LIVE NOW
Karnataka Latest News Live: ಹೊಸಪೇಟೆ ಇಂದಿರಾ ಕ್ಯಾಂಟೀನ್ ಗೆ ಅತ್ಯುತ್ತಮ ಪ್ರಶಸ್ತಿ

ಸಾರಾಂಶ
ಹೊಸಪೇಟೆ: ಹೊಸಪೇಟೆ ನಗರದ 100 ಹಾಸಿಗೆ ಸರ್ಕಾರಿ ಆಸ್ಪತ್ರೆ ಸಮೀಪದಲ್ಲಿರುವ ಇಂದಿರಾ ಕ್ಯಾಂಟೀನ್ ಗೆ ಅತ್ಯುತ್ತಮ ಪ್ರಶಸ್ತಿ ಲಭಿಸಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಬೆಂಗಳೂರಿನ ನೆಹರು ತಾರಾಲಯ ಆವರಣದಲ್ಲಿರುವ ಯು.ಆರ್.ರಾವ್ ಸಭಾಂಗಣದಲ್ಲಿ ಗುರುವಾರ ನಡೆದ ಇಂದಿರಾ ಗಾಂಧಿ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಹೊಸಪೇಟೆಯ ಇಂದಿರಾ ಕ್ಯಾಂಟೀನ್ ಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯಮಟ್ಟದ ಅತ್ಯುತ್ತಮ ಇಂದಿರಾ ಕ್ಯಾಂಟೀನ್ ಪ್ರಶಸ್ತಿ ಪ್ರದಾನ ಮಾಡಿದರು.
ನಗರಸಭೆ ಅಧ್ಯಕ್ಷ ಎನ್.ರೂಪೇಶ್ ಕುಮಾರ್, ಉಪಾಧ್ಯಕ್ಷ ಬಿ.ಜೀವರತ್ನಂ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನೋಹರ್ ಕುಮಾರ್, ನಗರಸಭಾ ಆಯುಕ್ತ ಯರಗುಡಿ ಶಿವಕುಮಾರ್, ಪರಿಸರ ಅಧಿಕಾರಿ ಆರತಿ ಪ್ರಶಸ್ತಿ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಸಚಿವ ಡಾ.ಯತೀಂದ್ರ, ಬಾಲಕೃಷ್ಣ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಕಾವೇರಿ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.