'ಘಟನೆ ಆಗಿದ್ದು ಆಗಿಹೋಗಿದೆ ಮುಂದುವರಿಸೋದ್ರಲ್ಲಿ ಅರ್ಥವಿಲ್ಲ'  ಎನ್ನುವ ಮೂಲಕ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ ಆಕ್ಷೇಪಾರ್ಹ ಹೇಳಿಕೆ ವಿಚಾರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ.

ಬೆಳಗಾವಿ (ಡಿ.21): 'ಘಟನೆ ಆಗಿದ್ದು ಆಗಿಹೋಗಿದೆ ಮುಂದುವರಿಸೋದ್ರಲ್ಲಿ ಅರ್ಥವಿಲ್ಲ' ಎನ್ನುವ ಮೂಲಕ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ ಆಕ್ಷೇಪಾರ್ಹ ಹೇಳಿಕೆ ವಿಚಾರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ.

Add Asianetnews Kannada as a Preferred SourcegooglePreferred

ಸಿಟಿ ರವಿ ಆಕ್ಷೇಪಾರ್ಹ ಹೇಳಿಕೆ ವಿಚಾರವಾಗಿ ಇಂದು ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ದೇಶದಲ್ಲಿ ಇಂಥ ಘಟನೆಗಳು ಹೊಸದೇನಲ್ಲ, ಸಂಸತ್ತು, ವಿಧಾನಸಭೆಯಲ್ಲಿ ಬಹಳಷ್ಟು ನಡೆದಿವೆ. ಘಟನೆಗೆ ಕ್ಷಮೆ ಕೇಳಿದ ಬಳಿಕ ಮುಗಿದು ಹೋಗಿವೆ. ಈಗಲೂ ಅದೇ ರೀತಿ ಮುಗಿಸೋದು ಒಳ್ಳೆಯದು. ಸಾರ್ವಜನಿಕವಾಗಿ ಈ ಪ್ರಕರಣ ಮುಂದುವರೆಸುವುದು ಅನವಶ್ಯಕ ‌ಎಂದರು.

'ನನ್ನನ್ನು ಪೊಲೀಸರು ಎನ್‌ಕೌಂಟರ್ ಮಾಡೋ ಸಂಚು ರೂಪಿಸಿದ್ರು' ಎಂಬ ಸಿ.ಟಿ ರವಿ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸಿಟಿ ರವಿ ಓರ್ವ ವಿಧಾನ ಪರಿಷತ್ ಸದಸ್ಯ, ಅವರನ್ನು ಹೇಗೆ ಎನ್‌ಕೌಂಟರ್ ಮಾಡಲು ಸಾಧ್ಯ? ಸಿಟಿ ರವಿಗೆ ತೊಂದರೆ ಕೊಡಬೇಕು ಎಂದು ನಾವು ಠಾಣೆಯಿಂದ ಠಾಣೆಗೆ ಸುತ್ತಾಡಿಸಿಲ್ಲ. ಹೋದ ಎಲ್ಲ ಕಡೆಯೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡಲು ಶುರು ಮಾಡಿದ್ರು. ಹೀಗಾಗಿ ಠಾಣೆಯಿಂದ ಠಾಣೆಗೆ ಕರೆದೊಯ್ದಿದ್ದಾರೆ ಎಂದು ಸಮರ್ಥಿಸಿಕೊಂಡರು.

'ಸಂವಿಧಾನ ಬದಲಿಸಿದ್ದು ಯಾರು?': ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ ಜನ್ಮ ಜಾಲಾಡಿದ ಬಿಎಲ್ ಸಂತೋಷ್!

ಸಿಟಿ ರವಿ ಅವರೇ ನಾನು ಆ ಪದ ಬಳಸಿಲ್ಲ ಎಂದು ಹೇಳಿದ್ದಾರೆ. ಅವರೇ ಹಾಗೆ ಹೇಳಿದ ಮೇಲೆ ಈ ಪ್ರಕರಣ ಮುಂದುವರಿಸುವುದರಲ್ಲಿ ಯಾವುದೇ ಅರ್ಥವಿಲ್ಲ. ಸೌಧಕ್ಕೆ ನುಗ್ಗಿ ಸಿಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದ ವಿಚಾರಕ್ಕೆ ಏನು ಹೇಳ್ತೀರಿ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಹಲ್ಲೆಗೆ ಯತ್ನ ನಡೆದಾಗ ಸಿ.ಟಿ ರವಿಯನ್ನು ಮಾರ್ಷಲ್ ಗಳು ರಕ್ಷಣೆ ಮಾಡಿದ್ದಾರೆ. ಸೌಧದ ಒಳಗೆ ಅನೇಕ ಕಾರ್ಯಕರ್ತರು ಇರ್ತಾರೆ, ಇವರೇ ಎಂದು ಹೇಳುವುದು ಕಷ್ಟ. ದೂರು ದಾಖಲಾದ ಬಳಿಕವೇ ಸಿ.ಟಿ ರವಿ ಬಂಧನವಾಗಿದೆ. ಹಾಗಾದರೆ ಹಲ್ಲೆ ಒಬ್ಬ ವಿಧಾನ ಪರಿಷತ್ ಸದಸ್ಯನಿಗೆ ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸಿ ಬಿಡುಗಡೆಗೊಳಿಸಿದ್ದೇಕೆ ಎಂಬ ಪ್ರಶ್ನೆಗೆ ಉತ್ತರವಿಲ್ಲ.

ಸಿಟಿ ರವಿ ಅವರನ್ನ ರಾತ್ರಿಯಿಡೀ ಸುತ್ತಾಡಿಸಿದ ಪೊಲೀಸರ ಕ್ರಮ ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ, ಹೇಳಿದ್ದೇನು?

ಯಾರ ನಿರ್ದೇಶನದ ಮೇರೆಗೆ ಸಿಟಿ ರವಿ ಅವರನ್ನ್ಉ ಠಾಣೆಯಿಂದ ಠಾಣೆಗೆ ಸುತ್ತಾಡಿಸಿದ್ದಾರೋ ನನಗೆ ಗೊತ್ತಿಲ್ಲ. ಆದರೆ ಸಿಟಿ ರವಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಖಾನಾಪುರದಿಂದ ಶಿಫ್ಟ್ ಮಾಡಿದ್ದಾರೆ. ಸಿ.ಟಿ ರವಿಯನ್ನು ರಾತ್ರಿಯೇ ಕೋರ್ಟ್‌ಗೆ ಹಾಜರು ಮಾಡುವಂತೆ‌ ನಾನು ಪೊಲೀಸರಿಗೆ ಹೇಳಿದ್ದೆ. ಬೆಳಗಾವಿ ‌ಪೊಲೀಸರು ಅಷ್ಟು ಮಾಡಿದ್ರೆ ಇಷ್ಟೆಲ್ಲ ಸಮಸ್ಯೆ ಆಗುತ್ತಿರಲಿಲ್ಲ. ಬೆಳಗಾವಿ ಸುವರ್ಣಸೌಧದಲ್ಲಿ ನಡೆದ ಮೊದಲ ಘಟನೆ ಇದು. ಹೀಗಾಗಿ ಅನೇಕ ಗೊಂದಲಗಳು ಸೃಷ್ಟಿಯಾಗಿವೆ ಎಂದರು.