08:28 AM (IST) Dec 22

Karnataka News Live 22 December 2025ಪ್ರೀತಿಸಿ ಮದುವೆಯಾದ ಮಗಳ ರಕ್ತದಲ್ಲಿ ಕೈತೊಳೆದ ತಂದೆ; ಹುಬ್ಬಳ್ಳಿಯಲ್ಲಿ ಮರ್ಯಾದ ಹ*ತ್ಯೆ

ಹುಬ್ಬಳ್ಳಿ ಬಳಿಯ ಇನಾಂಪುರದಲ್ಲಿ ಅಂತರ್ಜಾತಿ ವಿವಾಹವಾದ ಗರ್ಭಿಣಿ ಮಗಳನ್ನು ತಂದೆಯೇ ಕೊಲೆ ಮಾಡಿರುವ ಮರ್ಯಾದಾ ಹತ್ಯೆ ನಡೆದಿದೆ. ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಈ ಕೃತ್ಯ ಎಸಗಲಾಗಿದ್ದು, ಪೊಲೀಸರು ಆರೋಪಿ ತಂದೆಯನ್ನು ಬಂಧಿಸಿದ್ದಾರೆ.
Read Full Story
08:19 AM (IST) Dec 22

Karnataka News Live 22 December 2025ಹೂವಿನಹಡಗಲಿ - ಕೇಳಿದ್ದು 237 ಕೊಠಡಿ, ಸರ್ಕಾರ ಕೊಟ್ಟಿದ್ದು ಒಂದೇ ಕೊಠಡಿ! ಮಕ್ಕಳ ಶಿಕ್ಷಣಕ್ಕೆ ಇಲ್ವಾ ಬೆಲೆ

ಹೂವಿನಹಡಗಲಿ ಮೀಸಲು ಕ್ಷೇತ್ರದ ಶಾಸಕ ಕೃಷ್ಣನಾಯ್ಕ ಅವರು ಬೆಳಗಾವಿ ಅಧಿವೇಶನದಲ್ಲಿ ಕ್ಷೇತ್ರದ ಗಂಭೀರ ಸಮಸ್ಯೆಗಳನ್ನು ಅನಾವರಣಗೊಳಿಸಿದರು. ಸೋರುತ್ತಿರುವ ಸರ್ಕಾರಿ ಶಾಲೆಗಳು, ಅಪೂರ್ಣ ನೀರಾವರಿ ಯೋಜನೆಗಳು, ಹದಗೆಟ್ಟ ರಸ್ತೆಗಳ ಬಗ್ಗೆ ಸರ್ಕಾರದ ಗಮನ ಸೆಳೆದು, ತಕ್ಷಣದ ಕ್ರಮಕ್ಕೆ ಒತ್ತಾಯಿಸಿದರು.

Read Full Story
08:05 AM (IST) Dec 22

Karnataka News Live 22 December 2025ಸದನದಲ್ಲಿ ಹೆಸರು ತಪ್ಪಾಗಿ ಹೇಳಿದರೆ ದಂಡ ಫಿಕ್ಸ್‌!

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲೂ ಹೆಸರಿನ ವಿಚಾರವಾಗಿ ಸ್ವಾರಸ್ಯಕರ ಚರ್ಚೆ ನಡೆಯಿತು. ಆ ಚರ್ಚೆ ಅಂತ್ಯದಲ್ಲಿ ಸ್ಪೀಕರ್ ಯು.ಟಿ.ಖಾದರ್‌ ಅವರು ಸದನದಲ್ಲಿ ಯಾರಾದರೂ ಇನ್ನೊಬ್ಬರ ಹೆಸರು ಸರಿಯಾಗಿ ಸಂಬೋಧಿಸದಿದ್ದರೆ ದಂಡ ಹಾಕುವ ಎಚ್ಚರಿಕೆಯನ್ನೂ ಕೊಡುವಂತಾಯಿತು.

Read Full Story
07:54 AM (IST) Dec 22

Karnataka News Live 22 December 2025'ಬೆಳಗಾವಿ ಜಿಲ್ಲೆ ವಿಭಜನಗೆ ಅಂತಲೇ ಸಿಎಂ ಬಂದಿದ್ದರು' ಸಿದ್ದರಾಮಯ್ಯ ಮನಸಲ್ಲಿದ್ದ ಬಿಗ್ ಪ್ಲಾನ್ ಬಿಚ್ಚಿಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್!

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ ಜಿಲ್ಲಾ ವಿಭಜನೆಗೆ ಮನಸ್ಸು ಮಾಡಿದ್ದು, ಶೀಘ್ರದಲ್ಲೇ ಅಳೆದು ತೂಗಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಹಣ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಭರವಸೆ ನೀಡಿದರು.

Read Full Story
07:50 AM (IST) Dec 22

Karnataka News Live 22 December 2025''ದ್ವೇಷ ಭಾಷಣ ಎಂದರೆ ಯಾವುದು ಅಂತ ಹೇಳಿ ''

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವದ ಮುಖವಾಡ ಹಾಕಿಕೊಂಡು ನಡೆಸುತ್ತಿರುವ ಸರ್ವಾಧಿಕಾರಿ ಆಡಳಿತಕ್ಕೆ ‘ದ್ವೇಷ ಭಾಷಣ ಪ್ರತಿಬಂಧಕ ಮಸೂದೆ’ ಸ್ಪಷ್ಟ ಸಾಕ್ಷಿ. ಈ ಮಸೂದೆ ಕೇವಲ ಒಂದು ಕಾನೂನಿನ ಕರಡಲ್ಲ; ಇದು ಕಾಂಗ್ರೆಸ್ ಪಕ್ಷದ ಹಳೆಯ, ಪ್ರಜಾಪ್ರಭುತ್ವ ವಿರೋಧಿ ‘ತುರ್ತು ಪರಿಸ್ಥಿತಿ ಮನಸ್ಥಿತಿ

Read Full Story
07:44 AM (IST) Dec 22

Karnataka News Live 22 December 2025BBK 12 - ದಿನಸಿ ಕಳೆದುಕೊಂಡ ಸದಸ್ಯರು; ಅಂದು ಗಿಲ್ಲಿ, ಇಂದು ಅಶ್ವಿನಿ; ಕಿಡಿ ಹಚ್ಚಿದ್ರಾ ರಾಶಿಕಾ?

ಬಿಗ್‌ಬಾಸ್ ಮನೆಯಲ್ಲಿ ದಿನಸಿ ಟಾಸ್ಕ್ ವೇಳೆ ಅಶ್ವಿನಿ ಗೌಡ ಮಾಡಿದ ತಪ್ಪಿನಿಂದಾಗಿ ಅವರು ಮತ್ತು ಗಿಲ್ಲಿ ನಡುವೆ ತೀವ್ರ ಜಗಳ ಉಂಟಾಗಿದೆ. ರಾಶಿಕಾ ಹಳೆಯ ಘಟನೆಯನ್ನು ಪ್ರಸ್ತಾಪಿಸಿದ್ದು, ಮಾತಿಗೆ ಮಾತು ಬೆಳೆದು ಮನೆಯಲ್ಲಿ ವಾತಾವರಣ ಬಿಸಿಯಾಗಿದೆ.
Read Full Story
07:33 AM (IST) Dec 22

Karnataka News Live 22 December 2025ಬಾಗಲಕೋಟೆ ಎನ್‌ಜಿಒ - ಬುದ್ಧಿಮಾಂದ್ಯನಿಗೆ ಹೊಡೆದ ನಾಲ್ವರು ಬಂಧನ

ಬಾಗಲಕೋಟೆಯ ಅನಧಿಕೃತ ದಿವ್ಯಜ್ಯೋತಿ ಎನ್‌ಜಿಒದಲ್ಲಿ ಬುದ್ಧಿಮಾಂದ್ಯ ಬಾಲಕನ ಮೇಲೆ ಕಾರದಪುಡಿ ಎರಚಿ, ಪೈಪ್‌ನಿಂದ ಅಮಾನವೀಯವಾಗಿ ಹಲ್ಲೆ ನಡೆಸಿದ ಶಿಕ್ಷಕ ದಂಪತಿ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯ ನಂತರ, ಶಾಲೆಯಲ್ಲಿದ್ದ ಮಕ್ಕಳನ್ನು ಅವರ ಪಾಲಕರೊಂದಿಗೆ ಕಳುಹಿಸಲಾಗಿದೆ.

Read Full Story
07:13 AM (IST) Dec 22

Karnataka News Live 22 December 2025ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಲೋಪ ಆಗಿಲ್ಲ, ತಾಂತ್ರಿಕ ಸಮಸ್ಯೆ ಎಂದ ತಂಗಡಗಿ

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಹಗರಣವಾಗಿಲ್ಲ ಮತ್ತು ಹಣ ಪಾವತಿಯಲ್ಲಿನ ವಿಳಂಬಕ್ಕೆ ಹಣಕಾಸು ಇಲಾಖೆಯ ತಾಂತ್ರಿಕ ತೊಂದರೆಯೇ ಕಾರಣ ಎಂದು ಸಚಿವ ಶಿವರಾಜ್ ತಂಗಡಗಿ ಸ್ಪಷ್ಟಪಡಿಸಿದ್ದಾರೆ. ಜನಪ್ರಿಯ ಕಾರ್ಯಕ್ರಮಗಳ ಬಗ್ಗೆ ಬಿಜೆಪಿ ಅನಗತ್ಯವಾಗಿ ಅಪಪ್ರಚಾರ ಮಾಡುತ್ತಿದೆ ಎಂದು ಅವರು ಆರೋಪಿಸಿದರು.
Read Full Story
07:03 AM (IST) Dec 22

Karnataka News Live 22 December 2025ಚಾಮರಾಜನಗರ - ಚಿನ್ನದ ಆಸೆಗೆ ಗುಡ್ಡವನ್ನೇ ಅಗೆದ ಕಿಡಿಗೇಡಿಗಳು!

ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ, ಜಿಎಸ್‌ಐ ಸಮೀಕ್ಷೆಯ ನಂತರ ಚಿನ್ನದ ನಿಕ್ಷೇಪ ಸಿಗುತ್ತದೆ ಎಂಬ ಆಸೆಯಿಂದ ಕಿಡಿಗೇಡಿಗಳು ಸುಮಾರು ಒಂದು ಎಕರೆ ಸರ್ಕಾರಿ ಗುಡ್ಡವನ್ನು ಅಗೆದಿದ್ದಾರೆ. ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸ್ಥಳೀಯರು ಪೊಲೀಸ್ ತನಿಖೆಗೆ ಒತ್ತಾಯಿಸಿದ್ದಾರೆ.
Read Full Story