ವಿಧಾನ ಪರಿಷತ್‌ ಉಪಸಭಾಪತಿ ಎಸ್. ‌ಎಲ್‌ ಧರ್ಮೇಗೌಡ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ..!

ವಿಧಾನ ಪರಿಷತ್‌ ಉಪಸಭಾಪತಿ ಎಸ್‌.ಎಲ್‌.ಧರ್ಮೇಗೌಡ (64) ಅವರ ಮೃತದೇಹ ಜಿಲ್ಲೆಯ ಕಡೂರು ತಾಲ್ಲೂಕಿನ ಗುಣಸಾಗರ ಬಳಿಯ ರೈಲು ಹಳಿಯಲ್ಲಿ ರಕ್ತ ಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. 

Karnataka legislative council deputy speaker SL Dharme Gowda commits suicide Pod

ಚಿಕ್ಕಮಗಳೂರು(ಡಿ.29): ವಿಧಾನಪರಿಷತ್ ಉಪಸಭಾಪತಿ ಹಾಗೂ ಜೆಡಿಎಸ್ ಸದಸ್ಯ ಎಸ್.ಎಲ್. ಧರ್ಮೇಗೌಡ ಕೊನೆಯುಸಿರೆಳೆದಿದ್ದಾರೆ. ಅವರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ರೈಲ್ವೆ ಹಳಿಯಲ್ಲಿ ಅವರ ರುಂಡ ಮುಂಡ ಬೇರ್ಪಟ್ಟ  ಸ್ದೇಥಿತಿಯಲ್ಲಿ ದೇಹ ಪತ್ತೆಯಾಗಿದೆ. ಅವರ ಸಾವಿಗೆ ಕಾರಣ ಏನು ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ. 

ಎಸ್‌ಎಲ್‌ ಧರ್ಮೇಗೌಡ ಅವರು ಸೋಮವಾರ ಸಂಜೆ ಮನೆಯಿಂದ ತಮ್ಮ ಕಾರ್‌ನಲ್ಲಿ ಒಬ್ಬರೇ ತೆರಳಿದ್ದರು. ರಾತ್ರಿಯಾದರೂ ಮನೆಗೆ ವಾಪಸ್‌ ಬಾರದ ಕಾರಣ ಗನ್‌ಮ್ಯಾನ್‌, ಪೊಲೀಸರು ಮತ್ತು ಸ್ಥಳೀಯರು ಹುಡುಕಾಟ ನಡೆಸಿದ್ದರು. ಅನೇಕ ಕಡೆಗಳಲ್ಲಿ ಹುಡುಕಾಡಿದ ನಂತರ ಕೊನೆಗೆ ಅವರ ಮೃತದೇಹ ಕಡೂರು ತಾಲೂಕಿನ ಗುಣಸಾಗರದ ಮಂಕೇನಹಳ್ಳಿ ರೈಲ್ವೇ ಟ್ರ್ಯಾಕ್‌ ಬಳಿ ಪತ್ತೆಯಾಗಿದೆ. ಜೊತೆಗೆ ಡೆತ್ ನೋಟ್ ಕೂಡಾ ಲಭಿಸಿದೆ.

"

ಸಂಜೆ ಸುಮಾರು 6.30ರ ಸುಮಾರಿಗೆ ಸಖರಾಯಪಟ್ಟಣದ ಮನೆಯಿಂದ ಡ್ರೈವರ್ ಜೊತೆ ಗುಣಸಾಗರಕ್ಕೆ ಬಂದಿದ್ದ ಧರ್ಮೇಗೌಡ, ರೈಲ್ವೆ ಟ್ರ್ಯಾಕ್‌ ಬಳಿ ಕಾರನ್ನು ನಿಲ್ಲಿಸಲು ಡ್ರೈವರ್‌ಗೆ ಸೂಚಿಸಿದ್ದಾರೆ. ಬಳಿಕ ನನಗೊಬ್ಬರ ಜೊತೆ ಖಾಸಗಿಯಾಗಿ ಮಾತನಾಡಬೇಕು. ನೀನು ಹೋಗು ಅಂತಾ ಡ್ರೈವರ್‌ನನ್ನು ಕಳುಹಿಸಿದ್ದಾರೆ. ಆ ಬಳಿಕ ಕಡೂರಿನ ವ್ಯಕ್ತಿಯೊಬ್ಬರಿಗೆ ಫೋನ್ ಮಾಡಿ ಜನಶತಾಬ್ದಿ ರೈಲು ಬರುವ ಸಮಯವನ್ನು ವಿಚಾರಿಸಿಕೊಂಡಿದ್ದಾರೆ. ಇದಾದ ಬಳಿಕ ತನ್ನ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ.

ಇತ್ತೀಚೆಗೆ ವಿಧಾನಪರಿಷತ್‌ನಲ್ಲಿ ನಡೆದ ಎಳೆದಾಟ ತಳ್ಳಾಟ ಪ್ರಕರಣದಿಂದ ಸಾಕಷ್ಟು ಮನನೊಂದಿದ್ದರು. ಈ ಘಟನೆಯಿಂದ ಎಸ್‌ಎಲ್ ಧರ್ಮೇಗೌಡ ಮಾನಸಿಕವಾಗಿ ಕುಗ್ಗಿದ್ದರು ಎನ್ನಲಾಗಿದೆ.

Latest Videos
Follow Us:
Download App:
  • android
  • ios