ಸಚಿವ ಡಿ ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ, ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಣಿಪಾಲ್ ಆಸ್ಪತ್ರೆಯಿಂದ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಆರೋಗ್ಯ ಚೇತರಿಕೆ ಕಂಡು ಬಂದಿಲ್ಲ ಎಂದು ವರದಿಯಾಗಿದೆ. 

ಬೆಂಗಳೂರು (ಏ.23) ಕರ್ನಾಟಕದ ಯೋಜನೆ ಮತ್ತು ಸಾಂಖಿಕ‌ ಇಲಾಖೆ ಸಚಿವ ಡಿ ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿರುವ ಡಿ ಸುಧಾಕರ್ ಆರೋಗ್ಯ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ. ಮಣಿಪಾಲ್ ಆಸ್ಪತ್ರೆಯಿಂದ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿಲ್ಲ ಎಂದು ವರದಿಯಾಗಿದೆ. ಸದ್ಯ ತೀವ್ರ ನಿಘಾ ಘಟಕದಲ್ಲಿ ಸಚಿವ ಡಿ ಸುಧಾಕರ್‌ಗೆ ಚಿಕಿತ್ಸೆ ನೀಡಲಾಗುತ್ತಿದೆ.

Add Asianetnews Kannada as a Preferred SourcegooglePreferred

ಶ್ವಾಸಕೋಶದ ಸೋಂಕು

ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಮೊಣಕಾಲಿನ ಆಪರೇಶನ್‌ಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಹಲವು ದಿನಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಿ ಸುಧಾರ್ ಸದ್ಯ ಶಾವ್ಸಕೋಶ ಸೋಂಕಿನಿಂದ ಬಳಲುತ್ತಿದ್ದಾರೆ. ಮೊಣಕಾಲ ಶಸ್ತ್ರಚಿಕಿತ್ಸೆ ಬಳಿಕ ಶ್ವಾಸಕೋಶದ ಸೋಂಕು ಉಲ್ಬಣಿಸಿತ್ತು. ಹೀಗಾಗಿ ಮಣಿಪಾಲದ ತೀವ್ರ ನಿಘಾ ಘಟದದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಎರಡು ದಿನದದ ಹಿಂದೆ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್

ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಿಂದ ಎರಡು ದಿನದ ಹಿಂದೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಗೆ ಸಚಿವ ಡಿ ಸುಧಾಕರ್ ಅವರನ್ನು ಶಿಫ್ಟ್ ಮಾಡಲಾಗಿದೆ. ಶ್ವಾಸಕೋಶದ ಸೋಂಕು ಉಲ್ಬಣಿಸುತ್ತಿರುವ ಹಿನ್ನಲೆಯಲ್ಲಿ ಡಿ ಸುಧಾಕರ್ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಕಳೆದ ಮೂರು ವಾರಗಳಿಂದ ಸುಧಾಕರ್‌ಗೆ ನಿರಂತರ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಆರೋಗ್ಯದಲ್ಲಿ ಸುಧಾರಣೆ ಕಂಡಿಲ್ಲ.

ಹಿರಿಯೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಡಿ ಸುಧಾಕರ್ ಮೂರು ಬಾರಿ ಹಿರಿಯೂರಿನಿಂದ ಗೆದ್ದು ಬಂದಿದ್ದಾರೆ. 2004ರಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು.