- Home
- News
- State
- Karnataka Latest News Live: ಬಿಜೆಪಿ ಸಹಕಾರದಿಂದಲೇ ಎಚ್ಡಿಕೆ ಸಿಎಂ ಆಗಲಿದ್ದಾರೆ: ವಿಧಾನಪರಿಷತ್ ಸದಸ್ಯ
LIVE NOW
Karnataka Latest News Live: ಬಿಜೆಪಿ ಸಹಕಾರದಿಂದಲೇ ಎಚ್ಡಿಕೆ ಸಿಎಂ ಆಗಲಿದ್ದಾರೆ: ವಿಧಾನಪರಿಷತ್ ಸದಸ್ಯ

ಸಾರಾಂಶ
ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸಹಕಾರದಿಂದಲೇ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಜೆಡಿಎಸ್ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಹೇಳಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಹೇಳಿಕೆಯಲ್ಲಿ ತಪ್ಪೇನಿದೆ? ರಾಜ್ಯದ ಜನರ ಮಾತನ್ನೇ ರೇವಣ್ಣ ಹೇಳಿದ್ದಾರೆ ಎಂದು ಸಮರ್ಥಿಸಿಕೊಂಡರು.
ಕಾಂಗ್ರೆಸ್ ಆಡಳಿತದಿಂದ ರಾಜ್ಯದ ಜನ ಬೇಸತ್ತಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಆಗಿ ನೋಡಲು ಬಯಸುತ್ತಿದ್ದಾರೆ. ಬಿಜೆಪಿ ಸಹಕಾರದಿಂದಲೇ ರಾಜ್ಯದಲ್ಲಿ ಜೆಡಿಎಸ್ ಮತ್ತೆ ಅಧಿಕಾರಕ್ಕೆ ಬರಲಿದೆ. ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಶರವಣ ಪ್ರತಿಕ್ರಿಯಿಸಿದರು.