- Home
- News
- State
- Karnataka News Live: ಕೆಪಿಸಿಸಿ ಕಾರ್ಯದರ್ಶಿ ನೇಮಕ ಪ್ರಕ್ರಿಯೆ ಪೂರ್ಣಗೊಂಡಿಲ್ಲ: ಬಿ.ಕೆ.ಹರಿಪ್ರಸಾದ್
LIVE NOW
Karnataka News Live: ಕೆಪಿಸಿಸಿ ಕಾರ್ಯದರ್ಶಿ ನೇಮಕ ಪ್ರಕ್ರಿಯೆ ಪೂರ್ಣಗೊಂಡಿಲ್ಲ: ಬಿ.ಕೆ.ಹರಿಪ್ರಸಾದ್

ಸಾರಾಂಶ
ಬೆಂಗಳೂರು: ಕೆಪಿಸಿಸಿ ಕಾರ್ಯದರ್ಶಿ, ಸಮನ್ವಯಕಾರರ ಸ್ಥಾನಗಳಿಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಕಾರ್ಯದರ್ಶಿ ಆಯ್ಕೆ ಸಂದರ್ಶನ ನ.16 ರವರೆಗೆ ನಡೆಯಲಿದ್ದು, ಬಳಿಕ ಅಧಿಕೃತ ಪಟ್ಟಿ ಪ್ರಕಟಿಸಲಾಗುವುದು ಎಂದು ಕೆಪಿಸಿಸಿ ತಿಳಿಸಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಗುರುವಾರ ಬಿಡುಗಡೆ ಮಾಡಿದ್ದ ಪತ್ರಿಕಾ ಹೇಳಿಕೆಯಲ್ಲಿ 112 ಮಂದಿ ಕಾರ್ಯದರ್ಶಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿದ್ದು, ಆಯ್ಕೆಯಾದ ಕಾರ್ಯದರ್ಶಿಗಳಿಗೆ ತಲಾ ಎರಡು ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ನೀಡಲಾಗಿದೆ ಎಂದು ತಿಳಿಸಲಾಗಿತ್ತು. ಸಂದರ್ಶನ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ನ.12 ರಂದು ಸಂದರ್ಶನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ 112 ಕೆಪಿಸಿಸಿ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾದ 112 ಕಾರ್ಯದರ್ಶಿಗಳಿಗೆ ತಲಾ ಎರಡು ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ನೀಡಲಾಗುತ್ತದೆ. ಈ ಕಾರ್ಯದರ್ಶಿಗಳು ತಮಗೆ ವಹಿಸಿರುವ ಕ್ಷೇತ್ರಗಳಲ್ಲಿ ಒಂದೂವರೆ ವರ್ಷಗಳ ಕಾಲ ಪೂರ್ಣ ಪ್ರಮಾಣದಲ್ಲಿ ಸಂಘಟನಾ ಕೆಲಸ ಮಾಡಬೇಕು ಎಂದು ಹೇಳಿದೆ.