಶಾಸಕರು ಸರ್ಕಾರದ ಅಧೀನ ಸಂಸ್ಥೆಗೆ ಸಂಬಂಧಿಸಿದ ಸಮಿತಿಯಲ್ಲಿ ಅಧ್ಯಕ್ಷರಾಗಿರಬಹುದು. ಆದರೆ, ಬಿಡಿಎ ಸಮಿತಿಯಲ್ಲ. ಅದೊಂದು ಶಾಸನಾತ್ಮಕವಾಗಿ ರಚಿಸಲ್ಪಟ್ಟಿರುವ ಪ್ರಾಧಿಕಾರವಾಗಿದ್ದು, ಅದಕ್ಕೆ ಅಧ್ಯಕ್ಷರಾಗಿ ಶಾಸಕ ಎಸ್.ಆರ್. ವಿಶ್ವನಾಥ್ ನೇಮಕಗೊಂಡು ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಆ ಅಧ್ಯಕ್ಷ ಹುದ್ದೆಗೆ ವೇತನ ಪಡೆಯುತ್ತಿದ್ದಾರೆ. ಈ ವಿಚಾರವನ್ನು ನ್ಯಾಯಾಲಯಕ್ಕೆ ಶಾಸಕರೇ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ ಎಂದರು. ಅಲ್ಲದೆ, ಎಸ್.ಆರ್. ವಿಶ್ವನಾಥ್ ಅವರು ಲಾಭದಾಯಕ ಹುದ್ದೆ ಹೊಂದಿದ್ದು, ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೋರಿದ್ದರು.
ಪ್ರಕರಣದ ಹಿನ್ನೆಲೆ:
ಯಲಹಂಕ ಬಿಜೆಪಿ ಶಾಸಕ ಎಸ್. ಆರ್. ವಿಶ್ವನಾಥ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಲಾಭದಾಯಕ ಹುದ್ದೆ ಹೊಂದಿದ್ದಾರೆಂದು ಆರೋಪಿಸಲಾಗಿತ್ತು. ಅಲ್ಲದೇ, ಅದೇ ಆಧಾರದ ಮೇಲೆ ವಿಶ್ವನಾಥ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕೋರಿ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.
