09:08 AM (IST) Jan 29

Karnataka News Live 29th January: ಪೆನ್‌ ಪಾಯಿಂಟ್‌ ಕ್ರಿಕೆಟ್‌ - ಎಮಾರ್‌ ಸ್ಟ್ರೈಕರ್ಸ್‌ ಚಾಂಪಿಯನ್‌, ಅಟ್ಯಾಕರ್ಸ್‌ ರನ್ನರ್‌-ಅಪ್‌

'ಪೆನ್‌ ಪಾಯಿಂಟ್‌ ಸ್ನೇಹ ವೇದಿಕೆ' ಆಯೋಜಿಸಿದ್ದ 5ನೇ ಆವೃತ್ತಿಯ ಕ್ರಿಕೆಟ್‌ ಫೆಸ್ಟ್‌ನಲ್ಲಿ ಎಮಾರ್‌ ಸ್ಟ್ರೈಕರ್ಸ್‌ ತಂಡವು ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಕಾಸರಗೋಡಿನ ಲಾರ್ಡ್ಸ್‌ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ, ಅಟ್ಯಾಕರ್ಸ್‌ ತಂಡವನ್ನು ಸೋಲಿಸಿ ಎಮಾರ್‌ ಸ್ಟ್ರೈಕರ್ಸ್‌ ಚಾಂಪಿಯನ್ ಆಯಿತು.

Read Full Story
08:45 AM (IST) Jan 29

Karnataka News Live 29th January: HPL Season 05 - ಟ್ರೋಫಿ ಗೆದ್ದ ಸಮನ್ವಯ ಸ್ಟಾರ್ಸ್; ಫೈನಲ್‌ನಲ್ಲಿ ಕಲ್ಲೂರು ಕಲಿಗಳಿಗೆ ನಿರಾಸೆ!

ಶಿವಮೊಗ್ಗದ ಹೆದ್ದಾರಿಪುರದಲ್ಲಿ ನಡೆದ ಐದನೇ ಸೀಸನ್ ಹೆದ್ದಾರಿಪುರ ಪ್ರೀಮಿಯರ್ ಲೀಗ್ (HPL) ಕ್ರಿಕೆಟ್ ಟೂರ್ನಿಯಲ್ಲಿ, ಸಮನ್ವಯ ಸ್ಟಾರ್ಸ್ ಕೊಡಸೆ-ಗಿಣಿಸೆ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಫೈನಲ್‌ನಲ್ಲಿ ಕಲ್ಲೂರು ಕಲಿಗಳ ತಂಡವನ್ನು 25 ರನ್‌ಗಳಿಂದ ಮಣಿಸಿ ಪ್ರಶಸ್ತಿ ಗೆದ್ದುಕೊಂಡಿತು. 

Read Full Story
08:44 AM (IST) Jan 29

Karnataka News Live 29th January: ಸರ್ಕಾರಿ ಅಧಿಕಾರಿ, ನೌಕರರಿಗೆ ಖಾದಿ ದಿರಿಸು ಕಡ್ಡಾಯ ?

ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಖಾದಿ ಉಡುಪು ಧರಿಸುವುದನ್ನು ಕಡ್ಡಾಯಗೊಳಿಸುವ ಸಂಬಂಧ ನಿರ್ಧರಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸರ್ಕಾರಿ ನೌಕರರ ಸಂಘಗಳ ಪ್ರಮುಖರೊಂದಿಗೆ ಗುರುವಾರ ಸಭೆ ನಡೆಸಲಾಗುತ್ತಿದೆ.

Read Full Story
08:26 AM (IST) Jan 29

Karnataka News Live 29th January: ದಿಲ್ಲಿ ಪಂಜಾಬಲ್ಲಿ ಐಷಾರಾಮಿ ಕಾರ್ ಕದ್ದು ಬೆಂಗ್ಳೂರಲ್ಲಿ ಮಾರ್ತಿದ್ರು! ಇವರು ಸಿಕ್ಕಿಬಿದ್ದಿದ್ದೇ ಇಂಟ್ರೆಸ್ಟಿಂಗ್ ಸ್ಟೋರಿ

ದೆಹಲಿ, ಪಂಜಾಬ್‌ನಂತಹ ರಾಜ್ಯಗಳಲ್ಲಿ ಐಷಾರಾಮಿ ಕಾರುಗಳನ್ನು ಕದ್ದು, ನಕಲಿ ದಾಖಲೆ ಸೃಷ್ಟಿಸಿ ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಅಂತಾರಾಜ್ಯ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಸ್ಕೂಟರ್ ಕಳ್ಳತನದ ತನಿಖೆ ವೇಳೆ ಇಬ್ಬರು ಡೀಲರ್‌ಗಳನ್ನು ಬಂಧಿಸಲಾಗಿದೆ.

Read Full Story
08:16 AM (IST) Jan 29

Karnataka News Live 29th January: ದುಬಾರಿ ಸೀರೆ ಉಟ್ಟು ಕಿಸೆಗಳ್ಳತನ, ಮೇಕಪ್‌ಗೆ ₹5 ಲಕ್ಷ ಖರ್ಚು ಮಾಡೋ ಕಳ್ಳಿ ಸೆರೆ!

ಬೆಂಗಳೂರಿನಲ್ಲಿ ಜಾತ್ರೆ ಮತ್ತು ದೇವಾಲಯಗಳಲ್ಲಿ ಜೇಬುಗಳ್ಳತನ ಮಾಡುತ್ತಿದ್ದ ದಂಪತಿಯನ್ನು ಕೆ.ಆರ್.ಪುರ ಪೊಲೀಸರು ಬಂಧಿಸಿದ್ದಾರೆ. ತನ್ನ ಮೇಲೆ ಅನುಮಾನ ಬಾರದಿರಲು ಆರೋಪಿ ಮಹಿಳೆ ಪ್ರತಿ ತಿಂಗಳು ಮೇಕಪ್‌ಗಾಗಿ 5 ಲಕ್ಷ ರೂಪಾಯಿ ಖರ್ಚು ಮಾಡುತ್ತಿದ್ದಳು. 

Read Full Story
08:01 AM (IST) Jan 29

Karnataka News Live 29th January: ಜೈಲಲ್ಲೂ ಕಿಲ್ಲಿಂಗ್‌ ಸ್ಟಾರ್‌ ದರ್ಶನ್‌ಗೆ ಅಭಿಮಾನಿ ಕಾಟ, ವಾರ್ಡನ್‌ ಎತ್ತಂಗಡಿ ಮಾಡಿದ ಅಲೋಕ್‌ ಕುಮಾರ್‌!

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಟ ದರ್ಶನ್ ಅವರನ್ನು ನಿಯಮಬಾಹಿರವಾಗಿ ಭೇಟಿ ಮಾಡಲು ಸ್ನೇಹಿತನಿಗೆ ಅವಕಾಶ ಮಾಡಿಕೊಟ್ಟಿದ್ದಕ್ಕೆ ಜೈಲು ವಾರ್ಡನ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಡಿಜಿಪಿ ಅಲೋಕ್ ಕುಮಾರ್ ಅವರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಈ ಕರ್ತವ್ಯಲೋಪ ಬೆಳಕಿಗೆ ಬಂದಿದೆ.

Read Full Story
07:36 AM (IST) Jan 29

Karnataka News Live 29th January: ಜನರೇ, ಈ ಸಲ ಸುಡು ಬಿಸಿಲು ಎದುರಿಸಲು ಸಜ್ಜಾಗಿ! ವಾರ್ನಿಂಗ್ !

ಈ ವರ್ಷದ ಬೇಸಿಗೆಯಲ್ಲಿ ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿರಲಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಉಷ್ಣಾಂಶ ಸರಾಸರಿಗಿಂತ 1 ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಿಅರಲಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.

Read Full Story
07:36 AM (IST) Jan 29

Karnataka News Live 29th January: ಉತ್ಪನ್ನ ಮೌಲ್ಯವರ್ಧನೆಗೆ ಒತ್ತು ನೀಡಿ: ಶಿವಪ್ರಕಾಶ್‌

ನವುಲೆಯ ಕೃಷಿ ಕಾಲೇಜಿನಲ್ಲಿ ಅಡಕೆ ಸಮೃದ್ಧಿಗಾಗಿ ಕಾಳು ಮೆಣಸಿನ ಅಂತರ ಬೆಳೆ ಎಂಬ ವಿಷಯದ ಬಗ್ಗೆ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ‘ಅಡಕೆಯಲ್ಲಿ ಅಂತರ ಬೆಳೆಯಾಗಿ ಕಾಳುಮೆಣಸು’ ಎಂಬ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.ಕೆಪೆಕ್‌ ಎಂ.ಡಿ. ಸಿ.ಎನ್. ಶಿವಪ್ರಕಾಶ್ ಮತ್ತಿತರರು ಹಾಜರಿದ್ದರು.

Read Full Story
07:36 AM (IST) Jan 29

Karnataka News Live 29th January: ಫಾರಿನ್‌ ಟೂರ್‌ ಡ್ರಗ್ಸ್ ಮಾಫಿಯಾ ವಿರುದ್ಧ ಭರ್ಜರಿ ಬೇಟೆ

ಡ್ರಗ್ಸ್ ಮಾಫಿಯಾ ವಿರುದ್ಧ ಕಾರ್ಯಾಚರಣೆ ನಡೆಸಿದ ಅಮೃತಹಳ್ಳಿ ಠಾಣೆ ಪೊಲೀಸರು, ‘ಥೈಲ್ಯಾಂಡ್ ಪ್ರವಾಸ’ಕ್ಕೆ ಕಳುಹಿಸಿ ಅಲ್ಲಿಂದ ಕಳ್ಳ ಹಾದಿಯಲ್ಲಿ ವಿಮಾನದ ಮೂಲಕ ಕೆಜಿಗಟ್ಟಲೇ ಡ್ರಗ್ಸ್ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಭೇದಿಸಿ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ 10 ಮಂದಿ ಸೆರೆ

Read Full Story
07:35 AM (IST) Jan 29

Karnataka News Live 29th January: ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ : 8 ತಿಂಗಳಲ್ಲಿ ₹3 ಲಕ್ಷ ಹೆಚ್ಚಳ!

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆಯ ನಾಗಲೋಟ ಮುಂದುವರೆದಿದ್ದು ಬುಧವಾರ ಚೆನ್ನೈ ಮತ್ತು ಹೈದರಾಬಾದ್‌ ಮಾರುಕಟ್ಟೆಯಲ್ಲಿ 1 ಕೇಜಿ ಬೆಳ್ಳಿ ಬೆಲೆಯು 4 ಲಕ್ಷ ರು.ಗೆ ತಲುಪಿದೆ. ಮತ್ತೊಂದೆಡೆ ಬೆಂಗಳೂರಿನಲ್ಲಿ ಬೆಳ್ಳಿ ದರ ಒಂದೇ ದಿನ 10,000 ರು. ಏರಿಕೆ

Read Full Story
07:35 AM (IST) Jan 29

Karnataka News Live 29th January: 4 ದಿನದಲ್ಲಿ 37 ಜನರಿಗೆ ನಾಯಿ ಕಡಿತ, ಬಾಲಕಿ ಗಂಭೀರ - 4 ನಗರಗಳಲ್ಲಿ ಬೀದಿ ನಾಯಿ, ಹುಚ್ಚು ನಾಯಿ ಕಡಿತ

ಬೀದಿ ನಾಯಿಗಳ ತೆರವಿಗೆ ಶೀಘ್ರ ಕ್ರಮ ಕೈಗೊಳ್ಳಬೇಕು, ನಾಯಿ ಕಡಿತದಿಂದ ಸಂಭವಿಸುವ ಗಾಯ ಅಥವಾ ಸಾವಿಗೆ ರಾಜ್ಯ ಸರ್ಕಾರಗಳೇ ನೇರ ಹೊಣೆಗಾರರು ಎಂಬ ಸುಪ್ರೀಂಕೋರ್ಟ್ ಎಚ್ಚರಿಕೆಯ ನಡುವೆಯೂ ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ತಡೆಯುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ.

Read Full Story
07:35 AM (IST) Jan 29

Karnataka News Live 29th January: ವಿಧಾನಸಭೆಯಲ್ಲಿ ಗಂಭೀರ ಆರೋಪ - ಮತ್ತೆ ಟೆಲಿಫೋನ್‌ ಕದ್ದಾಲಿಕೆ ಗದ್ದಲ!

ರಾಜ್ಯ ಸರ್ಕಾರವು ಕೇಂದ್ರ ಹಾಗೂ ರಾಜಭವನದ ನಡುವಿನ ದೂರವಾಣಿ ಕದ್ದಾಲಿಕೆ ಮಾಡಿದೆ ಎಂದು ಆರೋಪಿಸಿ ಬಿಜೆಪಿ ಸದಸ್ಯರು ಸದನದಲ್ಲಿ ಗದ್ದಲ ಸೃಷ್ಟಿಸಿದ್ದು, ದೆಹಲಿಯಿಂದ ರಾಜ್ಯಪಾಲರಿಗೆ ಕರೆ ಬಂದಿದೆ ಎಂದಿರುವ ಸಚಿವ ಎಚ್.ಕೆ.ಪಾಟೀಲ್‌ ಅವರ ಕ್ಷಮೆಯಾಚನೆಗೆ ಪಟ್ಟು.

Read Full Story