Asianet Suvarna News Asianet Suvarna News

ಬೆಳ್ಳಂಬೆಳಗ್ಗೆ ಕರ್ನಾಟಕದ ಹಲವೆಡೆ ಲೋಕಾಯುಕ್ತ ದಾಳಿ; ಸುಖ ನಿದ್ದೆಯಲ್ಲಿ ಸರ್ಕಾರಿ ಅಧಿಕಾರಿಗಳು ಶಾಕ್!

ರಾಜ್ಯದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಮುಂಜಾನೆಯ ಸುಖ ನಿದ್ರೆಯಲ್ಲಿದ್ದ ಸರ್ಕಾರಿ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಹಿನ್ನೆಲೆ ಬೆಂಗಳೂರು, ಕೊಡಗು, ಚಿತ್ರದುರ್ಗ, ಬೀದರ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳಿಗಳು ದಾಳಿ ನಡೆಸಿದ್ದಾರೆ. 

Karnataka lokayukta raids in many districts of the karnataka todday rav
Author
First Published Aug 17, 2023, 8:17 AM IST

ಬೆಂಗಳೂರು (ಆ.17) : ರಾಜ್ಯದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಮುಂಜಾನೆಯ ಸುಖ ನಿದ್ರೆಯಲ್ಲಿದ್ದ ಸರ್ಕಾರಿ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಹಿನ್ನೆಲೆ ಬೆಂಗಳೂರು, ಕೊಡಗು, ಚಿತ್ರದುರ್ಗ, ಬೀದರ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳಿಗಳು ದಾಳಿ ನಡೆಸಿದ್ದಾರೆ. 

ಬಿಬಿಎಂಪಿ ಅಧಿಕಾರಿ ಮನೆ ಮೇಲೆ ದಾಳಿ:

ಮಹದೇವಪುರ ವಲಯದ ಬಿಬಿಎಂಪಿ RI ನಟರಾಜ್ ಮನೆ ಮೇಲೆ ದಾಳಿ. ಅಧಿಕಾರಿ ನಟರಾಜು(Nataraju BBMP officer) ಮನೆಮೇಲೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ(Karnataka lokayukta raids) ಮಾಡಿ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಶಿವನಹಳ್ಳಿ ಗ್ರಾಮದಲ್ಲಿರುವ ನಟರಾಜು ಮನೆ. ಬೆಂಗಳೂರಿನಿಂದ ರಾಮನಗರಕ್ಕೆ ತೆರಳಿ ದಾಳಿ ನಡೆಸಿರೋ ಲೋಕಾಯುಕ್ತ ಅಧಿಕಾರಿಗಳು. ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆ ದಾಳಿ ನಡೆಸಿ ಪರಿಶೀಲನೆ ನಡೆಸಿರುವ ಲೋಕಾಯುಕ್ತರು.ಈ ಹಿಂದೆ ಹಣ ಪಡೆಯುವಾಗ ಟ್ರಾಪ್ ಆಗಿದ್ದ ನಟರಾಜ್. ಬೆಂಗಳೂರು ಒಂದರಲ್ಲೇ ಹತ್ತಕ್ಕೂ ಹೆಚ್ಚುಕಡೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು.

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ತಹಸೀಲ್ದಾರ್‌ ಅಜಿತ್ ರೈಗೆ ಬೇಲ್‌!

ಕೊಡಗು ಎಡಿಸಿ ಮನೆ ಮೇಲೆ ದಾಳಿ

ಆದಾಯಕ್ಕೂ ಮೀರಿ ಆಸ್ತಿ ಆರೋಪ ಹಿನ್ನೆಲೆ ಇಂದು ಕೊಡುಗು ಎಡಿಸಿ ನಂಜುಂಡೇಗೌಡ ಅವರ ಮನೆ ಮೇಲೆ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ನಡೆಸಿದರು. ಮಡಿಕೇರಿ ಜಿಲ್ಲಾಧಿಕಾರಿ ಮನೆ ಪಕ್ಕದಲ್ಲೇ ಇರುವ ಎಡಿಸಿ ನಂಜುಂಡೇಗೌಡರ ಕ್ವಾಟ್ರಸ್. ಕೊಡಗು ಮತ್ತು ಮೈಸೂರು ಜಿಲ್ಲೆ ಲೋಕಾಯುಕ್ತ ಪೊಲೀಸರ ಜಂಟಿ ಕಾರ್ಯಾಚರಣೆ ಡಿವೈಎಸ್‌ಪಿ ಪವನ್ ಕುಮಾರ ನೇತೃತ್ವದಲ್ಲಿ ಮೂವರು ಇನ್ಸ್‌ಪೆಕ್ಟರ್ ಸೇರಿದಂತೆ 10ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯಿಂದ ದಾಳಿ ನಡೆದಿದೆ. ದಾಳಿ ವೇಳೆ ಹಣ ಲೆಕ್ಕ ಹಾಕಲು ಮಷಿನ್ ತಂದ ಅಧಿಕಾರಿಗಳು. ಮನೆಯಲ್ಲಿ ಭಾರೀ ನಗದು ಹಣ ದೊರೆತಿರುವ ಸಾಧ್ಯತೆ. ಹೀಗಾಗಿ ಹಣ ಲೆಕ್ಕ ಹಾಕುವ ಮೆಷಿನ್ ತಂದ ಅಧಿಕಾರಿಗಳು


ಕೊಪ್ಪಳ ನಿರ್ಮಿತಿ ಕೇಂದ್ರದ ಮೇಲೆ ದಾಳಿ:

ಅಪಾರ ಪ್ರಮಾಣದ ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನಲೆ ಕೊಪ್ಪಳ ನಿರ್ಮಿತಿ ಕೇಂದ್ರದ ಕಚೇರಿ ವ್ಯವಸ್ಥಾಪಕ ಮಂಜುನಾಥ ಬನ್ನಿಕೊಪ್ಪ ಅವರ ನಿರ್ಮಿತಿ ಕೇಂದ್ರ,ಮನೆ, ಹುಲಗಿಯಲ್ಲಿನ ಲಾಡ್ಜ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ಮಂಗಲಾ ಆಸ್ಪತ್ರೆ ಹಿಂಭಾಗದದಲ್ಲಿರುವ ಮನೆ ಮೇಲೂ ದಾಳಿ. ರಾಯಚೂರು ಲೋಕಾಯುಕ್ತ ಎಸ್ಪಿ ಆರ್ ಎಲ್ ಅರಸಿದ್ದಿ ನೇತೃತ್ವದಲ್ಲಿ ಒಟ್ಟು ಮೂರು ಸ್ಥಳಗಳಲ್ಲಿ ಐದು ತಂಡಗಳಿಂದ ಏಕಕಾಲಕ್ಕೆ ದಾಳಿ ನಡೆಸಿರುವ ಅಧಿಕಾರಿಗಳು. 

ದಾವಣಗೆರೆ ಅರಣ್ಯ ಅಧಿಕಾರಿ ಮನೆ ಮೇಲೆ ದಾಳಿ:

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಅರಣ್ಯ ಇಲಾಖೆ ಅಧಿಕಾರಿ ಆರ್.ಎಫ್.ಒ ಸತೀಶ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಹಲವು ವರ್ಷಗಳಿಂದ ಆರ್‌ಎಫ್ ಓ ಆಗಿರುವ ಸತೀಶ್ ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ದಾಳಿ.  ಶಿವಮೊಗ್ಗದಲ್ಲಿರುವ ಸತೀಶ್ ನಿವಾಸದ ಮೇಲೂ ದಾಳಿ. ಲೋಕಾಯುಕ್ತ ಎಸ್ಪಿ ಕೌಲಾಪುರೆ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ರಾಷ್ಟ್ರಪತಿ ಹಾಗು ಮಧುಸೂಧನ್ ತಂಡದಿಂದ ದಾಖಲೆ ಪರಿಶೀಲನೆ ಶೋಧಕಾರ್ಯ ಮುಂದುವರಿಕೆ. 

ಬೀದರ್ ಭ್ರಷ್ಟ ಪೊಲೀಸ್ ಮನೆಮೇಲೆ ಲೋಕಾ ದಾಳಿ:

ಬೀದರ್‌ ಜಿಲ್ಲೆಯ ಭ್ರಷ್ಟ ಪೊಲೀಸ್ ಎಂದೇ ಗುರುತಿಸಿಕೊಂಡಿರುವ ಕಾನ್‌ಸ್ಟೇಬಲ್ ವಿಜಯಕುಮಾರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬಿಸಿ ಮುಟ್ಟಿಸಿದ್ದಾರೆ. ಚಿಟಗುಪ್ಪ ಪೋಲಿಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿಜಯಕುಮಾರ್ ಅಕ್ರಮದ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಇಂದು ಹುಮ್ನಾಬಾದ ಪಟ್ಟಣದ ಟೀಚರ್ ಕಾಲೋನಿ, ಹುಚಕನಳ್ಳಿ ಗ್ರಾಮದ ಮನೆ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತರು. ಹಲವು ಮಹತ್ವದ ದಾಖಲೆ ವಶಕ್ಕೆ ಪಡೆದು ಪರಿಶಿಲನೆ ನಡೆಸಿದ್ದಾರೆ. ಡಿವೈಎಸ್ಪಿ ಓಲೇಕಾರ ನೇತೃತ್ವದಲ್ಲಿ ಲೊಕಾ ಅಧಿಕಾರಿಗಳು ದಾಳಿ 

Karnataka Lokayukta: ದಾಳಿಗ ಮುನ್ನ ಲೋಕಾಯುಕ್ತ ಸೀಕ್ರೆಟ್ ಆಪರೇಷನ್!

ತುಮಕೂರು ಲೋಕಾ ದಾಳಿ:

ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಜಂಟಿ ನಿರ್ದೇಶಕ ನಾಗರಾಜು ಮನೆ ಮೇಲೆ ಬೆಳ್ಳಂಬೆಳಗ್ಗೆಯೇ ದಾಳಿ ನಡೆಸಿರುವ ಅಧಿಕಾರಿಗಳು, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ. ತುಮಕೂರಿನ ಸಪ್ತಗಿರಿ ಬಡಾವಣೆಯಲ್ಲಿರುವ ನಿವಾಸ. 

Follow Us:
Download App:
  • android
  • ios