11:30 PM (IST) May 26

Karnataka News Live ನದಿಗಳಿಗೆ ತ್ಯಾಜ್ಯ ನೀರು ಬಿಟ್ಟರೆ ಕ್ರಿಮಿನಲ್ ಕೇಸ್ - ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ

ತ್ಯಾಜ್ಯ ನೀರನ್ನು ಸಂಸ್ಕರಿಸದೆ ನದಿಗೆ ಬಿಡುವ ಸಂಸ್ಥೆಗಳು ಹಾಗೂ ವ್ಯಕ್ತಿಗಳ ವಿರುದ್ಧ ಸ್ಥಳೀಯ ಆಡಳಿತಗಳು ಕ್ರಿಮಿನಲ್ ಮೊಕದ್ದಮೆ ದಾಖಲಿಸಲಿವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಎಚ್ಚರಿಸಿದ್ದಾರೆ.

Read Full Story
11:12 PM (IST) May 26

Karnataka News Live BREAKING - ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ, ಸಿಎಂ ಸ್ಥಾನಕ್ಕೆ ಗುರುವಾರ ರಾಜೀನಾಮೆ ಸಾಧ್ಯತೆ

ಕರ್ನಾಟಕ ಕಾಂಗ್ರೆಸ್‌ನಲ್ಲಿನ ಅಧಿಕಾರ ಹಂಚಿಕೆ ಸೂತ್ರದಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಸಾಧ್ಯತೆಯಿದೆ. ಹೈಕಮಾಂಡ್ ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕರೆದೊಯ್ಯುವ ಯೋಜನೆ ರೂಪಿಸಿದ್ದು, ಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗುವ ರೇಸ್‌ನಲ್ಲಿದ್ದಾರೆ. 

Read Full Story
10:17 PM (IST) May 26

Karnataka News Live ಬೆಂಗಳೂರಿನಲ್ಲಿ ಎಬೋಲಾ ಆತಂಕ - ಉಗಾಂಡಾದಿಂದ ಬಂದ ಮಹಿಳೆ ಆಸ್ಪತ್ರೆಗೆ ಶಿಫ್ಟ್, ಏನಿದು ಪ್ರಕರಣ?

ರಾಜಧಾನಿ ಬೆಂಗಳೂರಿನಲ್ಲಿ ಎಬೋಲಾ ವೈರಸ್ ರೋಗ (EVD) ಶಂಕಿತ ಪ್ರಕರಣ ಪತ್ತೆಯಾಗಿರುವ ಮಾಹಿತಿ ಆತಂಕ ಮೂಡಿಸಿದೆ. ಉಗಾಂಡಾ ದೇಶದಿಂದ ಭಾರತಕ್ಕೆ ಆಗಮಿಸಿದ್ದ 28 ವರ್ಷದ ವಿದೇಶಿ ಮಹಿಳೆಯಲ್ಲಿ..

Read Full Story
09:54 PM (IST) May 26

Karnataka News Live ಚಳಿಗಾಲದ ಅಧಿವೇಶನ ಸ್ಥಳ ಬದಲಾಗುತ್ತಾ? ಸಚಿವ ಎಚ್.ಕೆ.ಪಾಟೀಲ ಹೇಳಿದ್ದೇನು?

ಬೆಳಗಾವಿಯಲ್ಲೇ ಚಳಿಗಾಲದ ಅಧಿವೇಶನ ನಡೆಸಲಾಗುವುದು. ಅದನ್ನು ಬೇರೆಡೆಗೆ ಸ್ಥಳಾಂತರಿಸುವ ಕುರಿತು ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ರಾಜ್ಯದ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.

Read Full Story
09:24 PM (IST) May 26

Karnataka News Live ಶಿಕ್ಷಣ ಸಚಿವ ಮಧು ಬಂಗಾರಪ್ಪರನ್ನು ಬದಲಿಸಿ - ಸಿಎಂಗೆ ಎಚ್.ವಿಶ್ವನಾಥ್ ಮನವಿ ಮಾಡಿದ್ದೇಕೆ?

ರಾಜ್ಯದಲ್ಲಿ ಶಾಲಾ ಶಿಕ್ಷಣ ಅದೋಗತಿಗೆ ತಲುಪಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಬದಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಧಾನಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಎಚ್.ವಿಶ್ವನಾಥ್ ಮನವಿ ಮಾಡಿದರು.

Read Full Story
08:50 PM (IST) May 26

Karnataka News Live ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಜನರು ನಂಬಿಕೆ ಬೆಳೆಸಿಕೊಳ್ಳಬೇಕು - ಸಚಿವ ಎನ್.ಚಲುವರಾಯಸ್ವಾಮಿ

ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಜನರು ನಂಬಿಕೆ ಬೆಳೆಸಿಕೊಳ್ಳಬೇಕು. ವೈದ್ಯರು ತಮ್ಮ ಬಳಿಗೆ ಬರುವ ರೋಗಿಗಳನ್ನು ತಾಳ್ಮೆಯಿಂದ ಪರೀಕ್ಷೆ ಮಾಡಿ ಉತ್ತಮ ಚಿಕಿತ್ಸೆ ನೀಡಬೇಕು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕರೆ ನೀಡಿದರು.

Read Full Story
08:11 PM (IST) May 26

Karnataka News Live 'ಲೋ ನವೀನ' ಸಿನಿಮಾ ವೀಕ್ಷಿಸಿದ ಅಶ್ವಿನಿ ಪುನೀತ್ ರಾಜ್‌ಕುಮಾರ್ - ನವೀನ್ ಸಜ್ಜುಗೆ ಹೇಳಿದ ಮಾತು ವೈರಲ್!

ಗಾಯಕ, ಸಂಗೀತ ನಿರ್ದೇಶಕ ಹಾಗೂ ಇದೀಗ ನಾಯಕನಟನಾಗಿ ಗುರುತಿಸಿಕೊಂಡಿರುವ ನವೀನ್ ಸಜ್ಜು ಅಭಿನಯದ ಚೊಚ್ಚಲ ಸಿನಿಮಾ ‘ಲೋ ನವೀನ’ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದುಕೊಳ್ಳುತ್ತಿದ್ದು, ಇದೀಗ ದೊಡ್ಮನೆ ಕುಟುಂಬದಿಂದಲೂ ವಿಶೇಷ ಪ್ರಶಂಸೆ ಸಿಕ್ಕಿದೆ.

Read Full Story
07:50 PM (IST) May 26

Karnataka News Live ಕರ್ನಾಟಕದ ‘ದ್ವೇಷ ಭಾಷಣ ತಡೆ ವಿಧೇಯಕ’ಕ್ಕೆ ಕೇಂದ್ರದ ಬ್ರೇಕ್ - ಹಾಲಿ ಕಾನೂನುಗಳೇ ಸಾಕು ಎಂದ ಗೃಹ ಸಚಿವಾಲಯ

ಕರ್ನಾಟಕದಲ್ಲಿ ದ್ವೇಷ ಭಾಷಣ ಮತ್ತು ಅಪರಾಧಗಳನ್ನು ತಡೆಯಲು ಸಿದ್ದರಾಮಯ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿದ್ದ 'ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷದ ಅಪರಾಧಗಳ (ತಡೆಗಟ್ಟುವಿಕೆ) ವಿಧೇಯಕ'ವನ್ನು ಕೇಂದ್ರ ಗೃಹ ಸಚಿವಾಲಯ ತಿರಸ್ಕರಿಸಿದೆ. 

Read Full Story
07:27 PM (IST) May 26

Karnataka News Live ಹೊಸ ಹೇರ್‌ಸ್ಟೈಲ್‌ನಲ್ಲಿ ಗುರುತೇ ಸಿಗದಷ್ಟು ಬದಲಾದ್ರಾ 'ಕೃಷ್ಣ ರುಕ್ಕು' ನಟಿ - ಇಲ್ಲಿವೆ ಮೌನಾ ಗುಡ್ಡೆಮನೆ ಫೋಟೋಸ್!

ಹೊಸ ಹೇರ್‌ಸ್ಟೈಲ್ ಮೂಲಕ ಮತ್ತೊಮ್ಮೆ ಅಭಿಮಾನಿಗಳ ಮನಗೆದ್ದಿರುವ ಕಿರುತೆರೆಯ ಜನಪ್ರಿಯ ನಟಿ ಮೌನಾ ಗುಡ್ಡೆಮನೆ ಅವರ ಈ ಲುಕ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

Read Full Story
07:11 PM (IST) May 26

Karnataka News Live ರಾಜ್ಯ ರಾಜಕೀಯದಲ್ಲಿ ಹೈವೋಲ್ಟೇಜ್‌ ಸಸ್ಪೆನ್ಸ್ - ಸಿಎಂ ಸಿದ್ದರಾಮಯ್ಯಗೆ ರಾಜ್ಯಸಭೆ ಆಫರ್ ನೀಡಿದ ಕಾಂಗ್ರೆಸ್ ಹೈಕಮಾಂಡ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ರಾಜ್ಯಸಭೆ ಸ್ಥಾನದ ಆಫರ್ ನೀಡಿದೆ ಎನ್ನಲಾಗಿದೆ. ಈ ಪ್ರಸ್ತಾವನೆಯನ್ನು ಸಿದ್ದರಾಮಯ್ಯ ತಕ್ಷಣವೇ ಒಪ್ಪಿಕೊಂಡಿಲ್ಲ.

Read Full Story
06:52 PM (IST) May 26

Karnataka News Live ಬೆಂಗಳೂರಲ್ಲಿ ಭಾರೀ ಮಳೆ - ಮೆಟ್ರೋ ಹಳಿ ಮೇಲೆ ಬಿದ್ದ ಮರದ ಕೊಂಬೆ, ಪರ್ಪಲ್ ಲೈನ್ ಮೆಟ್ರೋ ಸಂಚಾರ ತಾತ್ಕಲಿಕ ಸ್ಥಗಿತ!

ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಮೆಟ್ರೋ ಹಳಿಯ ಮೇಲೆ ಮರದ ಕೊಂಬೆ ಬಿದ್ದ ಪರಿಣಾಮ, ನೇರಳೆ ಮಾರ್ಗದ ವೈಟ್‌ಫೀಲ್ಡ್ ಮತ್ತು ಗರುಡಾಚಾರ್ ಪಾಳ್ಯ ನಡುವಿನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸಂಜೆ ಪೀಕ್ ಅವರ್‌ನಲ್ಲಿ ಘಟನೆ ನಡೆದಿದ್ದರಿಂದ ಸಾವಿರಾರು ಪ್ರಯಾಣಿಕರು ತೊಂದರೆ ಅನುಭವಿಸಿದರು.

Read Full Story
06:50 PM (IST) May 26

Karnataka News Live ನನ್ನನ್ನು ನನ್ನ ಪಾಡಿಗೆ ಬದುಕಲು ಬಿಡಿ - ಬ್ರೇಕಪ್ ಬಗ್ಗೆ ಹೇಳಿ ಕಣ್ಣೀರಿಟ್ಟ ನಟಿ ಕೃಷಿ ತಾಪಂಡ!

ನಟಿ ಹಾಗೂ ಮಾಜಿ ಬಿಗ್‌ಬಾಸ್ ಸ್ಪರ್ಧಿ ಕೃಷಿ ತಾಪಂಡ ತಮ್ಮ ವೈಯಕ್ತಿಕ ಜೀವನದ ವಿಚಾರಗಳಿಂದ ಹಲವು ಬಾರಿ ಸುದ್ದಿಯಾಗಿದ್ದರು. ಇದೀಗ ಖಾಸಗಿ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ, ತಮ್ಮ ಜೀವನದಲ್ಲಿ ನಡೆದ ಕಹಿ ಘಟನೆಗಳನ್ನು ನೆನೆದು ಕಣ್ಣೀರಿಟ್ಟಿದ್ದಾರೆ.

Read Full Story
06:32 PM (IST) May 26

Karnataka News Live ಸಿಎಂ ಬದಲಾವಣೆ ಚರ್ಚೆ ಬರೀ ನಿಮ್ಮ ಊಹೆ, ರಾಜ್ಯಸಭೆ ಚುನಾವಣೆ ಬಗ್ಗೆ ಮಾತ್ರ ಚರ್ಚೆ ಎಂದ ಕೆಸಿ ವೇಣುಗೋಪಾಲ್‌

ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಉನ್ನತ ಮಟ್ಟದ ಸಭೆಯ ಬಳಿಕ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಎಲ್ಲಾ ವದಂತಿಗಳನ್ನು ಅವರು ತಳ್ಳಿಹಾಕಿದ್ದಾರೆ.

Read Full Story
06:11 PM (IST) May 26

Karnataka News Live 'ಸುಪ್ರೀಂ ತೀರ್ಪಿನ ಉಲ್ಲಂಘನೆ' ಮೇಕೆದಾಟು ಯೋಜನೆಗೆ ತಮಿಳುನಾಡು ಸಿಎಂ ಜೋಸೆಫ್‌ ವಿಜಯ್‌ ವಿರೋಧ, ಪ್ರಧಾನಿಗೆ ಪತ್ರ!

ಕರ್ನಾಟಕದ ಉದ್ದೇಶಿತ ಮೇಕೆದಾಟು ಯೋಜನೆಗೆ ತಮಿಳುನಾಡು ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಯೋಜನೆಯು ಸುಪ್ರೀಂ ಕೋರ್ಟ್ ತೀರ್ಪು ಮತ್ತು ಕಾವೇರಿ ನ್ಯಾಯಾಧೀಕರಣದ ಆದೇಶದ ಉಲ್ಲಂಘನೆಯಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಆರೋಪಿಸಿದ್ದಾರೆ.

Read Full Story
04:52 PM (IST) May 26

Karnataka News Live ಶಿವಾನಂದ ನೀಲಣ್ಣನವರ್ 5 ಕೋಟಿ ಮೌಲ್ಯದ ನಾಲ್ಕು ಐಷಾರಾಮಿ ಕಾರು ಸೀಜ್, ಬೆಳಗಾವಿ ವಂಚನೆ ಕೇಸ್

ಬೆಳಗಾವಿಯಲ್ಲಿನ ಬಹುಕೋಟಿ ವಂಚನೆ ಪ್ರಕರಣದ ತನಿಖೆ ತೀವ್ರಗೊಂಡಿದೆ. 45000 ಕೋಟಿ ರೂಪಾಯಿ ಹಗರಣದಲ್ಲಿ ಅರೆಸ್ಟ್ ಆಗಿರುವ ಶಿವಾನಂದ ನೀಲಣ್ಣನವರ್ ಐಷಾರಾಮಿ ಕಾರುಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ.

Read Full Story
04:25 PM (IST) May 26

Karnataka News Live ಭಟ್ಕಳ ದುರಂತ - ಇವರು ಎಣಿಸಿದ್ದೇ ಒಂದು, ವಿಧಿಯಾಟವೇ ಮತ್ತೊಂದು! ಒಂದು ತುತ್ತು ಊಟಕ್ಕೆ 11 ಜೀವಗಳು ಬಲಿ!

ವರದಿ: ರಾಘವೇಂದ್ರ ಹೆಬ್ಬಾರ

ಭಟ್ಕಳದ ಸಾರದಹೊಳೆ ಗ್ರಾಮದ 11 ಬಡ ಕೂಲಿ ಕಾರ್ಮಿಕರು ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಹೊಳೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ದುರಂತದಿಂದ ಇಡೀ ಗ್ರಾಮವೇ ಶೋಕಸಾಗರದಲ್ಲಿ ಮುಳುಗಿದ್ದು, ಒಂದೇ ಕುಟುಂಬದ ಎಂಟು ಮಂದಿ ಸೇರಿದಂತೆ ಮೃತರ ಸಾಮೂಹಿಕ ಅಂತ್ಯಸಂಸ್ಕಾರ ನೆರವೇರಿತು.

Read Full Story
03:53 PM (IST) May 26

Karnataka News Live ಬೆಳಗಾವಿಯ ಅಥಣಿಯಿಂದ ಮಹಾರಾಷ್ಟ್ರ, ಆಂಧ್ರಕ್ಕೆ ಹೊಸ ಸಾರಿಗೆ ಬಸ್ ಆರಂಭ, ಅಂತಾರಾಜ್ಯ ಬಸ್ ಸೇವೆಯ ಸಮಯ ಹೀಗಿದೆ

ಶಾಸಕ ಲಕ್ಷ್ಮಣ ಸವದಿ ಅವರು ಅಥಣಿಯಿಂದ ನೆರೆಯ ಮಹಾರಾಷ್ಟ್ರದ ಪುಣೆ ಮತ್ತು ಕೊಲ್ಲಾಪುರಕ್ಕೆ ನೂತನ ಅಂತಾರಾಜ್ಯ ಬಸ್ ಸೇವೆಗೆ ಚಾಲನೆ ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ಆಂಧ್ರಪ್ರದೇಶದ ಶ್ರೀಶೈಲಂಗೆ ಹಾಗೂ ವಿದ್ಯಾರ್ಥಿಗಳಿಗಾಗಿ ವಿಶೇಷ ಬಸ್ ಸೇವೆ ಆರಂಭಿಸುವ ಭರವಸೆಯನ್ನೂ ನೀಡಿದ್ದಾರೆ.
Read Full Story
03:39 PM (IST) May 26

Karnataka News Live ಬೆಂಗಳೂರಿಗೆ ಆಲಿಕಲ್ಲು ಮಳೆ ಎಚ್ಚರಿಕೆ, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಚಿಕ್ಕಮಗಳೂರಿನಲ್ಲಿ ಬೆಳಗ್ಗಿನಿಂದಲೇ ಮಳೆ

ಭಾರತೀಯ ಹವಾಮಾನ ಇಲಾಖೆಯು (IMD) ಕರ್ನಾಟಕದಾದ್ಯಂತ ಮುಂದಿನ 5-6 ದಿನಗಳ ಕಾಲ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದ್ದು, ಶೀಘ್ರದಲ್ಲೇ ಮುಂಗಾರು ಮಾರುತಗಳು ರಾಜ್ಯವನ್ನು ಪ್ರವೇಶಿಸಲಿವೆ.
Read Full Story
03:39 PM (IST) May 26

Karnataka News Live ಬೆಂಗಳೂರು ವಾಹನ ಸವಾರರೇ ಗಮನಿಸಿ - ಕಾಮರಾಜ್ ರಸ್ತೆ 60 ದಿನ ಬಂದ್, ಸಂಚಾರ ಮಾರ್ಗ ಬದಲಾವಣೆ, ಇಲ್ಲಿದೆ ಕಂಪ್ಲೀಟ್ ಗೈಡ್

ಬೆಂಗಳೂರಿನ ಕಾಮರಾಜ್ ರಸ್ತೆಯಲ್ಲಿ ಕಲ್ವರ್ಟ್ ನಿರ್ಮಾಣ ಕಾಮಗಾರಿಯಿಂದಾಗಿ, ಮುಂದಿನ 60 ದಿನಗಳ ಕಾಲ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಪುಲಕೇಶಿನಗರ ಮತ್ತು ಬಾಣಸವಾಡಿ ಕಡೆಗೆ ಹೋಗುವ ವಾಹನ ಸವಾರರಿಗೆ ಸಂಚಾರಿ ಪೊಲೀಸರು ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ.
Read Full Story
03:09 PM (IST) May 26

Karnataka News Live ಮೇಕೆದಾಟು ಯೋಜನೆ ಬಗ್ಗೆ ಡಿಕೆಶಿ ಇಲ್ಲಿ ಮಾತಾಡಿದ್ದಕ್ಕೆ, ತಮಿಳುನಾಡಲ್ಲಿ ಹೊತ್ತಿಕೊಂಡ ಜ್ವಾಲೆ, ತೀವ್ರ ರಾಜಕೀಯ ಸಂಘರ್ಷ

ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮೇಕೆದಾಟು ಯೋಜನೆ ಕುರಿತ ಹೇಳಿಕೆಯು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಈ ಹೇಳಿಕೆಯನ್ನು ಖಂಡಿಸಿರುವ ತಮಿಳುನಾಡಿನ ಆಡಳಿತ ಮತ್ತು ವಿರೋಧ ಪಕ್ಷಗಳು, ಕರ್ನಾಟಕದ ವಿರುದ್ಧ ಕಾನೂನು ಹೋರಾಟವನ್ನು ತೀವ್ರಗೊಳಿಸಲು ತಮ್ಮ ಸರ್ಕಾರದ ಮೇಲೆ ಒತ್ತಡ ಹೇರುತ್ತಿವೆ. ಈ ಬೆಳವಣಿಗೆಯು ಕಾವೇರಿ ನದಿ ನೀರು ಹಂಚಿಕೆ ವಿವಾದವನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿದೆ.
Read Full Story