LIVE NOW
Karnataka News Live: ದಾಖಲೆ ಸಹಿತ ಮತ್ತೆ ಎಸ್ಐಟಿ ಕಚೇರಿಗೆ ಹಾಜರಾದ ತಿಮರೋಡಿ

ಸಾರಾಂಶ
ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಶನಿವಾರ ಮತ್ತೆ ಮಂಗಳೂರಿನಲ್ಲಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಕಚೇರಿಗೆ ಹಾಜರಾದರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಎಸ್ಐಟಿ ತನಿಖಾಧಿಕಾರಿ ಲೋಕೇಶ್ ಜಗಲಾಸರ್ ಅವರ ಎದುರು ಹಲವು ದಾಖಲೆಗಳ ಸಹಿತ ಹಾಜರಾದ ತಿಮರೋಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಮಾಹಿತಿಗಳನ್ನು ಲಿಖಿತ ರೂಪದಲ್ಲಿ ನೀಡುವಂತೆ ಎಸ್ಐಟಿ ಅಧಿಕಾರಿಗಳು ಸೂಚಿಸಿದ್ದ ಹಿನ್ನೆಲೆಯಲ್ಲಿ ದಾಖಲೆಗಳ ಸಹಿತ ಆಗಮಿಸಿದ್ದಾರೆ. ತನಿಖೆಗೆ ಸಂಬಂಧಿಸಿದ ಹಲವು ವಿಚಾರಗಳ ಕುರಿತು ತಮ್ಮಲ್ಲಿರುವ ಮಾಹಿತಿಯನ್ನು ಲಿಖಿತವಾಗಿ ದಾಖಲಿಸಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.
ಈಗಾಗಲೇ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿರುವ ಎಸ್ಐಟಿ, ಮಹೇಶ್ ಶೆಟ್ಟಿ ತಿಮರೋಡಿ ಅವರಿಂದ ಲಿಖಿತ ಹೇಳಿಕೆ ಹಾಗೂ ದಾಖಲೆಗಳನ್ನು ಪಡೆದುಕೊಳ್ಳುವ ಪ್ರಕ್ರಿಯೆ ಮುಂದುವರಿಸಿದೆ.