ಮಸೀದಿಯೊಳಗೆ ಜೈಶ್ರೀರಾಮ್ ಘೋಷಣೆ ಕೂಗಿದ್ರೆ ಧಾರ್ಮಿಕ ಭಾವನೆ ಹೇಗೆ ಕೆರಳುತ್ತೆ? ಹೈಕೋರ್ಟ್ ಪ್ರಶ್ನೆ

ಮಸೀದಿಯೊಳಗೆ 'ಜೈ ಶ್ರೀರಾಮ್' ಘೋಷಣೆ ಕೂಗುವುದರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. 

Karnataka highcourt quashes case against 2 men accused of shouting jai sriram in mosque rav

ಬೆಂಗಳೂರು (ಅ.15): ಮಸೀದಿಯೊಳಗೆ 'ಜೈ ಶ್ರೀರಾಮ್' ಘೋಷಣೆ ಕೂಗುವುದರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. 

ಮಸೀದಿಯಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆಂಬ ಆರೋಪದ ಮೇಲೆ  ಇಬ್ಬರು ವ್ಯಕ್ತಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 295 ಎ ಅಡಿ ದಾಖಲಾಗಿದ್ದ ಪ್ರಕರಣವನ್ನು ವಜಾಗೊಳಿಸಿದೆ. 'ಜೈಶ್ರೀರಾಮ್' ಘೋಷಣೆ ಕೂಗುವುದರಿಂದ ಧಾರ್ಮಿಕ ಭಾವನೆ ಹೇಗೆ ಕೆರಳಿಸುತ್ತದೆ ಎಂದು ಕೋರ್ಟ್ ಪ್ರಶ್ನಿಸಿದೆ. ಘಟನೆ ನಡೆದ ಪ್ರದೇಶದಲ್ಲಿ ಹಿಂದೂಗಳು ಮತ್ತು ಮುಸ್ಲಿಮರು ಸೌಹಾರ್ದತೆಯಿಂದ ಬದುಕುತ್ತಿದ್ದಾರೆ ಎಂದು ಪ್ರಕರಣದ ದೂರುದಾರರು ಒಪ್ಪಿಕೊಂಡಿರುವುದನ್ನು ಗಮನಿಸಿದ ನಂತರ ಹೈಕೋರ್ಟ್ ಈ ತೀರ್ಪು ನೀಡಿದೆ.

ಘಟನೆ ಹಿನ್ನೆಲೆ: ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀರಾಮ ಘೋಷಣೆ ಕೂಗಿದ ಕಿಡಿಗೇಡಿಗಳು!

ಆಪಾದಿತ ಅಪರಾಧಗಳ ಅಗತ್ಯ ಅಂಶಗಳು ಅಸ್ತಿತ್ವದಲ್ಲಿಲ್ಲದ ಕಾರಣ, ಆರೋಪಿಗಳ ವಿರುದ್ಧದ ಪ್ರಕ್ರಿಯೆಗೆ ಅವಕಾಶ ನೀಡುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗುತ್ತದೆ ಎಂದು ಅದು ಗಮನಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ. ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 447 (ಕ್ರಿಮಿನಲ್ ಅತಿಕ್ರಮಣಕ್ಕೆ ಶಿಕ್ಷೆ), 505 (ಸಾರ್ವಜನಿಕ ಘರ್ಷಣೆಗೆ ಕಾರಣವಾಗುವ ಹೇಳಿಕೆಗಳು), 506 (ಅಪರಾಧ ಬೆದರಿಕೆಗೆ ಶಿಕ್ಷೆ), 34 (ಸಾಮಾನ್ಯ ಉದ್ದೇಶ) ಮತ್ತು 295A ಸೇರಿದಂತೆ ಹಲವು ವಿಭಾಗಗಳ ಅಡಿಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. .

24 ಸೆಪ್ಟೆಂಬರ್ 2023 ರಂದು ರಾತ್ರಿ 10.50 ರ ಸುಮಾರಿಗೆ ಅಪರಿಚಿತ ವ್ಯಕ್ತಿಗಳು ಮಸೀದಿಗೆ ಪ್ರವೇಶಿಸಿ, 'ಜೈ ಶ್ರೀರಾಮ್' ಎಂದು ಕೂಗಿ ಮತ್ತು ಸಮುದಾಯದ ವಿರುದ್ಧ ಬೆದರಿಕೆ ಹಾಕಿ ಅಲ್ಲಿಂದ ಪರಾರಿಯಾಗಿದ್ದರು. ಆರಂಭಿಕ ದೂರಿನಲ್ಲಿ ಅಪರಿಚಿತ ವ್ಯಕ್ತಿಗಳ ಹೆಸರಿದ್ದರೂ, ನಂತರ ತನಿಖೆಯ ಸಮಯದಲ್ಲಿ  ಅರ್ಜಿದಾರರನ್ನು ಆರೋಪಿಗಳಾಗಿ ಸೇರಿಸಲಾಯಿತು. ಆರೋಪ ರದ್ದು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

Latest Videos
Follow Us:
Download App:
  • android
  • ios