- Home
- News
- State
- Karnataka News Live: HD Kumaraswamy birthday - ಎಚ್‌ಡಿಕೆಗೆ ₹3.50 ಲಕ್ಷದ 25 ಗ್ರಾಂನ ಚಿನ್ನದ ಸರ ಕೊಟ್ಟ ಅಭಿಮಾನಿ!
Karnataka News Live: HD Kumaraswamy birthday - ಎಚ್‌ಡಿಕೆಗೆ ₹3.50 ಲಕ್ಷದ 25 ಗ್ರಾಂನ ಚಿನ್ನದ ಸರ ಕೊಟ್ಟ ಅಭಿಮಾನಿ!

ಬೆಂಗಳೂರು: ಬಿಜೆಪಿಗೆ ಹೊಸ ಸಾರಥಿ ನೇಮಕ ಬೆನ್ನಲ್ಲೇ ರಾಜ್ಯದ ಕೇಸರಿ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬೆಳಗಾವಿ ಅಧಿವೇಶನ ಬಿಟ್ಟು ದೆಹಲಿಗೆ ತೆರಳಿದ್ದಾರೆ. ಬಿಜೆಪಿ ರಾಷ್ಟ್ರೀಯ ನೂತನ ಕಾರ್ಯಾಧ್ಯಕ್ಷ ನಿತಿನ್ ನವೀನ್ ಅವರನ್ನು ಮಂಗಳವಾರ ಭೇಟಿ ಮಾಡಿ ಶುಭ ಕೋರಿದ್ದಾರೆ. ಅಲ್ಲದೆ, ರಾಜ್ಯದ ಪ್ರಸಕ್ತ ರಾಜಕೀಯ ಸ್ಥಿತಿಗತಿ, ಪಕ್ಷ ಸಂಘಟನೆ, ರಾಜ್ಯದಲ್ಲಿನ ಸಿಎಂ ಬದಲಾವಣೆ ಕುರಿತ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಬಿಜೆಪಿಗೆ ರಾಷ್ಟ್ರೀಯ ನೂತನ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ನಿತಿನ್ ನವೀನ್ ಅವರು, ರಾಜ್ಯದ ಬಗ್ಗೆಯೂ ಗಮನ ಹರಿಸುವ ಸಾಧ್ಯತೆಗಳಿದ್ದು, ಈ ಹಿನ್ನೆಲೆಯಲ್ಲಿ ಅವರ ಭೇಟಿ ಮಹತ್ವ ಪಡೆದಿದೆ.
Karnataka News Live 17 December 2025HD Kumaraswamy birthday - ಎಚ್‌ಡಿಕೆಗೆ ₹3.50 ಲಕ್ಷದ 25 ಗ್ರಾಂನ ಚಿನ್ನದ ಸರ ಕೊಟ್ಟ ಅಭಿಮಾನಿ!
Karnataka News Live 17 December 2025ಆಜಾನ್ ಚರ್ಚೆ ವೇಳೆ ದೀಪಾವಳಿ ಪಟಾಕಿ ವಿಚಾರ ಎತ್ತಿದ ಖಂಡ್ರೆ ಕೈ-ಬಿಜೆಪಿ ನಡುವೆ ಗದ್ದಲ
ಅಜಾನ್ ಲೌಡ್ ಸ್ಪೀಕರ್‌ಗಳ ಡೆಸಿಬಲ್ ಮಿತಿ ಕುರಿತ ಪ್ರಶ್ನೆಗೆ, ಪರಿಸರ ಸಚಿವ ಈಶ್ವರ್ ಖಂಡ್ರೆ ಅವರು ದೀಪಾವಳಿ ಪಟಾಕಿ ಮತ್ತು ಹಬ್ಬಗಳ ವಿಷಯ ಪ್ರಸ್ತಾಪಿಸಿದ್ದು, ಸದನದಲ್ಲಿ ತೀವ್ರ ವಾಗ್ವಾದಕ್ಕೆ ಕಾರಣವಾಯಿತು.
Karnataka News Live 17 December 2025ಶಿವಾನಂದ ಮಠದ ಸರಸ್ವತಿ ಸ್ವಾಮಿಯ ಕಾಮ ಪುರಾಣ; ಬೆತ್ತಲೆಯಾಗಿ ಎಣ್ಣೆ ಮಸಾಜ್ ಮಾಡಿಸ್ಕೊಂಡ!
ಸರಸ್ವತಿ ಸ್ವಾಮೀಜಿ ಮಹಿಳೆಯಿಂದ ಬೆತ್ತಲೆಯಾಗಿ ಎಣ್ಣೆ ಮಸಾಜ್ ಮಾಡಿಸಿಕೊಳ್ಳುವ ವಿಡಿಯೋ ವೈರಲ್ ಆಗಿದೆ. ಈ ಘಟನೆಯಿಂದ ಗ್ರಾಮಸ್ಥರು ಆಕ್ರೋಶಗೊಂಡಿದ್ದು, ಸ್ವಾಮೀಜಿ ತನ್ನನ್ನು ಬ್ಲಾಕ್‌ಮೇಲ್ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
Karnataka News Live 17 December 2025ನಮ್ಮ ಹೊಲ ನಮ್ಮ ದಾರಿ - ರೈತರಿಗೆ ಶುಭ ಸುದ್ದಿ, ನಿಮ್ಮ ಜಮೀನಿಗೆ ರಸ್ತೆ ಸಂಪರ್ಕ ಈಗ ಸುಲಭ!
ಕರ್ನಾಟಕ ಸರ್ಕಾರದ 'ನಮ್ಮ ಹೊಲ ನಮ್ಮ ದಾರಿ' ಯೋಜನೆಯು ಗ್ರಾಮೀಣ ರೈತರ ಕೃಷಿ ಭೂಮಿಗಳಿಗೆ ನೇರ ರಸ್ತೆ ಸಂಪರ್ಕ ಕಲ್ಪಿಸುವ ಗುರಿ ಹೊಂದಿದೆ. ಈ ಮೂಲಕ ದೊಡ್ಡ ವಾಹನಗಳಲ್ಲಿ ಕೃಷಿ ಉತ್ಪನ್ನಗಳನ್ನು ಸುಲಭವಾಗಿ ಸಾಗಿಸಬಹುದು, ಸಾರಿಗೆ ವೆಚ್ಚ ಕಡಿಮೆ ಮಾಡಬಹುದು ಮತ್ತು ಸ್ಥಳೀಯ ಜಗಳಗಳನ್ನು ತಪ್ಪಿಸಬಹುದು.
Karnataka News Live 17 December 2025ಗರ್ಭಧರಿಸಿ 9 ತಿಂಗಳು ಪೂರೈಸಿದ ಹಸುವಿಗೆ ಸೀಮಂತ ಮಾಡಿದ ಮಂಡ್ಯ ರೈತ
ಪಾಂಡವಪುರದ ನಿವೃತ್ತ ಶಿಕ್ಷಕ ರಾಮೇಗೌಡ ಅವರು, ತಾವು ಸಾಕುತ್ತಿದ್ದ ವರಲಕ್ಷ್ಮಿ ಎಂಬ ಗರ್ಭಿಣಿ ಹಸುವಿಗೆ ಸೀಮಂತ ಕಾರ್ಯಕ್ರಮವನ್ನು ನೆರವೇರಿಸಿದ್ದಾರೆ. ಮನುಷ್ಯರಿಗೆ ಮಾಡುವಂತೆಯೇ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿ ನೂರಾರು ಜನರಿಗೆ ಭೋಜನ ವ್ಯವಸ್ಥೆ ಮಾಡುವ ಮೂಲಕ ತಮ್ಮ ಅಪಾರ ಗೋ ಪ್ರೀತಿಯನ್ನು ಮೆರೆದಿದ್ದಾರೆ.
Karnataka News Live 17 December 2025ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್
ಈ ವರ್ಷ ದಕ್ಷಿಣ ಭಾರತದಲ್ಲೇ ಒಂದು ಲಕ್ಷದ ಆರು ಸಾವಿರ ಟೊಯೋಟಾ ಕಾರುಗಳು ಮಾರಾಟವಾಗಿದ್ದು, ಅದರಲ್ಲಿ ಬೆಂಗಳೂರಿನ ಪಾಲು ಶೇ.31ರಷ್ಟಿದೆ ಎಂದು ಟೊಯೋಟಾ ಕಂಪನಿಯ ದಕ್ಷಿಣ ಭಾರತದ ಉಪಾಧ್ಯಕ್ಷ ವೈಸ್‌ಲೈನ್ ಸಿಗಮಣಿ ತಿಳಿಸಿದರು.
Karnataka News Live 17 December 2025BBK 12 - ನ್ಯಾಯವಾಗಿಯೇ ಆಡಲ್ಲ, ನಾಯಿ ಬಾಲ ಡೊಂಕೆ; ಏನಿದು ಹೊಸ ಕಿರಿಕ್?
Karnataka News Live 17 December 2025Bengaluru New Year Rules - ಬೆಂಗಳೂರಿನಲ್ಲಿ ನ್ಯೂ ಇಯರ್ ಪಾರ್ಟಿಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿ! ಏನೇನು ನಿರ್ಬಂಧ ತಿಳ್ಕೊಳ್ಳಿ
Karnataka News Live 17 December 2025ಉತ್ತರ ಕರ್ನಾಟಕಕ್ಕೆ ಸಿಎಂ ಸಿದ್ದರಾಮಯ್ಯರಿಂದ ₹15,000 ಕೋಟಿ ವಿಶೇಷ ಅನುದಾನ - ಅಜಯ್ ಧರಂಸಿಂಗ್
North Karnataka special grant: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಉತ್ತರ ಕರ್ನಾಟಕಕ್ಕೆ ₹15,000 ಕೋಟಿ ವಿಶೇಷ ಅನುದಾನ ನೀಡಿದ್ದು, ಎಲ್ಲ ಕ್ಷೇತ್ರಗಳ ಸಮಸ್ಯೆಗಳನ್ನು ಕಡಿಮೆ ಮಾಡಲು ಸಾಕಷ್ಟು ಕೊಡುಗೆ ನೀಡಿದೆ ಎಂದು ಕಾಂಗ್ರೆಸ್ ಸದಸ್ಯ ಅಜಯ್ ಧರಂಸಿಂಗ್ ಹೇಳಿದ್ದಾರೆ.
Karnataka News Live 17 December 2025ಕೇಂದ್ರದ ಗಾಂಧೀಜಿ ದ್ವೇಷ ಬಯಲಾಗುತ್ತಿದೆ
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ(ಎಂ-ನರೇಗಾ) ಹೆಸರು ಮತ್ತು ಸ್ವರೂಪವನ್ನು ಬದಲಾಯಿಸಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಡವರು ಮತ್ತು ಮಹಾತ್ಮ ಗಾಂಧೀಜಿ ಬಗೆಗಿನ ತಮ್ಮ ದ್ವೇಷವನ್ನು ತಾನೇ ಬಯಲು ಮಾಡಿಕೊಂಡಿದ್ದಾರೆ.