Asianet Suvarna News Asianet Suvarna News

‘ವಿದ್ಯಾರ್ಥಿಗಳಿಗೆ ಸೋಂಕು ತಗುಲದಂತೆ ನೋಡಿಕೊಳ್ಳಿ’

‘ವಿದ್ಯಾರ್ಥಿಗಳಿಗೆ ಸೋಂಕು ತಗುಲದಂತೆ ನೋಡಿಕೊಳ್ಳಿ’|  ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಎಚ್ಚರಿಕೆಯಿಂದ ನಡೆಸಿ| ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಅಧಿಕಾರಿಗಳಿಗೆ ಸೂಚನೆ

Karnataka Minister Dr K Sudhakar Asks Officials To Take Strict Measures In SSLC Exam Centers
Author
Bangalore, First Published Jun 25, 2020, 7:58 AM IST

ಬೆಂಗಳೂರು(ಜೂ.25): ಯಾವೊಬ್ಬ ವಿದ್ಯಾರ್ಥಿಗೂ ಕೊರೋನಾ ಸೋಂಕು ತಗುಲದಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಎಚ್ಚರಿಕೆಯಿಂದ ನಡೆಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬುಧವಾರ ವಿಡಿಯೋ ಸಂವಾದದಲ್ಲಿ ಬುಧವಾರ ಮಾತನಾಡಿದ ಅವರು, ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಇಡೀ ದೇಶವೇ ಎದುರು ನೋಡುತ್ತಿದೆ. ಹೀಗಾಗಿ ಇದನ್ನು ಸವಾಲಾಗಿ ಸ್ವೀಕರಿಸಿ ಜಾಗರೂಕತೆಯಿಂದ ಪರೀಕ್ಷೆಯನ್ನು ನಡೆಸಬೇಕಿದೆ. ರಾಜ್ಯದ 2,879 ಪರೀಕ್ಷಾ ಕೇಂದ್ರಗಳಲ್ಲಿ ಗುರುವಾರ ಆರಂಭವಾಗುವ ಪರೀಕ್ಷೆಯಲ್ಲಿ 8,48,203 ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಯಾವುದೇ ಗೊಂದಲಗಳಿಗೆ ಅವಕಾಶಗಳಿಲ್ಲದಂತೆ ಸರ್ಕಾರ ನೀಡಿರುವ ಸೂಚನೆಗಳನ್ನು ಜಾರಿಗೊಳಿಸುವಂತೆ ತಿಳಿಸಿದರು.

ಕೊರೋನಾ ಭೀತಿ ನಡುವೆ ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ

ಪರೀಕ್ಷಾ ಕೇಂದ್ರಗಳ ಬಳಿ, ಪರೀಕ್ಷಾ ಕೊಠಡಿ, ಶೌಚಾಲಯ ಇತ್ಯಾದಿ ಸ್ಥಳಗಳನ್ನು ಸ್ಯಾನಿಟೈಸ್‌ ಮಾಡಬೇಕು. ಪ್ರತಿ ವಿದ್ಯಾರ್ಥಿಗೆ ಮಾಸ್ಕ್‌ ನೀಡಿ ಪರೀಕ್ಷೆ ಬರೆಯುವ ಕೊಠಡಿಯಲ್ಲೂ ಅಂತರ ಇರುವಂತೆ ನೋಡಿಕೊಳ್ಳುವಂತೆ ತಿಳಿಸಿದರು.

ವಿದ್ಯಾರ್ಥಿಗಳು ಬೆಳಗ್ಗೆ 7.30ಕ್ಕೆ ಬರುವುದರಿಂದ ಪರೀಕ್ಷೆ ಬರೆದು ಹಿಂತಿರುಗುವತನಕ ಹಸಿವಿನಿಂದ ಬಳಲದಂತೆ ನೋಡಿಕೊಳ್ಳಲು ಪ್ರತಿ ಮಗುವಿಗೂ ಚಿಕ್ಕ ಬಿಸ್ಕೆಟ್‌ ಪ್ಯಾಕ್‌ ನೀಡಬೇಕು. ಇದಕ್ಕಾಗಿ ಜಿಲ್ಲಾಡಳಿತದಿಂದ ಹಣ ಭರಿಸಬೇಕು. ಪ್ರತಿ ವಿದ್ಯಾರ್ಥಿಯನ್ನೂ ಥರ್ಮಲ್‌ ಸ್ಕ್ಯಾ‌ನಿಂಗ್‌ ಮೂಲಕ ಪರೀಕ್ಷೆ ನಡೆಸಿ ಒಳಬಿಡಬೇಕು. ಒಂದು ವೇಳೆ ಜ್ವರ ಸಹಿತ ಇತರೆ ಸೋಂಕುಗಳಿದ್ದಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಲು ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದರು.

SSLC ಎಕ್ಸಾಮ್‌: ಕೊರೋನಾ ಸೋಂಕಿತ ಸೇರಿ ನಾಲ್ವರಿಗಿಲ್ಲ ಪರೀಕ್ಷೆ ಬರೆಯಲು ಅವಕಾಶ

ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್‌, ಶಿಕ್ಷಣ ಇಲಾಖೆ ಕಾರ್ಯದರ್ಶಿ ಎಸ್‌.ಆರ್‌. ಉಮಾಶಂಕರ್‌, ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಶಿ ಅನಿಲ್‌ಕುಮಾರ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Follow Us:
Download App:
  • android
  • ios