ಹಿಜಾಬ್ ನಿಷೇಧ ವಾಪಸ್ ಪಡೆದರೆ, ಕೇಸರಿ ಶಾಲು ಹಾಕಲು ಹಿಂದೂ ಯುವಕರಿಗೆ ನಾವೇ ಕರೆ ನೀಡ್ತೇವೆ : ಎಂಪಿ ರೇಣುಕಾಚಾರ್ಯ
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಇಲ್ಲ. ಟಿಪ್ಪು ಸುಲ್ತಾನ್ ನೇತೃತ್ವದ ತುಘಲಕ್ ಸರ್ಕಾರ ಇದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದರು.
ದಾವಣಗೆರೆ (ಡಿ.23): ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಇಲ್ಲ. ಟಿಪ್ಪು ಸುಲ್ತಾನ್ ನೇತೃತ್ವದ ತುಘಲಕ್ ಸರ್ಕಾರ ಇದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದರು.
ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆಂಬ ಸಿಎಂ ಸಿದ್ದರಾಮಯ್ಯರ ಹೇಳಿಕೆ ಸಂಬಂಧ ಇಂದು ದಾವಣಗೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ 13 ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ, ಅನುಭವಿ ಇದ್ದಾರೆ. ಇಂಥವರು ಹಿಜಾಬ್ ಸರ್ಕಾರಿ ಅದೇಶ ವಾಪಸ್ ಪಡಿತೀವಿ ಅಂತಿದ್ದಾರೆ. ಹಿಜಾಬ್ ಅದೇಶ ವಾಪಸ್ ಪಡೆದರೆ ಹೋರಾಟ ಮಾಡ್ತೇವೆ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 6 ತಿಂಗಳಿಂದ ಬರೀ ವಿವಾದ ಮಾಡಿದ್ದೆ ಆಯ್ತು: ಮಾಜಿ ಸ್ಪೀಕರ್ ಕೆಜಿ ಬೋಪಯ್ಯ ಕಿಡಿ
ಸಿಎಂ ಸಿದ್ದರಾಮಯ್ಯ ಊಟ ನಮ್ಮ ಹಕ್ಕು, ಬಟ್ಟೆ ನಮ್ಮ ಹಕ್ಕು ಅಂತಾರೆ. ಆದರೆ ಎಲ್‌ಕೆಜಿಯಿಂದ ಕಾಲೇಜುವರೆಗೂ ಸಮವಸ್ತ್ರ ಕಡ್ಡಾಯ ಮಾಡಲಾಗಿದೆ ಎಂಬುದು ಗೊತ್ತಿಲ್ವಾ? 2021 ರಲ್ಲಿ ಉಡುಪಿ ಪಿಯು ಕಾಲೇಜು ವಿದ್ಯಾರ್ಥಿನಿಯರು ಮೊದಲಿಗೆ ಹಿಜಾಬ್ ಮುನ್ನಲೆಗೆ ತಂದಿದ್ದರು. ಅಂದು ರಾಜ್ಯದಲ್ಲಿ ದೊಡ್ಡ ಘಟನೆ ನಡೆದು ಹೋಯ್ತು. ಮುಸ್ಲಿಮರಿಗೆ ಹಿಜಾಬ್ ಗೆ ಅವಕಾಶ ನೀಡಿದ್ರೆ ಹಿಂದೂ ಯುವಕ, ಯುವತಿಯರಿಗೂ ಕೇಸರಿ ಶಾಲು ಹಾಕಲು ಅವಕಾಶ ನೀಡಬೇಕು. ಅಂದಿನ ರಾಜ್ಯ ಸರ್ಕಾರದ ಅದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಹಿಜಾಬ್ ವಾಪಸ್ ಪಡೆದರೆ ಹಿಂದೂ ಯುವಕರಿಗೆ ಕೇಸರಿ ಶಾಲು ಹಾಕಿಕೊಳ್ಳಲು ನಾವೇ ಕರೆ ನೀಡುತ್ತೇವೆ ಎಂದರು. ಇದೇ ವೇಳೆ ಜಮೀರ್ ಅಹ್ಮದ್ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು .ಮಹಮ್ಮದ್ ಬಿನ್ ತುಘಲಕ್ ಎಂಬ ಹುಚ್ಚು ದೊರೆ ರೀತಿ ಆಡ್ತಿದ್ದಾರೆ; ಸಿಎಂ ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ವಾಗ್ದಾಳಿ