ಎಲ್ಲೆಡೆ ವಕ್ಕರಿಸಿ ತನ್ನ ಅಟ್ಟಹಾಸ ಮೆರೆಯುತ್ತಿರುವ ಕೊರೋನಾ ಮಹಾಮಾರಿ ಇದೀಗ ಗೃಹ ಸಚಿವರಿಗೂ ಕಾಡಿದೆ. ಸಚಿವ ಎಸ್ ಆರ್ ಬೊಮ್ಮಯಿ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ.

ಬೆಂಗಳೂರು (ಸೆ.16): ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ದೆಹಲಿ ಪ್ರವಾಸಕ್ಕೆ ತೆರಳಬೇಕಿದ್ದ ಗೃಹ ಸಚಿವ ಎಸ್ ಆರ್ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್ ಬಂದಿದೆ. 

Add Asianetnews Kannada as a Preferred SourcegooglePreferred

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಬೊಮ್ಮಾಯಿ ,ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಹುಡುಗನಿಗೆ ಕೋವಿಡ್ ಪಾಸಿಟಿವ್ ಬಂದಿದ್ದು ನಾನು ಸಹ ಪರೀಕ್ಷೆಗೆ ಒಳಪಟ್ಟದ್ದೇನೆ. ಯಾವುದೇ ಲಕ್ಷಣಗಳಿಲ್ಲದೇ ಪಾಸಿಟಿಬ್ ಬಂದಿದೆ. ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ ಎಂದು ಹೇಳಿದ್ದಾರೆ.

ಕರ್ನಾಟಕದ 30 ಜಿಲ್ಲೆಗಳಲ್ಲೂ ಕೊರೋನಾ: ಇಲ್ಲಿದೆ ಮಂಗಳವಾರದ ಅಂಕಿ-ಸಂಖ್ಯೆ .

ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಪರೀಕ್ಷೆಗೆ ಒಳಪಡುವಂತೆ ಹಾಗೂ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದು ಹೇಳಿದ್ದಾರೆ.

ಕಳೆದ ಹಲವು ದಿನಗಳಿಂದ ಕೇಳಿಬರುತ್ತಿದ್ದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ದೆಹಲಿ ಪ್ರವಾಸಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ನಾಳೆ (ಸೆ.17)ರಂದು ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಸಾಕಷ್ಟು ಕುತೂಹಲ ಸೃಷ್ಟಿಸಿರುವ ಈ ಭೇಟಿ ವೇಳೆ ಹಲವು ವಿಚಾರಗಳು ಚರ್ಚೆಗೆ ಬರಲಿವೆ. ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಭೇಟಿ ಮಾಡುವ ಸಾಧ್ಯತೆ ಇದೆ.