08:34 AM (IST) Jan 16

Karnataka News Live 16th January:ರಾಸುಗಳಿಗೆ ಅಲಂಕಾರ ಮಾಡಿ ಕಿಚ್ಚು ಹಾಯಿಸಿದ ರೈತರು; ನಾಡಿನಾದ್ಯಂತ ಮಕರ ಸಂಕ್ರಾಂತಿಯ ಸಂಭ್ರಮ

ಹೊಸ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಯನ್ನು ನಾಡಿನಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಭಕ್ತರು ನದಿಗಳಲ್ಲಿ ಪುಣ್ಯಸ್ನಾನ ಮಾಡಿ, ದೇಗುಲಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರೆ, ರೈತರು ರಾಸುಗಳಿಗೆ ಕಿಚ್ಚು ಹಾಯಿಸಿ ಸಂಭ್ರಮಿಸಿದರು. 

Read Full Story
08:33 AM (IST) Jan 16

Karnataka News Live 16th January:70 ಸಾವಿರ ಬೆಲೆಯ ಕಾರಿಗೆ 1.11 ಲಕ್ಷ ರು. ದಂಡ ಕಟ್ಟಿದ ಮಾಲೀಕ

ಕಾರಿನ ಸೈಲೆನ್ಸರ್‌ ಮಾರ್ಪಾಡು ಮಾಡಿ ಬೆಂಕಿ ಉಗುಳುವಂತೆ ಮಾಡಿದ್ದ ಕಾರಿನ ಮಾಲೀಕನಿಗೆ ಆರ್‌.ಟಿ.ಒ ಅಧಿಕಾರಿಗಳು ಹಾಗೂ ಹೆಣ್ಣೂರು ಸಂಚಾರ ಪೊಲೀಸರು ಬರೋಬ್ಬರಿ 1.11 ಲಕ್ಷ ರು. ದಂಡ ವಿಧಿಸಿದ್ದಾರೆ.

Read Full Story
08:22 AM (IST) Jan 16

Karnataka News Live 16th January:ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ - ರಾಜೀವ್‌ಗೌಡ ವಿರುದ್ಧ 2 ಕೇಸ್‌, ಬೆನ್ನಲ್ಲೇ ನಾಪತ್ತೆ; 3 ತಂಡ ರಚಿಸಿ ಪೊಲೀಸರ ಶೋಧ ಕಾರ್ಯ!

ಶಿಡ್ಲಘಟ್ಟ ಪೌರಾಯುಕ್ತರಿಗೆ ಅಶ್ಲೀಲವಾಗಿ ನಿಂದಿಸಿ ಧಮ್ಕಿ ಹಾಕಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪ್ರಕರಣದ ನಂತರ ತಲೆಮರೆಸಿಕೊಂಡಿರುವ ಅವರಿಗೆ, ಪಕ್ಷಕ್ಕೆ ಮುಜುಗರ ತಂದ ನಡವಳಿಕೆಗಾಗಿ ಕೆಪಿಸಿಸಿ ಶಿಸ್ತು ಸಮಿತಿಯು ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ. 

Read Full Story
07:38 AM (IST) Jan 16

Karnataka News Live 16th January:ಪ್ರಾರ್ಥನೆ ಮಾತಿನ ಬೆನ್ನಲ್ಲೇ ಡಿಕೆಶಿ ಇಂದು ದಿಲ್ಲಿ ಭೇಟಿ ಕುತೂಹಲ

ಅಸ್ಸಾಂ ಚುನಾವಣೆ ಸಂಬಂಧ ಶುಕ್ರವಾರ ದೆಹಲಿಗೆ ತೆರಳುತ್ತಿದ್ದು, ಅಲ್ಲಿ ಎಲ್ಲ ನಾಯಕರನ್ನು ಭೇಟಿ ಮಾಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ರಾಹುಲ್‌ ಗಾಂಧಿ ಅವರು ನಮ್ಮ ನಾಯಕರು. ಅವರ ಭೇಟಿಯಲ್ಲಿ ಹೊಸತೇನಿಲ್ಲ ಎಂದು ತಿಳಿಸಿದರು.

Read Full Story