Asianet Suvarna News Asianet Suvarna News

ಭೂ ಕಂದಾಯ ಕಾಯ್ದೆ ತಿದ್ದುಪಡಿ 2022: ಠೇವಣಿ ಇಟ್ಟು ಮೋಸಹೋದರೆ ಇನ್ನು ಕಾಯ್ದೆ ರಕ್ಷಣೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರವಾಗಿ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಅವರು, ಕರ್ನಾಟಕ ಹಣಕಾಸಿನ ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ವಿಧೇಯಕ 2022ರ ಕುರಿತು ವಿವರಣೆ ನೀಡಿ ಅಂಗೀಕಾರ ಪಡೆದುಕೊಂಡರು. 

karnataka land revenue amendment act 2022 was passed in the legislative council gvd
Author
First Published Sep 20, 2022, 5:16 AM IST

ವಿಧಾನ ಪರಿಷತ್‌ (ಸೆ.20): ಹಣಕಾಸು ಸಂಸ್ಥೆಗಳ ವಂಚನೆಗಳಿಂದ ಠೇವಣಿದಾರರನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕರ್ನಾಟಕ ಹಣಕಾಸಿನ ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ವಿಧೇಯಕ ಮತ್ತು ಬಗರ್‌ಹುಕುಂ ಭೂಮಿಯನ್ನು ಸಕ್ರಮಗೊಳಿಸಲು ಅರ್ಜಿ ಸಲ್ಲಿಕೆಗೆ ನೀಡಲಾಗಿದ್ದ ಕಾಲಾವಕಾಶವನ್ನು ಒಂದು ವರ್ಷ ಕಾಲ ವಿಸ್ತರಿಸುವ ಸಂಬಂಧ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕವನ್ನು ಧ್ವನಿಮತದ ಮೂಲಕ ಅಂಗೀಕರಿಸಲಾಯಿತು. ಈಗಾಗಲೇ ವಿಧಾನಸಭೆಯಲ್ಲಿ ಅಂಗೀಕಾರವಾಗಿರುವ ಈ ಮಸೂದೆಗೆ ರಾಜ್ಯಪಾಲರ ಅಂಕಿತವಷ್ಟೇ ಬಾಕಿ ಇದೆ. 

ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರವಾಗಿ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಅವರು, ಕರ್ನಾಟಕ ಹಣಕಾಸಿನ ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ವಿಧೇಯಕ 2022ರ ಕುರಿತು ವಿವರಣೆ ನೀಡಿ ಅಂಗೀಕಾರ ಪಡೆದುಕೊಂಡರು. ಹಣಕಾಸು ಸಂಸ್ಥೆಗಳಲ್ಲಿ ಠೇವಣಿ ಇಡುವ ಠೇವಣಿದಾರರಿಗೆ ವಂಚಿಸುವ ಅಪರಾಧವನ್ನು ಜಾಮೀನು ರಹಿತ ಅಪರಾಧ ಎಂದು ಪರಿಗಣಿಸಲು ಮತ್ತು ಇಂತಹ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸಲು ತಿದ್ದುಪಡಿ ಕಾಯ್ದೆಯಲ್ಲಿ ಅವಕಾಶ ನೀಡಲಾಗಿದೆ. 

ಇಷ್ಟಪಟ್ಟು ಮತಾಂತರವಾಗಲು ಯಾವುದೇ ನಿರ್ಬಂಧ ಇಲ್ಲ: ಸಚಿವ ಅಶ್ವಥ ನಾರಾಯಣ್‌

ಈ ವಿಧೇಯಕ ಜಾರಿಯಿಂದ ಹಣಕಾಸು ಸಂಸ್ಥೆಯಲ್ಲಿ ಠೇವಣಿ ಇಟ್ಟು ನಷ್ಟ ಅನುಭವಿಸುವ ಠೇವಣಿದಾರರಿಗೆ ರಕ್ಷಣೆ ಒದಗಿಸಲು ಸಾಧ್ಯವಾಗಲಿದೆ. ಅಲ್ಲದೇ, ಠೇವಣಿದಾರರಿಗೆ ವಂಚನೆ ಎಸಗುವ ಆರೋಪಿತ ಸಂಸ್ಥೆ ಅಥವಾ ವ್ಯಕ್ತಿಯ ವಿರುದ್ಧ ರಾಜ್ಯದ ವಿವಿಧೆಡೆ ಇರುವ ಪ್ರಕರಣಗಳನ್ನು ಒಂದೇ ಪ್ರಕರಣ ಎಂದು ದಾಖಲಿಸಿ ವಿಚಾರಣೆ ನಡೆಸಲಾಗುವುದು ಎಂದು ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಭೂಕಂದಾಯ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ: ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕ 2022ಅನ್ನು ಕಂದಾಯ ಸಚಿವ ಆರ್‌.ಅಶೋಕ್‌ ಅವರ ಪರವಾಗಿ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ವಿವರಿಸಿ ಅನುಮೋದನೆ ಪಡೆದುಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಮಾಧುಸ್ವಾಮಿ ಅವರು, 2018ರ ಮಾ.17ರಿಂದ 2019 ಮಾ.16ರವರೆಗೆ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಸರ್ಕಾರಿ ಭೂಮಿಗಳನ್ನು ಸಕ್ರಮಗೊಳಿಸಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. 

Kolar: ಜಿಲ್ಲೆಯ ಆರೂ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಿಸಬೇಕು: ಸಚಿವ ಮುನಿರತ್ನ

ಆದರೆ, ಇನ್ನೂ ಹೆಚ್ಚಿನ ಕಾಲಾವಕಾಶ ನೀಡುವಂತೆ ಶಾಸಕರು ಮತ್ತು ಸಾರ್ವಜನಿಕರಿಂದ ಒತ್ತಾಯ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಮೇ 22ರಿಂದ ಒಂದು ವರ್ಷದವರೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲು ಈ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ ಎಂದರು. ಈ ವೇಳೆ ಮಾತನಾಡಿದ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್‌ ಅವರು, ಈಗಾಗಲೇ ಮಠಗಳು, ವಿವಿಧ ಸಂಸ್ಥೆಗಳಿಗೆ ಕೊಟ್ಟಿರುವ ನೂರಾರು ಎಕರೆ ಗೋಮಾಳವನ್ನು ಸಕ್ರಮ ಮಾಡಬಾರದು. ಗೋಮಾಳವನ್ನು ಸರ್ಕಾರಿ ಸ್ವತ್ತಾಗಿಯೇ ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

Follow Us:
Download App:
  • android
  • ios