Asianet Suvarna News Asianet Suvarna News

ಕರ್ನಾಟಕದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ: 'ಗ್ಯಾರಂಟಿ ಯೋಜನೆಗೆ ಹಣ ಬೇಕಲ್ಲ?' ಎಂದ ಸಚಿವ ಎಂಬಿ ಪಾಟೀಲ್! 

ಇತರ ರಾಜ್ಯಗಳಿಗಿಂತ ಪೆಟ್ರೋಲ್ ಡೀಸೆಲ್ ದರ ಕಡಿಮೆ ಮಾಡಿ ಬೆಲೆ ಏರಿಕೆ ಮಾಡಲಾಗಿದೆ. ಸರ್ಕಾರಕ್ಕೆ ಆದಾಯ ಕಡಿಮೆಯಾಗುತ್ತಿದೆ ಅಭಿವೃದ್ಧಿಗೆ ಗ್ಯಾರಂಟಿ ಯೋಜನೆಗೆ ಹಣ ಬೇಕಲ್ಲ. ಹೀಗಾಗಿ ಅನವಶ್ಯಕವಾಗಿ ಹೆಚ್ಚಿಗೆ ಬೆಲೆ ಏರಿಕೆ ಮಾಡಲಾಗಿದೆ ರಾಜ್ಯ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಿಳಿಸಿದರು.

Karnataka Minister MB Patil reacts about petrol diesel price hike in karnataka at vijayapur rav
Author
First Published Jun 15, 2024, 8:01 PM IST

ವಿಜಯಪುರ (ಜೂ.15): ಉಳಿದ ರಾಜ್ಯಗಳಿಗಿಂತ ಪೆಟ್ರೋಲ್ ಮತ್ತು ಡೀಸೆಲ್ ದರ ಕರ್ನಾಟಕದಲ್ಲಿ ಕಡಿಮೆ ಇದೆ ಎಂದು ರಾಜ್ಯ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಿಳಿಸಿದರು.

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಏರಿಕೆ ವಿಚಾರ ಸಂಬಂಧ ಇಂದು ವಿಜಯಪುರ ನಗರದಲ್ಲಿ ಮಾತನಾಡಿದ ಸಚಿವರು, ನೆರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ಪೆಟ್ರೋಲ್, ಡೀಸೆಲ್ ದರ ಕಡಿಮೆಯಿದೆ. ತಮಿಳುನಾಡು ಹಾಗೂ ಇತರ ರಾಜ್ಯಗಳಲ್ಲಿ 5 ರಿಂದ 10 ರೂಪಾಯಿ ಹೆಚ್ಚಿಗೆ ದರ ಇದೆ. ಇತರ ರಾಜ್ಯಗಳಿಗಿಂತ ಪೆಟ್ರೋಲ್ ಡೀಸೆಲ್ ದರ ಕಡಿಮೆ ಮಾಡಿ ಬೆಲೆ ಏರಿಕೆ ಮಾಡಲಾಗಿದೆ. ಸರ್ಕಾರಕ್ಕೆ ಆದಾಯ ಕಡಿಮೆಯಾಗುತ್ತಿದೆ ಅಭಿವೃದ್ಧಿಗೆ ಗ್ಯಾರಂಟಿ ಯೋಜನೆಗೆ ಹಣ ಬೇಕಲ್ಲ. ಹೀಗಾಗಿ ಅನವಶ್ಯಕವಾಗಿ ಹೆಚ್ಚಿಗೆ ಬೆಲೆ ಏರಿಕೆ ಮಾಡಲಾಗಿದೆ ಎಂದರು.

ತುಮಕೂರು ಕಲುಷಿತ ನೀರು ಕುಡಿದು 6 ಮಂದಿ ದುರ್ಮರಣ: ಸತ್ತವರ ಲೆಕ್ಕ ಮುಚ್ಚಿಡೋ ಕೆಲಸ ಮಾಡಿತಾ ಸರ್ಕಾರ?

ಇತರ ರಾಜ್ಯಗಳ ಬೆಲೆ ತುಲನೆ ಮಾಡಿ ಏರಿಕೆ ಮಾಡಲಾಗಿದೆ ಎಂದ ಸಚಿವರು, ಪೆಟ್ರೋಲ್ ಡೀಸೆಲ್ ದರ ಏರಿಕೆ ಮಾಡಿದರೂ ಅವುಗಳ ಬೆಲೆ ಉಳಿದ ರಾಜ್ಯಗಳಿಗಿಂತ ನಮ್ಮಲ್ಲಿ ಕಡಿಮೆ ಇದೆ. ನಾವು ತೈಲ ಬೆಲೆ ಏರಿಕೆ ಮಾಡಿದರೂ ಅದು ರಾಜ್ಯದ ಅಭಿವೃದ್ಧಿ, ಜನರಿಗಾಗಿಯೇ ಮಾಡುವುದಲ್ಲವೇ? ಗ್ಯಾರಂಟಿ ಯೋಜನೆಗಳನ್ನು ಎಲ್ಲರಿಗೂ ಕೊಡುತ್ತಿದ್ದೇವೆ. ನಾವು ಫೈನಾನ್ಶಿಯಲ್ ಮೊಬಲೈಸೇಷನ್ ಮಾಡಲೇಬೇಕು. ಅದ್ಯಾಗೂ ಪೆಟ್ರೋಲ್ ಡೀಸೆಲ್ ದರಗಳು ಬೇರೆ ರಾಜ್ಯಗಳಿಗಿಂತ ನಮ್ಮ ಹೆಚ್ಚಿಗೆ ಇದ್ದರೆ ಹೇಳಿ ಎಂದು ಪ್ರಶ್ನಿಸಿದರು.

ಲೈನ್‌ಮ್ಯಾನ್ ನಿರ್ಲಕ್ಷ್ಯಕ್ಕೆ ವಿದ್ಯುತ್ ತಗುಲಿ ಕೂಲಿ ಕಾರ್ಮಿಕ ದುರ್ಮರಣ!

ಕೇಂದ್ರ ಸರ್ಕಾರದ ವಿರುದ್ಧ ಕಿಡಿ:

ತೈಲ ಬೆಲೆಗಳನ್ನು ಕೇಂದ್ರ ಸರ್ಕಾರ ಇಳಿಕೆ ಮಾಡಿಲ್ಲ. ಕಾಂಗ್ರೆಸ್ ಸರ್ಕಾರದಲ್ಲಿದ್ದಾಗ ಗ್ಯಾಸ್ ಬೆಲೆ 440ರೂ ಇತ್ತು, ಪೆಟ್ರೋಲ್ ಲೀಟರ್ ಗೆ 64 ರೂಪಾಯಿ ಇತ್ತು.  ಬಿಜೆಪಿ ಸರ್ಕಾರದಲ್ಲಿ ಎಲ್ಲಾ ವಸ್ತುಗಳ ಬೆಲೆ ಏರಿಕೆಯಾಗಿದೆ. ಬಿಜೆಪಿ ಸರ್ಕಾರದಲ್ಲಿ ಪೆಟ್ರೋಲ್ ಬೆಲೆ  ಅದು 1100 ರೂಪಾಯಿಗೆ ಹೋಗಿದೆ. ಅಷ್ಟಾದರೂ ಬೆಲೆ ಏರಿಕೆ ಕುರಿತು ನೀವು ಮೋದಿಯವರನ್ನ ಕೇಳಲಿಲ್ಲ. ಮೋದಿ ಹಾಗೂ ಕೇಂದ್ರ ಸರ್ಕಾರಕ್ಕೆ ಅನ್ವಯಿಸುವುದಿಲ್ಲವಾ? ಎಂದು ಪ್ರಶ್ನಸಿದರು. 

Latest Videos
Follow Us:
Download App:
  • android
  • ios