ಬೆಂಗಳೂರು (ಜ.21): ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುತ್ತೇವೆ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಹೇಳಿಕೆ ಖಂಡಿಸಿ ಕನ್ನಡಪರ ಸಮಘಟನೆಗಳು ಇಂದು ಮತ್ತು ಶುಕ್ರವಾರ  (ಜ.21,22): ರಾಜ್ಯದ ಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲು ನಿರ್ಧರಿಸಿವೆ. 

ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್  ನೇತೃತ್ವದಲ್ಲಿ ಬುಧವಾರ  ನಡೆದ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದ್ದು ಇಂದುಕರ್ನಾಟಕ ಗಡಿ ಅತ್ತಿಬೆಲೆ, ಶುಕ್ರವಾರ ಬೆಳಗಾವಿ ಗಡಿ ಹಾಗೂ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ. 

ತಮಿಳು ಬ್ಯಾನರ್ ಕಿತ್ತುಹಾಕಿದ ವಾಟಾಳ್ ಮೇಲೆ ಕೇಸ್, ಕೇಸ್ ..

ಈ ಬಗ್ಗೆ ಮಾತನಾಡಿರುವ ವಾಟಾಳ್ ನಾಗರಾಜ್  ಮಹಾಜನ್ ವರದಿ ಪ್ರಕಾರ ಸೊಲ್ಲಾಪುರ ಕರ್ನಾಟಕಕ್ಕೆ ಸೇರಬೇಕು. ಆದರು ಮಹಾರಾಷ್ಟ್ರ ಮುಖ್ಯಮಂತ್ರಿಗಳು ಮನಸೋ ಇಚ್ಛೆ  ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಮೂಲಕ ಕನ್ನಡಿಗರ ಸ್ವಾಭಿಮಾನ ಕೆಣಕುವ ಕೆಲಸ ಮಾಡುತ್ತಿದ್ದಾರೆ ಎಂದು  ಹೇಳಿದರು. 

ಚಾಮರಾಜನಗರ: ನಡುರಸ್ತೆಯಲ್ಲಿ ಮಲಗಿ ವಾಟಾಳ್ ನಾಗರಾಜ್ ಪ್ರತಿಭಟನೆ ..

 ಡಾ. ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ ರಾ ಗೊವಿಮದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು  ಅನೇಕರಿದ್ದರು.