Land acquisition and compensation distribution: ಬ್ಯಾಡಗಿ ಪಟ್ಟಣದ ಮುಖ್ಯರಸ್ತೆ ಅಗಲೀಕರಣಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಂಡಿದ್ದು, ಪುರಸಭೆ ಸಭಾಭವನದಲ್ಲಿ ಭೂಮಾಲೀಕರಿಗೆ ಪರಿಹಾರದ ಚೆಕ್‌ಗಳನ್ನು ವಿತರಿಸಲಾಗುತ್ತಿದೆ.
- Home
- News
- State
- Karnataka News Live: ಮುಖ್ಯರಸ್ತೆ ಅಗಲೀಕರಣ, ಭೂಮಾಲೀಕರಿಗೆ ₹ 1.5 ಕೋಟಿಗೂ ಅಧಿಕ ಮೊತ್ತದ ಪರಿಹಾರ ವಿತರಣೆ
Karnataka News Live: ಮುಖ್ಯರಸ್ತೆ ಅಗಲೀಕರಣ, ಭೂಮಾಲೀಕರಿಗೆ ₹ 1.5 ಕೋಟಿಗೂ ಅಧಿಕ ಮೊತ್ತದ ಪರಿಹಾರ ವಿತರಣೆ

ಚಿಕ್ಕಮಗಳೂರು: ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಆಡಳಿತ ಮಂಡಳಿಯ 13 ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಜಯಭೇರಿ ಬಾರಿಸಿದೆ. 13 ಸ್ಥಾನಗಳ ಪೈಕಿ 11ರಲ್ಲಿ ಬಿಜೆಪಿ, 2ರಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆದ್ದಿದ್ದಾರೆ. 8 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿತ್ತು. ಇನ್ನುಳಿದ 5 ಸ್ಥಾನಗಳಿಗೆ ಶನಿವಾರ ಚುನಾವಣೆ ನಡೆದಿದ್ದು, ಒಟ್ಟು 10 ಮಂದಿ ಕಣದಲ್ಲಿದ್ದರು. ಆ ಪೈಕಿ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ, ಜೆಡಿಎಸ್ ಎಂಎಲ್ಸಿ ಎಸ್.ಎಲ್.ಭೋಜೇಗೌಡ ಜಯಗಳಿಸಿದರು. ಚಿಕ್ಕಮಗಳೂರು ಕೃಷಿ ಪತ್ತಿನ ಸಂಘದ 2 ಸ್ಥಾನ ಬಗ್ಗೆ ಕುತೂಹಲವಿತ್ತು. ಇಲ್ಲಿ ರವಿ, ಭೋಜೇಗೌಡ ಸ್ಪರ್ಧಿಸಿದ್ದರು. 28 ಮತದಾರರನ್ನು ಪ್ರವಾಸಕ್ಕೆ ಕರೆದೊಯ್ದಿದ್ದ ರವಿ, ಭೋಜೇಗೌಡ ಅವರುಗಳನ್ನು ಶನಿವಾರ ಬೆಳಗ್ಗೆ ನೇರವಾಗಿ ಮತದಾನ ಕೇಂದ್ರಕ್ಕೆ ಕರೆ ತಂದರು. ಅಂತಿಮವಾಗಿ ರವಿ 27, ಭೋಜೇಗೌಡ 30 ಮತ ಪಡೆದು ಜಯಗಳಿಸಿದರು.
Karnataka News Live 18 January 2026ಮುಖ್ಯರಸ್ತೆ ಅಗಲೀಕರಣ, ಭೂಮಾಲೀಕರಿಗೆ ₹ 1.5 ಕೋಟಿಗೂ ಅಧಿಕ ಮೊತ್ತದ ಪರಿಹಾರ ವಿತರಣೆ
Karnataka News Live 18 January 2026ಅಜೀಂ ಪ್ರೇಮ್‌ಜಿ ಸಂಸ್ಥೆಯಿಂದ ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗೆ ₹4 ಸಾವಿರ ಕೋಟಿ
ರಾಜ್ಯ ಸರ್ಕಾರ ಮತ್ತು ಅಜೀಂ ಪ್ರೇಮ್‌ಜಿ ಪ್ರತಿಷ್ಠಾನದ ನಡುವೆ ಮಹತ್ವದ ಒಡಂಬಡಿಕೆ ನಡೆದಿದ್ದು, ಬೆಂಗಳೂರಿನಲ್ಲಿ 4 ಸಾವಿರ ಕೋಟಿ ರು. ವೆಚ್ಚದಲ್ಲಿ ಒಂದು ಸಾವಿರ ಹಾಸಿಗೆಗಳ ಸಾಮರ್ಥ್ಯದ ಮಾನವ ಬಹು ಅಂಗಾಂಗ ಕಸಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣವಾಗಲಿದೆ.
Karnataka News Live 18 January 2026Government Hospital - ಅಪ್ಪ ದಾನ ಮಾಡಿದ ಜಾಗದಲ್ಲಿ ಕಟ್ಟಿದ್ದ ಆಸ್ಪತ್ರೇಲಿ ಚಿಕಿತ್ಸೆ ಸಿಗದೆ ಮಗ ಸಾವು!
ತುಮಕೂರು ಜಿಲ್ಲೆಯ ವೈ.ಎನ್.ಹೊಸಕೋಟೆಯಲ್ಲಿ, ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಕೋಟ್ಯಂತರ ಮೌಲ್ಯದ ಭೂಮಿ ದಾನ ಮಾಡಿದ್ದ ಸಾದಿಕ್ ಸಾಬ್ ಅವರ ಪುತ್ರ ಸೈಯ್ಯದ್ ಅಕ್ರಂ, ಅದೇ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಮತ್ತು ಆ್ಯಂಬುಲೆನ್ಸ್ ಸೌಲಭ್ಯ ಸಿಗದೆ ಕೊನೆಯುಸಿರೆಳೆದಿದ್ದಾರೆ.
Karnataka News Live 18 January 2026ತಮಿಳ್ನಾಡಿನಲ್ಲಿ ಪುರುಷರಿಗೂ ಉಚಿತ ಬಸ್ ಪ್ರಯಾಣ - ಅಣ್ಣಾಡಿಎಂಕೆ
ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿರುವ ತಮಿಳುನಾಡಿನ ಎಐಎಡಿಎಂಕೆ ಪಕ್ಷವು ತನ್ನ ಮೊದಲ ಹಂತದ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಕರ್ನಾಟಕದ ಗೃಹಲಕ್ಷ್ಮಿ ಯೋಜನೆ ಮಾದರಿಯಲ್ಲಿ ಮನೆಯೊಡತಿಗೆ ತಲಾ 2 ಸಾವಿರ ರು., ಮಹಿಳೆಯರ ರೀತಿ ಪುರುಷರಿಗೂ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಭಾಗ್ಯ ಸೇರಿ ಐದು ಭರವಸೆ
Karnataka News Live 18 January 2026ಬಿಜೆಪಿ ಸಾಬೀತು ಮಾಡಿದ್ರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಕೀಯ ನಿವೃತ್ತಿ - ಜಮೀರ್ ಸವಾಲು
ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು, 2028ರ ವರೆಗೆ ಸಿಎಂ ಕುರ್ಚಿ ಖಾಲಿ ಇಲ್ಲ ಮತ್ತು ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರ ಕೊಳೆಗೇರಿ ಮಂಡಳಿಯಿಂದ ಒಂದು ಮನೆಯನ್ನೂ ನಿರ್ಮಿಸಿಲ್ಲ ಎಂದು ಆರೋಪಿಸಿದ್ದಾರೆ.
Karnataka News Live 18 January 2026ಸರ್ಕಾರ ಕೆಡವಲು ದಂಗೆಗೆ ಯತ್ನಿಸಿದ್ದ ಬೆಂಗಳೂರು ಉಗ್ರೆ!
ಆನ್‌ಲೈನ್‌ನಲ್ಲಿ ಮೂಲಭೂತವಾದವನ್ನು ಹರಡುತ್ತಿದ್ದ ಆರೋಪದಲ್ಲಿ ಕಳೆದ ಜುಲೈನಲ್ಲಿ ಬೆಂಗಳೂರಿನಲ್ಲಿ ಬಂಧಿತಳಾಗಿದ್ದ ಅಲ್‌ಖೈದಾ ಉಗ್ರಸಂಘಟನೆಯ ಸದಸ್ಯೆ ಶಮಾ ಪರ್ವೀನ್, ಸಶಸ್ತ್ರ ದಂಗೆಯ ಮೂಲಕ ಚುನಾಯಿತ ಸರ್ಕಾರ ಬೀಳಿಸಿ, ದೇಶದಲ್ಲಿ ಷರಿಯಾ ಕಾನೂನು ಜಾರಿಯ ಉದ್ದೇಶ ಹೊಂದಿದ್ದಳು
Karnataka News Live 18 January 2026ಲಕ್ಕುಂಡಿ ಇತಿಹಾಸಕ್ಕೆ ಹೊಸ ಆಯಾಮ ನೀಡ್ತಿರೋ ಉತ್ಖನನಕ್ಕೆ ಸ್ಥಳೀಯರಿಂದಲೇ ಅಪಸ್ವರ - ವಿರೋಧಕ್ಕೆ ಕಾರಣ ಏನು?
ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆಯುತ್ತಿರುವ ಪುರಾತತ್ವ ಉತ್ಖನನದಲ್ಲಿ ಶಿವಲಿಂಗದ ಪೀಠ ಮತ್ತು ಪಾನಿಬಟ್ಟಲು ಮಾದರಿಯ ಪ್ರಾಚೀನ ಅವಶೇಷಗಳು ಪತ್ತೆಯಾಗಿವೆ. ಈ ಐತಿಹಾಸಿಕ ಶೋಧವು ಕುತೂಹಲ ಕೆರಳಿಸಿದೆ.
Karnataka News Live 18 January 2026ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಸುಳ್ಳು ಸುದ್ದಿ - ₹20 ಕೋಟಿ ಮಾನನಷ್ಟ ಕೇಸ್
ಶಾಸಕ ರಮೇಶ ಜಾರಕಿಹೊಳಿ ಅವರ ಆರೋಗ್ಯದ ಬಗ್ಗೆ ಅಸ್ತಿತ್ವದಲ್ಲಿ ಇಲ್ಲದ ಮಾಧ್ಯಮದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ₹20 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ ಎಂದು ಅವರ ಅಭಿಮಾನಿಗಳ ಒಕ್ಕೂಟ ತಿಳಿಸಿದೆ.
Karnataka News Live 18 January 2026ಬೇಡ್ತಿ-ವರದಾ ಯೋಜನೆ ಶೀಘ್ರ ಜಾರಿ ಸಂಕಲ್ಪ ಮಾಡೋಣ - ಶಾಸಕ ಶ್ರೀನಿವಾಸ್ ಮಾನೆ
MLA Srinivas Mane: ವರದಾ-ಬೇಡ್ತಿ ನದಿ ಜೋಡಣೆ ವಿಷಯದಲ್ಲಿ ಯಾವುದೇ ರಾಜಿ ಇಲ್ಲದೆ ಯೋಜನೆ ಜಾರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸಿದ್ಧವಿವೆ ಎಂದು ಹಾನಗಲ್ಲ ಶಾಸಕ ಶ್ರೀನಿವಾಸ ಮಾನೆ ತಿಳಿಸಿದ್ದಾರೆ.