ಆಸ್ಪತ್ರೆಯಿಂದ ನೇರವಾಗಿ ಮತಗಟ್ಟೆಗೆ ಆಗಮಿಸಿ ಹಕ್ಕು ಚಲಾಯಿಸಿದ ನಾರಾಯಣ ಮೂರ್ತಿ!

ಅನಾರೋಗ್ಯದಿಂದ ಆಸ್ಪತ್ರೆ ದಾಖಲಾಗಿದ್ದ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಆಸ್ಪತ್ರೆಯಿಂದ ಡಿಸ್‌ಚಾರ್ಜ್ ಮಾಡಿ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಈ ಮೂಲಕ ಎಲ್ಲರಿಗೂ ಸ್ಪೂರ್ತಿಯಾಗಿದ್ದಾರೆ.

Karnataka Lok Sabha Election 2024 N R Narayana Murthy cast vote despite ill health ckm

ಬೆಂಗಳೂರು(ಏ.26) ಕರ್ನಾಟಕ ಲೋಕಸಭಾ ಚುನಾವಣೆ ಎರಡು ಹಂತದಲ್ಲಿ ನಡೆಯಲಿದೆ. ಈ ಪೈಕಿ ಮೊದಲ ಹಂತದ ಚುನಾವಣೆ ಅಂತಿಮ ಘಟ್ಟದಲ್ಲಿದೆ. ಕೆಲವೇ ಗಂಟೆಗಳಲ್ಲಿ ಮತದಾನ ಅಂತ್ಯವಾಗಲಿದೆ. ಬಿರುಬಿಸಿನಲ್ಲಿ ಜನರು ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ರಾಜ್ಯದ 14 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಈ ಪೈಕಿ ಬೆಂಗಳೂರು ಕ್ಷೇತ್ರಗಳಲ್ಲಿ ಇದುವರೆಗೆ ದಾಖಲಾಗಿರುವ ಅಂಕಿ ಅಂಶ ಪ್ರಕಾರ ಕಡಿಮೆ ಪ್ರಮಾಣದ ಮತದಾನವಾಗಿದೆ. ಆದರೆ ಬೆಂಗಳೂರು ಸೇರಿದಂತೆ ರಾಜ್ಯದ ಜನರಿಗೆ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಹಾಗೂ ಪತ್ನಿ, ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಮಾದರಿಯಾಗಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆ ದಾಖಲಾಗಿದ್ದ ನಾರಾಯಣಮೂರ್ತಿ ಡಿಸ್‌ಚಾರ್ಜ್ ಆಗಿ ನೇರವಾಗಿ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಸುಧಾ ಮೂರ್ತಿ ಜೊತೆಗೆ ಆಗಮಿಸಿದ ನಾರಾಯಣ ಮೂರ್ತಿ ಹಕ್ಕುಚಲಾಯಿಸಿದ್ದಾರೆ. ಈ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

ನಾರಾಯಣ ಮೂರ್ತಿ ಅನಾರೋಗ್ಯದಿಂದ ಆಸ್ಪತ್ರೆ ದಾಖಲಾಗಿದ್ದರು. ಅವರ ಆರೋಗ್ಯ ಚೇತರಿಸಿಕೊಳ್ಳುತ್ತಿದೆ. ಆದರೆ ಇಂದೇ ಡಿಸ್‌ಚಾರ್ಜ್ ಆಗಿ ನೇರವಾಗಿ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ್ದಾರೆ. ಆಸ್ಪತ್ರೆಯಿಂದ ಮತಗಟ್ಟೆಗೆ ಆಗಮಿಸಿದ್ದಾರೆ. ಇಲ್ಲಿಂದ ಮನೆಗೆ ಕರೆದುಕೊಂಡು ಹೋಗಬೇಕು. ಹೆಚ್ಚಿನ ವಿಶ್ರಾಂತಿಯ ಅಗತ್ಯವಿದೆ ಎಂದು ಸುಧಾಮೂರ್ತಿ ಹೇಳಿದ್ದಾರೆ.

ಕರ್ನಾಟಕ ಲೋಕಸಭಾ ಚುನಾವಣೆ 2024, ದಕ್ಷಿಣ ಕನ್ನಡದಲ್ಲಿ ಗರಿಷ್ಠ, ಎಲ್ಲಿ ಕನಿಷ್ಠ ಮತದಾನ?

ಮತದಾನ ಶ್ರೇಷ್ಠ ದಾನ. ಮನೆಯಲ್ಲಿ ಕುಳಿತು ಮಾತನಾಡುತ್ತಾ ಸಮಯ ಕಳೆಯು ಬದಲು ಹೊರಬನ್ನಿ ನಿಮ್ಮ ಹಕ್ಕು ಚಲಾಯಿಸಿ ಎಂದು ಸುಧಾ ಮೂರ್ತಿ ಹೇಳಿದ್ದಾರೆ. ಜಯನಗರದಲ್ಲಿ ಸುಧಾಮೂರ್ತಿ ಹಾಗೂ ನಾರಾಯಣಮೂರ್ತಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ನಾವು ಹಿರಿಯ ನಾಗರೀಕರು. ಆದರೆ ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದೇವೆ. ಯುವ ಸಮೂಹ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಅನಾರೋಗ್ಯದ ನಡುವೆ ಮಾಧ್ಯಮದ ಜೊತೆ ಮಾತನಾಡಿದ ನಾರಾಯಣಮೂರ್ತಿ, ಪ್ರತಿ 5 ವರ್ಷಕ್ಕೊಮ್ಮೆ ನಮಗೆ ಮತದಾನದ ಹಕ್ಕು ಸಿಗಲಿದೆ.ಯೋಚಿಸಿ, ಸೂಕ್ತ ವ್ಯಕ್ತಿಗೆ ಮತದಾನ ಮಾಡಿ. ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟ್ಗೆ ಆಗಮಿಸಿ ಮತದಾನ ಮಾಡಿ ಎಂದು ನಾರಾಯಣಮೂರ್ತಿ ಮನವಿ ಮಾಡಿದ್ದಾರೆ. 

 

 

ರಾಜ್ಯದಲ್ಲಿ ಮೊದಲ ಹಂತದಲ್ಲಿ ಉಡುಪಿ- ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮೀಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಕುಮಾರಸ್ವಾಮಿ, ಪಜ್ವಲ್ ಸೋಲಿಸಲು ಕಾಂಗ್ರೆಸ್‌ ಕಾರ್ಡ್ ಹಂಚಿದೆ : ದೇವೇಗೌಡ ಗಂಭೀರ ಆರೋಪ
 

Latest Videos
Follow Us:
Download App:
  • android
  • ios