43 ಕ್ರಿಮಿನಲ್ ಕೇಸ್‌ಗಳನ್ನು ವಾಪಸ್ ಪಡೆಯುವ ರಾಜ್ಯ ಸರ್ಕಾರದ ನಿರ್ಧಾರವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಗಿರೀಶ್ ಭಾರದ್ವಾಜ್ ಸಲ್ಲಿಸಿದ್ದ ಪಿಐಎಲ್‌ಗೆ ಸ್ಪಂದಿಸಿದ ನ್ಯಾಯಾಲಯ, ಸರ್ಕಾರದ ಆದೇಶವನ್ನು ಕಾನೂನುಬಾಹಿರ ಎಂದು ಘೋಷಿಸಿದೆ.
ಬೆಂಗಳೂರು (ಮೇ.29): ಹುಬ್ಬಳ್ಳಿ ಗಲಭೆ ಸೇರಿ 43 ಕ್ರಿಮಿನಲ್ ಕೇಸ್‌ಗಳನ್ನು ವಾಪಾಸ್ ಪಡೆದಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು ಮಾತ್ರವಲ್ಲದೆ, ಸರ್ಕಾರದ ಆದೇಶವನ್ನೂ ರದ್ದು ಮಾಡಿದೆ.
43 ಕ್ರಿಮಿನಲ್ ಕೇಸ್ ಹಿಂಪಡೆಯುವ ಸರ್ಕಾರದ ಕ್ರಮಕ್ಕೆ ಭಾರೀ ಹಿನ್ನಡೆಯಲಾಗಿದ್ದು, ಕಳೆದ ವರ್ಷ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಸಿಜೆ ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅರವಿಂದ್ ಅವರಿದ್ದ ಪೀಠ ರದ್ದು ಮಾಡಿದೆ.
ಸರ್ಕಾರದ ಕ್ರಮ ಪ್ರಶ್ನಿಸಿ ಗಿರೀಶ್ ಭಾರದ್ವಾಜ್ ಪಿಐಎಲ್ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಹೈಕೋರ್ಟ್ ಈ ಆದೇಶ ನೀಡಿದೆ. ರಾಜ್ಯದ ವಿವಿಧ ಸಂಘಟನೆಗಳ ಹೋರಾಟಗಾರರು, ರಾಜಕಾರಣಿಗಳು ಹಾಗೂ ಅತ್ಯಂತ ಪ್ರಭಾವಿಗಳ ವಿರುದ್ಧದ ಈ ಕೇಸ್‌ಗಳನ್ನು ದಾಖಲು ಮಾಡಲಾಗಿತ್ತು. ಅದರೊಂದಿಗೆ ವಿವಿಧ ಗಲಭೆಗಳಲ್ಲಿ ಭಾಗಿಯಾದ ಪುಢಾರಿಗಳ ವಿರುದ್ಧವೂ ಹಾಕಿದ್ದ ಕೇಸ್‌ಗಳಿದ್ದವು.
ಇಂಥ 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ನಿರ್ಧಾರ ಮಾಡಿದ್ದ ಸರ್ಕಾರವು 2024ರ ಅ.10ರಂದು ಆದೇಶ ಹೊರಡಿಸಿತ್ತು. ರಾಜ್ಯ ಸರ್ಕಾರದ ಆದೇಶವನ್ನೇ ಈಗ ಹೈಕೋರ್ಟ್ ರದ್ದು ಮಾಡಿದೆ.
ಸರ್ಕಾರದ ಆದೇಶ ಪ್ರಶ್ನಿಸಿ ವಕೀಲ ಗಿರೀಶ್ ಭಾರದ್ವಾಜ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಪಿಐಎಲ್ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ಪುರಸ್ಕರಿಸಿದೆ. ಸರ್ಕಾರದ ಆದೇಶ ಕಾನೂನು ಬಾಹಿರ ಎಂದು ರ್ಟ್ ತಿಳಿಸಿದೆ.
ಈ ಬಗ್ಗೆ ಮಾತನಾಡಿರುವ ಛಲವಾದಿ ನಾರಾಯಣಸ್ವಾಮಿ, ಇವರಿಗೆ ವೋಟ್ ಬ್ಯಾಂಕ್ ಇದಲ್ಲಿ ಕೇಸ್ ವಾಪಸ್ ಪಡೆಯುತ್ತಾರೆ. ಪ್ರಿಯಾಂಕ್ ಖರ್ಗೆಯನ್ನು ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡುತ್ತಿದ್ದಾರೆ. ಅವರಿಗೆ ಆಗದವರ ಮೇಲೆ ಕೇಸ್ ಹಾಕೋದು. ಅಟ್ರಾಸಿಟಿ ಹಾಕೋದು. ಈ ಸರ್ಕಾರ ತಪ್ಪು ಸರಿ ಮಾಡ್ಕೊಬೇಕು. ನಮಗೆ ಜನರೇ ಜಡ್ಜ್ ಎಂದು ಹೇಳಿದ್ದಾರೆ.
