- Home
- News
- State
- Karnataka Latest News Live: ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್: ತ.ನಾಡಿಗೆ ನೀರು ಹರಿಸಲು ಸೂಚನೆ
LIVE NOW
Karnataka Latest News Live: ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್: ತ.ನಾಡಿಗೆ ನೀರು ಹರಿಸಲು ಸೂಚನೆ

ಸಾರಾಂಶ
ಬೆಂಗಳೂರು: ಮಳೆ ಕೊರತೆ ಹಾಗೂ ತೀವ್ರ ಬರದ ನಡುವೆಯೇ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಮತ್ತೆ ಶಾಕ್ ನೀಡಿದ್ದು, ತಮಿಳುನಾಡಿಗೆ ಮುಂದಿನ 15 ದಿನ ನಿತ್ಯ 2,000 ಕ್ಯೂಸೆಕ್ ನೀರು ಹರಿಸಲು ರಾಜ್ಯಕ್ಕೆ ಶಿಫಾರಸ್ಸು ಮಾಡಿದೆ. ನವೆಂಬರ್ 21ರಂದು ಸಿಡಬ್ಲ್ಯುಆರ್ಸಿ (ಕಾವೇರಿ ನೀರು ನಿಯಂತ್ರಣ ಸಮಿತಿ) ಮಾಡಿದ್ದ ಶಿಫಾರಸ್ಸನ್ನು ಎತ್ತಿ ಹಿಡಿದಿದೆ. ದೆಹಲಿಯ ಪ್ರಾಧಿಕಾರದ ಕಚೇರಿಯಲ್ಲಿ ವಿನೀತ್ ಗುಪ್ತಾ ಅವರ ಅಧ್ಯಕ್ಷತೆಯಲ್ಲಿ ಪ್ರಾಧಿಕಾರದ ಸಭೆ ನಡೆಯಿತು. ಕರ್ನಾಟಕದ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಿದ್ದರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ತಮಿಳುನಾಡಿಗೆ ಮುಂದಿನ 15 ದಿನ ನಿತ್ಯ 2,000 ಕ್ಯೂಸೆಕ್ ನೀರು ಹರಿಸುವಂತೆ ನವೆಂಬರ್ 21ರಂದು ಸಿಡಬ್ಲ್ಯುಆರ್ಸಿ ಮಾಡಿದ್ದ ಶಿಫಾರಸ್ಸನ್ನು ಮರು ಪರಿಶೀಲಿಸುವಂತೆ ಕರ್ನಾಟಕ ಆಗ್ರಹಿಸಿತು. ವಾದ-ವಿವಾದ ಆಲಿಸಿದ ಪ್ರಾಧಿಕಾರ, 15 ದಿನ ತಮಿಳುನಾಡಿಗೆ ನಿತ್ಯ 2 ಸಾವಿರ ಕ್ಯೂಸೆಕ್ ನೀರು ಹರಿಸಲು ಶಿಫಾರಸ್ಸು ಮಾಡಿತು.