ಉಜಿರೆ ಎಸ್‌ಡಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ ಅವರು 33 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಸೇರಿ ‘ಭಾಸ್ಕರ ಪರ್ವ – ಮಾಧ್ಯಮ ಗುರುವಿಗೆ ಅಭಿನಂದನೆ’ ಎಂಬ ವಿಶೇಷ ಕಾರ್ಯಕ್ರಮ ಆಯೋಜಿಸಿದ್ದಾರೆ.
- Home
- News
- State
- State News Live: ವಿಶಿಷ್ಟ ವಿಭಿನ್ನ ವ್ಯಕ್ತಿತ್ವ ಭಾಸ್ಕರ-ಪರ್ವ! ಪತ್ರಕರ್ತರ ನೆಚ್ಚಿನ ಮೇಷ್ಟ್ರು ನಿವೃತ್ತಿ, ಬದುಕು ಬೆಳಗಿದ ಗುರುವಿಗೆ ಗುರುವಂದನೆ!
State News Live: ವಿಶಿಷ್ಟ ವಿಭಿನ್ನ ವ್ಯಕ್ತಿತ್ವ ಭಾಸ್ಕರ-ಪರ್ವ! ಪತ್ರಕರ್ತರ ನೆಚ್ಚಿನ ಮೇಷ್ಟ್ರು ನಿವೃತ್ತಿ, ಬದುಕು ಬೆಳಗಿದ ಗುರುವಿಗೆ ಗುರುವಂದನೆ!

ಬೆಂಗಳೂರು (ಜ.30): ಗೃಹಲಕ್ಷ್ಮಿ ಬಳಿಕ ಅನ್ನಭಾಗ್ಯದ ಹಣವನ್ನೂ ಸರ್ಕಾರ ಬಾಕಿ ಇರಿಸಿಕೊಂಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕಳೆದ ಜನವರಿಯ ಅಕ್ಕಿಯನ್ನು ಸರ್ಕಾರ ನೀಡಿಲ್ಲ. ಅಕ್ಕಿಗೆ ಮೀಸಲಿಟ್ಟ 667 ಕೋಟಿ ಎಲ್ಲಿ ಹೋಯ್ತು? ಎಂದು ವಿಪಕ್ಷ ಬಿಜೆಪಿ ಪ್ರಶ್ನೆ ಮಾಡಿದೆ. ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಾಕಿ ಇರೋದನ್ನು ರಾಜ್ಯದ ಜನರ ಮುಂದೆ ಇರಿಸಿದ್ದ ಬಿಜೆಪಿ ಸದಸ್ಯ ಮಹೇಶ್ ಟೆಂಗಿನಕಾಯ ಅವರೇ ಈ ಪ್ರಶ್ನೆ ಮಾಡಿದ್ದು, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆಎಚ್ ಮುನಿಯಪ್ಪ ಕೂಡ ಉತ್ತರ ನೀಡಿದ್ದಾರೆ. ಅದರೊಂದಿಗೆ ಇಂದಿನ ರಾಜ್ಯ ರಾಜಕೀಯ ಹಾಗೂ ರಾಜ್ಯದ ಇತರ ಸುದ್ದಿಗಳ ಬಗ್ಗೆ ಇಂದಿನ ನ್ಯೂಸ್ಲೈವ್ ಬ್ಲಾಗ್
Karnataka News Live 30th January:ವಿಶಿಷ್ಟ ವಿಭಿನ್ನ ವ್ಯಕ್ತಿತ್ವ ಭಾಸ್ಕರ-ಪರ್ವ! ಪತ್ರಕರ್ತರ ನೆಚ್ಚಿನ ಮೇಷ್ಟ್ರು ನಿವೃತ್ತಿ, ಬದುಕು ಬೆಳಗಿದ ಗುರುವಿಗೆ ಗುರುವಂದನೆ!
Karnataka News Live 30th January:ಪ್ರಾಧ್ಯಾಪಕ ವೃತ್ತಿಯಿಂದ ಭಾಸ್ಕರ ಹೆಗಡೆ ನಿವೃತ್ತಿ, ನಾಳೆ ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ‘ಭಾಸ್ಕರ ಪರ್ವ’
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಭಾಸ್ಕರ ಹೆಗಡೆ ಅವರ 33 ವರ್ಷಗಳ ಸೇವಾ ನಿವೃತ್ತಿಯ ಅಂಗವಾಗಿ ‘ಭಾಸ್ಕರ ಪರ್ವ – ಮಾಧ್ಯಮ ಗುರುವಿಗೆ ಅಭಿನಂದನೆ’ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
Karnataka News Live 30th January:ಅಪೆಕ್ಸ್ ಬ್ಯಾಂಕ್ ಎಲೆಕ್ಷನ್‌ಗೆ ಕೈ ಹೈಕಮಾಂಡ್ ಪ್ರವೇಶ!
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕಾಗಿ ಕೆ.ಎನ್.ರಾಜಣ್ಣ ಹಾಗೂ ಪರಿಷತ್ ಸದಸ್ಯ ಎಸ್. ರವಿ ಪಟ್ಟು ಹಿಡಿದಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಕಾಂಗ್ರೆಸ್‌ನಲ್ಲಿ ಒಮ್ಮತ ಮೂಡಿಲ್ಲ. ಈ ಹಿನ್ನೆಲೆಯಲ್ಲಿ ಗುರುವಾರ ನಡೆಯಬೇಕಿದ್ದ ಅಧ್ಯಕ್ಷ ಸ್ಥಾನದ ಚುನಾವಣೆಯನ್ನು ಮುಂದೂಡಲಾಗಿದೆ.
Karnataka News Live 30th January:ಕಾಂಗ್ರೆಸ್ ಶಾಸಕ ವೀರೇಂದ್ರಗೆ ಬಿಗ್ ಶಾಕ್
ಕೆ.ಸಿ.ವೀರೇಂದ್ರ ಪಪ್ಪಿ ಮತ್ತವರ ಸಹಚರರ ವಿರುದ್ಧದ ಅಕ್ರಮ ಬೆಟ್ಟಿಂಗ್ ಮತ್ತು ಜೂಜಾಟ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಕೃಷಿ ಭೂಮಿ, ನಿವೇಶನಗಳು ಸೇರಿ 177.3 ಕೋಟಿ ರು. ಮೌಲ್ಯದ ಸ್ಥಿರ ಮತ್ತು ಚರಾಸ್ತಿ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ.
Karnataka News Live 30th January:ಬಂಡೀಪುರ: ರಾತ್ರಿ ಸಂಚಾರ ನಡೆಸಲು ಸುರಂಗ ಮಾರ್ಗ?
ಕರ್ನಾಟಕ- ಕೇರಳ ಸಂಪರ್ಕಿಸುವ ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ಪ್ರಯಾಣ ನಿಷೇಧ ಸಮಸ್ಯೆ ಪರಿಹರಿಸುವ ಸಂಬಂಧ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ‘ಬಂಡೀಪುರ ಅರಣ್ಯ ಮಾರ್ಗಕ್ಕೆ ಪರ್ಯಾಯವಾಗಿ ಸುರಂಗ ಮಾರ್ಗ ನಿರ್ಮಿಸುವ ಕಾರ್ಯಸಾಧ್ಯತೆಯನ್ನು ಅಧ್ಯಯನ ಮಾಡಲು ತಜ್ಞರ ಸಮಿತಿಯನ್ನು ನೇಮಿಸಲಾಗಿದೆ
Karnataka News Live 30th January:ರಸ್ತೆಗೆ ಕಾಲಿಟ್ಟಿರೋ ಹುಷಾರ್, ಕಚ್ಲಿಕ್ಕೆ ಕಾಯ್ತಿವೆ ಬೀದಿ ನಾಯಿ
ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ಗುರುವಾರವೂ ರಾಜ್ಯದ ವಿವಿಧೆಡೆ 6 ಮಂದಿ ನಾಯಿ ಕಡಿತಕ್ಕೆ ಒಳಗಾಗಿದ್ದಾರೆ ಚಿಕ್ಕಬಾಗೇವಾಡಿಯಲ್ಲಿ ವೃದ್ಧನೊಬ್ಬನ ಮೇಲೆ, ಹಾರೋಹಳ್ಳಿಯಲ್ಲಿ 6 ವರ್ಷದ ಬಾಲಕಿ ಮೇಲೆ, ಲಾಡ್ಲಾಪುರದಲ್ಲಿ ನಾಲ್ವರು ಬಾಲಕಿಯರ ಮೇಲೆ ನಾಯಿಗಳು ದಾಳಿ ನಡೆಸಿ, ಗಾಯಗೊಳಿಸಿವೆ.
Karnataka News Live 30th January:ತಿಂಗಳ ಮೊದಲ ಶನಿವಾರ ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ!
ಖಾದಿ ಉತ್ಪನ್ನಗಳ ಬಳಕೆ ಉತ್ತೇಜಿಸಲು ಸರ್ಕಾರಿ ನೌಕರರು ಸ್ವಯಂ ಪ್ರೇರಣೆಯಿಂದ ಖಾದಿ ಬಟ್ಟೆಗಳನ್ನು ಧರಿಸುವ ಪದ್ಧತಿಗೆ ಏ.21ರ ‘ಸರ್ಕಾರಿ ನೌಕರರ ದಿನಾಚರಣೆ’ಯಂದು ಚಾಲನೆ ನೀಡಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಿಳಿಸಿದೆ.
Karnataka News Live 30th January:ಬಾಕಿ ಪಾವತಿಗೆ ಸರ್ಕಾರಕ್ಕೆ ಗುತ್ತಿಗೆದಾರರ ಡೆಡ್‌ಲೈನ್
ಸರ್ಕಾರ ಗುತ್ತಿಗೆದಾರರಿಗೆ ಬಾಕಿ ಉಳಿಸಿಕೊಂಡಿರುವ 38,000 ಕೋಟಿ ರು. ಬಿಲ್ ಪಾವತಿಗೆ ಆಗ್ರಹಿಸಿ ಮಾ.5 ರಂದು ಬೃಹತ್ ಪ್ರತಿಭಟನೆ ನಡೆಸಲಿದ್ದು, ಒಂದು ವಾರ ರಾಜ್ಯಾದ್ಯಂತ ಎಲ್ಲಾ ಕಾಮಗಾರಿ ಸ್ಥಗಿತಗೊಳಿಸುವ ಮೂಲಕ ಬಿಸಿ ಮುಟ್ಟಿಸುತ್ತೇವೆ’ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಎಚ್ಚರಿಕೆ
Karnataka News Live 30th January:ಗೃಹಲಕ್ಷ್ಮಿ ಬೆನ್ನಲ್ಲೇ, ಅನ್ನಭಾಗ್ಯ ಹಣ ಪಾವತಿ ಬಾಕಿ!
ಬೆಳಗಾವಿ ಅಧಿವೇಶನದಲ್ಲಿ ‘ಗೃಹಲಕ್ಷ್ಮೀ’ ಫಲಾನುಭವಿಗಳಿಗೆ ಎರಡು ತಿಂಗಳ ಹಣ ಪಾವತಿಯಾಗದ ವಿಚಾರ ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರ ನಡುವೆ ಭಾರೀ ಜಟಾಪಟಿಗೆ ಕಾರಣವಾದ ಬೆನ್ನಲ್ಲೇ ಇದೀಗ, ‘ಅನ್ನಭಾಗ್ಯ’ದ ಫಲಾನುಭವಿಗಳಿಗೆ ಒಂದು ತಿಂಗಳ ಹಣ ಪಾವತಿಯಾಗದ ವಿಚಾರ ಗುರುವಾರ ವಿಧಾನಸಭೆಯಲ್ಲಿ ಸದ್ದು ಮಾಡಿತು.