Asianet Suvarna News Asianet Suvarna News

ಮೈಸೂರು ಸ್ಯಾಂಡಲ್, ಮಾರ್ಜಕ ಮಾರಾಟದಲ್ಲಿ 40 ವರ್ಷದಲ್ಲಿ ದಾಖಲೆ ಬರೆದ ಕೆಎಸ್‌ಡಿಎಲ್!

ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ ಡಿಸೆಂಬರ್‌ನಲ್ಲಿ 123.42 ಕೋಟಿ ರೂ. ಮೊತ್ತದ ಮಾರ್ಜಕಗಳನ್ನು ಮಾರಾಟ ಮಾಡುವ ಮೂಲಕ 40 ವರ್ಷಗಳಲ್ಲಿ ದಾಖಲೆ ನಿರ್ಮಿಸಿದೆ.

Karnataka Mysore Sandal Detergent sales record in 40 years KSDL sat
Author
First Published Jan 2, 2024, 3:56 PM IST

ಬೆಂಗಳೂರು (ಜ.02): ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್ ಡಿಎಲ್) 2023ರ ಡಿಸೆಂಬರ್ ತಿಂಗಳೊಂದರಲ್ಲೇ 123.42 ಕೋಟಿ ರೂ. ಮೊತ್ತದ ಮಾರ್ಜಕಗಳನ್ನು (ಡಿಟರ್ಜೆಂಟ್ಸ್) ಮಾರಾಟ ಮಾಡಿದ್ದು, ಕಳೆದ 40 ವರ್ಷಗಳ ವಹಿವಾಟಿನ ಇತಿಹಾಸದಲ್ಲಿ ದಾಖಲೆ ನಿರ್ಮಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿದ ಕೆಎಸ್‌ಡಿಎಲ್‌ ಕಳೆದ ತಿಂಗಳು ಕೆಎಸ್ಡಿಎಲ್ 852 ಟನ್ ಮಾರ್ಜಕಗಳನ್ನು ತಯಾರಿಸಿ, ಮಾರುಕಟ್ಟೆಗೆ ಬಿಡುಗಡೆ ಮಾಡುವ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. 2022ರ ಸೆಪ್ಟೆಂಬರ್ ತಿಂಗಳಲ್ಲಿ 775 ಟನ್ ಮಾರ್ಜಕಗಳನ್ನು ಉತ್ಪಾದಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಅದನ್ನೀಗ ಮುರಿದು, ವಹಿವಾಟಿನಲ್ಲೂ ವಿಕ್ರಮ ಸಾಧಿಸಲಾಗಿದೆ. ಕೆಎಸ್ಡಿಎಲ್ ನಲ್ಲಿ ಇದುವರೆಗೆ ಮಾರ್ಜಕಗಳ ಉತ್ಪಾದನಾ ವಿಭಾಗದಲ್ಲಿ ಒಂದು ಪಾಳಿಯ ಕೆಲಸದ ವ್ಯವಸ್ಥೆ ಇತ್ತು. ಅದನ್ನೀಗ ಮೂರು ಪಾಳಿಗಳಿಗೆ ವಿಸ್ತರಿಸಲಾಗಿದೆ. 

ಇಂದಿನಿಂದ ಬಡವರು ಕುಡಿಯುವ ಮದ್ಯದ ದರ ಏರಿಕೆ‌; ಯಾವ ಬ್ರಾಂಡ್ ಎಷ್ಟು ಹೆಚ್ಚಳ? ಇಲ್ಲಿದೆ ಮಾಹಿತಿ

ಜೊತೆಗೆ, ಈವರೆಗೆ ಸಂಸ್ಥೆಯಲ್ಲಿ ಮಾರ್ಜಕಗಳ ತಯಾರಿಕೆಗೆ ಕೇವಲ ಒಂದು ಯಂತ್ರ ಮಾತ್ರವಿತ್ತು. ಸರಕಾರಿ ಉದ್ದಿಮೆಗಳು ಖಾಸಗಿ ವಲಯದಂತೆಯೇ ಲಾಭ ಗಳಿಸಬೇಕೆಂಬ ಉದ್ದೇಶದಿಂದ ಈಗ ಈ ವಿಭಾಗದಲ್ಲಿ ಮೂರು ಯಂತ್ರಗಳನ್ನು ಅಳವಡಿಸಲಾಗಿದೆ. ಸಂಸ್ಥೆಯು ಮೊದಲಿನಿಂದಲೂ ಸಾಬೂನು ತಯಾರಿಕೆಗೆ ಹೆಸರುವಾಸಿಯಾಗಿದ್ದು, ಮಾರುಕಟ್ಟೆ ಕೂಡ ಅದರ ಸುತ್ತಲೇ ಕೇಂದ್ರೀಕೃತವಾಗಿತ್ತು. ಇತ್ತೀಚೆಗೆ ಮಾರ್ಜಕಗಳ ಮಾರಾಟಕ್ಕೂ ಹೆಚ್ಚಿನ ಗಮನ ಹರಿಸುವ ತೀರ್ಮಾನ ಕೈಗೊಳ್ಳಲಾಗಿತ್ತು. ಅದು ಈಗ ಫಲ ನೀಡಿದೆ. ಮುಂದಿನ ದಿನಗಳಲ್ಲಿ ಖಾಸಗಿ ಕಂಪನಿಗಳ ಮಾರ್ಜಕಗಳಿಗೆ ಸಡ್ಡು ಹೊಡೆಯುವ ರೀತಿಯಲ್ಲಿ ಮಾರುಕಟ್ಟೆ ಜಾಲವನ್ನು ಅಖಿಲ ಭಾರತ ಮಟ್ಟದಲ್ಲಿ ವಿಸ್ತರಣೆ ಮಾಡುವುದಕ್ಕೆ ಮುಂದಾಗಿದೆ.

ಗುತ್ತಿಗೆ ನೌಕರರಿಗೂ ಗ್ರ್ಯಾಚ್ಯುಟಿ ಅನ್ವಯ; ಹೈಕೋರ್ಟ್ ಮಹತ್ವದ ಆದೇಶ!

ಕೆಎಸ್‌ಡಿಎಲ್‌ 9 ತಿಂಗಳಲ್ಲಿ 1,171 ಕೋಟಿ ರೂ. ವಹಿವಾಟು ಮಾಡಿದೆ:
ಹೋದ ವರ್ಷಕ್ಕೆ ಹೋಲಿಸಿದರೆ ಪ್ರಸ್ತುತ 2023-24ನೇ ಹಣಕಾಸು ವರ್ಷದಲ್ಲಿ ಡಿಸೆಂಬರ್ ಅಂತ್ಯದವರೆಗೆ ಸಾಬೂನು, ಮಾರ್ಜಕ ಮತ್ತು ಕಾಸ್ಮೆಟಿಕ್ಸ್ ಉತ್ಪಾದನೆ ನಿಗದಿತ ಗುರಿಗಿಂತ ಹೆಚ್ಚಾಗಿದೆ. ಸಂಸ್ಥೆಯು ಹೋದ ಸಾಲಿನಲ್ಲಿ 118 ಕೋಟಿ ರೂ. ಲಾಭ ಗಳಿಸಿತ್ತು. ಈ ಹಣಕಾಸು ಸಾಲಿನ ಮೊದಲ 9 ತಿಂಗಳಲ್ಲಿ ಸಂಸ್ಥೆಯು 1,171 ಕೋಟಿ ರೂ. ಮೊತ್ತದಷ್ಟು ವಹಿವಾಟು ನಡೆಸಿದೆ. ಈ ವರ್ಷಕ್ಕೆ ಒಟ್ಟು 1,404 ಕೋಟಿ ರೂ. ವಹಿವಾಟು ನಿಗದಿ ಪಡಿಸಲಾಗಿದ್ದು, ಇದನ್ನು ಮೀರುವುದರಲ್ಲಿ ಅನುಮಾನವಿಲ್ಲ.
- ಎಂ.ಬಿ. ಪಾಟೀಲ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ

Follow Us:
Download App:
  • android
  • ios