ಬೆಂಗಳೂರಿಗೆ ತಂದಿರೋದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ: ಗೃಹ ಸಚಿವ ಪರಮೇಶ್ವರ ಸ್ಪಷ್ಟನೆ
ರಾಜಸ್ಥಾನದಿಂದ ಬೆಂಗಳೂರಿಗೆ ತರಲಾದ ಮಾಂಸ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗಿದೆ. ಅದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ ಎಂದು ವರದಿ ಬಂದಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದರು.
ದಾವಣಗೆರೆ (ಜು.28): ರಾಜಸ್ಥಾನದಿಂದ ಬೆಂಗಳೂರಿಗೆ ತರಲಾದ ಮಾಂಸ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗಿದೆ. ಅದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ ಎಂದು ವರದಿ ಬಂದಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದರು.
ಬೆಂಗಳೂರಲ್ಲಿ ಮಟನ್ ಜೊತೆಗೆ ನಾಯಿ ಮಾಂಸ ಬೆರಕೆ ಮಾಡಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ವಾರಕ್ಕೊಮ್ಮೆ , 15 ದಿವಸಕ್ಕೊಮ್ಮೆ ರಾಜಸ್ಥಾನದಿಂದ ಮಾಂಸ ತಂದು ಮಾರಾಟ ಮಾಡುವುದು ಅವರ ವೃತ್ತಿ. ಆದರೆ ಅವರ ವಿರುದ್ಧ ಅನವಶ್ಯಕ, ದುರುದ್ದೇಶದಿಂದ ದೂರು ನೀಡಲಾಗಿದೆ. ಬೆಂಗಳೂರಿಗೆ ತಂದಿರುವುದು ನಾಯಿ ಮಾಂಸ ಅಲ್ಲ ಅದು ಮೇಕೆ ಮಾಂಸ ಎನ್ನುವುದು ವರದಿಯಲ್ಲಿ ದೃಢಪಟ್ಟಿದೆ ಎಂದರು.
ಇನ್ನು ಮುಡಾ ಹಗರಣ ವಿರುದ್ಧ ಬಿಜೆಪಿ ಪಾದಯಾತ್ರೆ ಮಾಡುತ್ತಿರುವ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಸಚಿವರು, ನಾವು ಮಾಡಿದ್ದ ಪಾದಯಾತ್ರೆ ರಾಜ್ಯದ ಸಂಪತ್ತು ಹಾಳಾಗುತ್ತಿದೆ, ಲೂಟಿ ಆಗುತ್ತಿದೆ ಎಂದು. ಆದರೆ ಬಿಜೆಪಿಯವರು ಮಾಡುತ್ತಿರುವ ಪಾದಯಾತ್ರೆ ಮಾಡುತ್ತಿರುವುದು ಅನವಶ್ಯಕ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮೇಲೆ ಅನವಶ್ಯಕ ಆರೋಪವನ್ನು ಮಾಡಿ ಪಾದಯಾತ್ರೆ ಮಾಡುತ್ತಿದ್ದಾರೆ. ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆ ಆಗಿಲ್ಲ, ಕಾನೂನು ಉಲ್ಲಂಘನೆ ಆಗಿಲ್ಲದಿದ್ದರೂ ಆಗಿದೆ ಎಂದು ಬಿಜೆಪಿಯವರು ಬಿಂಬಿಸಲು ಹೊರಟಿದ್ದಾರೆ. ಹೀಗಾಗಿ ನಾವು ರಾಜ್ಯದ ಜನರಿಗೆ ಸತ್ಯ ತಿಳಿಸುವ ಪ್ರಯತ್ನ ಮಾಡುತ್ತೇವೆ. ಅದಕ್ಕಾಗಿ ಮುಖ್ಯಮಂತ್ರಿ ಗಳು ಒಂದು ಕಮಿಷನ್ ನೇಮಕ ಮಾಡಿದ್ದಾರೆ. ಮುಖ್ಯಮಂತ್ರಿಗಳು ಯಾವುದೇ ತಪ್ಪು ಮಾಡಿಲ್ಲ, ಯಾವುದೇ ಕಾನೂನು ಬಾಹಿರ ಕೆಲಸವೂ ಆಗಿಲ್ಲ ಎಂದರು.
ಬೆಂಗಳೂರಲ್ಲಿ ನಾಯಿ ಮಾಂಸ ಮಾರಾಟ ಪ್ರಕರಣ: ಸ್ಟೇಷನ್ ಬೇಲ್ ಮೇಲೆ ಪುನೀತ್ ಕೆರೆಹಳ್ಳಿ ಬಿಡುಗಡೆ?
ಇನ್ನು ವಾಲ್ಮೀಕಿ ಹಗರಣವನ್ನು ನಾವು ಜಸ್ಟಿಪೈ ಮಾಡುತ್ತಿಲ್ಲ. ವಾಲ್ಮೀಕಿ ಹಗರಣದ ಬಗ್ಗೆ ಎಸ್‌ಐಟಿ, ಸಿಬಿಐ ತನಿಖೆಯಾಗುತ್ತಿದೆ ಅದರ ವರದಿ ಬರಲಿ. ಒಂದು ವೇಳೆ ವಾಲ್ಮೀಕಿ ಹಗರಣಲ್ಲಿ ಮಿನಿಸ್ಟರ್ ಅಕೌಂಟ್‌ಗೆ ಹಣ ಹೋಗಿದೆ ಎಂದು ಸಾಬೀತಾದರೆ ಅವರ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತೇವೆ. ಇದೇ ವೇಳೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಮೈಸೂರಿಗೆ ಹೋದ್ರೂ ಪ್ರವಾಸಿ ಮಂದಿರದ ಅಧಿಕಾರಿಗಳು ಲಾಕ್ ಓಪನ್ ಮಾಡಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಕುಮಾರಸ್ವಾಮಿಯವರು ಹೋದಾಗ ಐಬಿಯವರು ಕೀಲಿ ಹಾಕಿರುವುದರ ಹಿಂದೆ ಯಾವ ದುರುದ್ದೇಶ ಇಲ್ಲ. ಸಿಬ್ಬಂದಿಗೆ ಮಾಹಿತಿ ಇಲ್ಲದೇ ಇರಬಹುದು. ಆದರೆ ಉದ್ದೇಶಪೂರ್ವಕವಾಗಿ ಆ ರೀತಿ ನಮ್ಮ ಸರ್ಕಾರ ಮಾಡಿಲ್ಲ ಎಂದರು.