ಬಾಲಯ್ಯ ನಟನೆಯ ಅಖಂಡ 2 ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಈ ಚಿತ್ರದ ಪ್ರೀಮಿಯರ್ ಶೋಗಳನ್ನು ರದ್ದುಗೊಳಿಸಲಾಗಿದೆ ಎಂದು ನಿರ್ಮಾಪಕರು ಪ್ರಕಟಿಸಿದ್ದಾರೆ. ಅಖಂಡ 2 ಪ್ರೀಮಿಯರ್ ಶೋಗಳು ಯಾಕೆ ದಿಢೀರ್ ರದ್ದಾದವು ಎಂಬ ವಿವರ ಇಲ್ಲಿದೆ.
- Home
- News
- State
- Karnataka News Live: ಅಖಂಡ 2 ಪ್ರೀಮಿಯರ್ ಶೋಗಳು ರದ್ದು, ನಿರ್ಮಾಪಕರಿಗೆ ಸಂಕಷ್ಟ.. ಬಾಲಯ್ಯ ಸಿನಿಮಾ ರಿಲೀಸ್ ಕಥೆಯೇನು?
Karnataka News Live: ಅಖಂಡ 2 ಪ್ರೀಮಿಯರ್ ಶೋಗಳು ರದ್ದು, ನಿರ್ಮಾಪಕರಿಗೆ ಸಂಕಷ್ಟ.. ಬಾಲಯ್ಯ ಸಿನಿಮಾ ರಿಲೀಸ್ ಕಥೆಯೇನು?

ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಹಾಗೂ ದ್ವೇಷದ ಅಪರಾಧ ತಡೆಗೆ ಪ್ರತ್ಯೇಕ ಕಾಯಿದೆ ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ 'ದ್ವೇಷ ಅಪರಾಧಗಳು ಮತ್ತು ದ್ವೇಷ(ಹೋರಾಟ, ತಡೆಯುವಿಕೆ) ವಿಧೇಯಕ 2025'ಕ್ಕೆ ಅನುಮೋದನೆ ಪಡೆಯುವ ಸಾಧ್ಯತೆಯಿದೆ. ಜೂನ್ನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಾಥಮಿಕವಾಗಿ ಕರಡು ವಿಧೇಯಕ ಪ್ರಸ್ತಾಪಿಸಲಾಗಿದ್ದು, ಅಂತಿಮ ವಿಧೇಯಕವು ಗುರುವಾರ ಅಂದರೆ ಇಂದು ಮಂಡನೆಯಾಗಲಿದೆ. ಅನುಮೋದನೆ ನೀಡಿದ ಬಳಿಕ ಬೆಳಗಾವಿ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಮಂಡಿಸುವ ಸಾಧ್ಯತೆಯಿದೆ. ಈ ಕಾಯ್ದೆಯಡಿ ಧಾರ್ಮಿಕ, ಜನಾಂಗೀಯ, ಜಾತಿ ಅಥ ವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮಸ್ಥಳ, ಭಾಷೆ, ನಿವಾಸ, ಅಂಗವೈಕಲ್ಯ, ಬುಡ ಕಟ್ಟು ಕುರಿತು ಯಾವುದೇ ವ್ಯಕ್ತಿಗೆ ಹಾನಿ ಮಾಡುವ ಅಥವಾ ದ್ವೇಷವನ್ನು ಉತ್ತೇಜಿಸುವ ಅಥವಾ ಪ್ರಚಾರ ಮಾಡುವ ವ್ಯಕ್ತಿ ಅಥವಾ ಗುಂಪಿಗೆ ಮೂರು ವರ್ಷಗಳ ಕಾಲ ಶಿಕ್ಷೆ ವಿಧಿಸಬಹುದು ಅಥವಾ 5 ಸಾವಿರ ರು. ದಂಡದ ಜತೆಗೆ ಶಿಕ್ಷೆ ವಿಧಿಸಬಹುದು ಎಂದು ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ.
karnataka news live 4 december 2025ಅಖಂಡ 2 ಪ್ರೀಮಿಯರ್ ಶೋಗಳು ರದ್ದು, ನಿರ್ಮಾಪಕರಿಗೆ ಸಂಕಷ್ಟ.. ಬಾಲಯ್ಯ ಸಿನಿಮಾ ರಿಲೀಸ್ ಕಥೆಯೇನು?
karnataka news live 4 december 2025ಮೋಹನ್ ಬಾಬು ಮಾಡಿದ ಸಣ್ಣ ತಪ್ಪಿನಿಂದ ಸೌಂದರ್ಯ ಪ್ರಾಣ ಕಳೆದುಕೊಂಡ್ರಾ? ನಿರ್ದೇಶಕರು ಹೇಳಿದ ಸತ್ಯವೇನು?
ಒಂದಾನೊಂದು ಕಾಲದ ಸ್ಟಾರ್ ನಟಿ ಸೌಂದರ್ಯ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾದ ವಿಷಯ ಎಲ್ಲರಿಗೂ ಗೊತ್ತೇ ಇದೆ. ಆದರೆ ಮೋಹನ್ ಬಾಬು ಮಾಡಿದ ತಪ್ಪಿನಿಂದಲೇ ಸೌಂದರ್ಯ ನಮ್ಮ ಜೊತೆಗಿಲ್ಲ ಎಂದು ನಿರ್ದೇಶಕರೊಬ್ಬರು ಆಘಾತಕಾರಿ ವಿಷಯವೊಂದನ್ನು ಬಹಿರಂಗಪಡಿಸಿದ್ದಾರೆ.
karnataka news live 4 december 2025ಈ ನಟಿಯರು ತೆರೆ ಮೇಲೆ ದೊಡ್ಡ ಹೀರೋಯಿನ್ಸ್, ವರಿಸಿದ್ದು ಮಾತ್ರ ವಿವಾಹಿತರನ್ನೇ!
ಚಿತ್ರರಂಗದಲ್ಲಿ ಸ್ಟಾರ್ ನಟಿಯರಾಗಿ ಮೆರೆದ ಹಲವಾರು ನಟಿಯರು ವಿಚ್ಛೇದಿತ ಪುರುಷರನ್ನು ಮದುವೆಯಾಗಿ ಸುದ್ದಿಯಲ್ಲಿದ್ದಾರೆ. ಕರೀನಾ ಕಪೂರ್ ನಿಂದ ಹಿಡಿದು, ಸಮಂತಾ ರುತ್ ಪ್ರಭುವರೆಗೂ ಹಲವಾರು ನಟಿಯರು ಈಗಾಗಲೇ ಮದುವೆಯಾಗಿರುವ ಪುರುಷರನ್ನು ಮದುವೆಯಾಗಿ ಹ್ಯಾಪಿಯಾಗಿದ್ದಾರೆ.
karnataka news live 4 december 2025ಕಾರವಾರದಲ್ಲಿ ಭಾರತೀಯ ನೌಕಾ ದಿನಾಚರಣೆ - ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗಿ!
ಭಾರತೀಯ ನೌಕಾ ದಿನಾಚರಣೆಯ ಪ್ರಯುಕ್ತ ಕಾರವಾರದ ಐ.ಎನ್.ಎಸ್ ಕದಂಬ ನೌಕಾನೆಲೆಯ ನೌಕಾದಳ ಭವನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗವಹಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
karnataka news live 4 december 2025ಆ ವಿಚಾರದಲ್ಲಿ ಪವನ್ ಕಲ್ಯಾಣ್ ಬಗ್ಗೆ ಮಾತನಾಡದಿರುವುದೇ ಒಳ್ಳೇದು - ರೇಣು ದೇಸಾಯಿ ಹೇಳಿಕೆ ವೈರಲ್
ಡಿಸೆಂಬರ್ 4ರಂದು ರೇಣು ದೇಸಾಯಿ ತಮ್ಮ 44ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ರೇಣು ದೇಸಾಯಿ ಅವರ ವೃತ್ತಿಜೀವನ, ಮೊದಲ ಚಿತ್ರ 'ಬದ್ರಿ' ಬಗ್ಗೆ ವಿಶೇಷ ಸಂಗತಿಗಳು ವೈರಲ್ ಆಗುತ್ತಿವೆ. ಆ ವಿವರಗಳನ್ನು ಈ ಲೇಖನದಲ್ಲಿ ತಿಳಿಯೋಣ.
karnataka news live 4 december 2025ದತ್ತಪೀಠ ವಿಚಾರದಲ್ಲಿ ರಾಜ್ಯ ಸರ್ಕಾರ ನ್ಯಾಯ ಒದಗಿಸಲಿ - ಸಿ.ಟಿ.ರವಿ ಆಗ್ರಹ
ರಾಜ್ಯ ಸರ್ಕಾರ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸಿ, ಕಂದಾಯ ಸೇರಿದಂತೆ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿ, ದತ್ತಪೀಠದ ವಿಚಾರದಲ್ಲಿ ನ್ಯಾಯ ನೀಡಲು ಹೆಜ್ಜೆ ಇಡಬೇಕು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಆಗ್ರಹಿಸಿದರು.
karnataka news live 4 december 2025ಕರಾವಳಿಯಲ್ಲಿ ಶಿವಗಿರಿ ಮಠ ಶಾಖೆಗೆ 5 ಎಕರೆ - ಸಿಎಂ ಸಿದ್ದರಾಮಯ್ಯ ಭರವಸೆ
ಬಿಲ್ಲವ ಸಮುದಾಯಕ್ಕೆ ಸೇರಿದ ಕೇರಳದ ಶಿವಗಿರಿ ಮಠದ ಶಾಖಾ ಮಠಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಎಕರೆ ಜಾಗ ನೀಡಲು ಬದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
karnataka news live 4 december 2025ರಾಜ್ಯದಲ್ಲಿ ಇನ್ನು ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ - ಕೆ.ಎಸ್.ಈಶ್ವರಪ್ಪ ಭವಿಷ್ಯ
ಕಳೆದ ಎರಡು ವರ್ಷಗಳಿಂದ ಹದಗೆಟ್ಟ ಕಾಂಗ್ರೆಸ್ ಸರ್ಕಾರದ ಆಡಳಿತ ನೋಡಿ ಜನತೆ ಬೇಸತ್ತಿದ್ದಾರೆ. ಇದು ರಾಜ್ಯದಲ್ಲೇ ಕಾಂಗ್ರೆಸ್ ಪಕ್ಷದ ಕೊನೆಯ ಸರ್ಕಾರ. ರಾಜ್ಯದಲ್ಲಿ ಇನ್ನು ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಕೆ.ಎಸ್.ಈಶ್ವರಪ್ಪ ಹೇಳಿದರು.
karnataka news live 4 december 2025ಮೆಕ್ಕೆಜೋಳ ಖರೀದಿ ಕೇಂದ್ರಕ್ಕೆ ಆಗ್ರಹಿಸಿ ಡಿ. 6 ಹೆದ್ದಾರಿ ಬಂದ್ - ಮಾಜಿ ಸಚಿವ ಬಿ.ಸಿ.ಪಾಟೀಲ್
ಪಕ್ಷದ ಅಭಿಮಾನಿಗಳ ನೇತೃತ್ವದಲ್ಲಿ ಮಹಾಲಕ್ಷ್ಮೀ ವೃತ್ತದಲ್ಲಿ ನೂರಾರು ಟ್ರ್ಯಾಕ್ಟರ್ ಮೂಲಕ ಡಿ. 6ರಂದು ಮುಂಜಾನೆ 10.30ಕ್ಕೆ ಹೆದ್ದಾರಿ ಬಂದ್ ಮಾಡುವ ಮೂಲಕ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
karnataka news live 4 december 2025'ಗೇಮ್ ಆಫ್ ಥ್ರೋನ್ಸ್' ಮಟ್ಟದ ಚಿತ್ರ.. 1000 ಕೋಟಿ ಬಜೆಟ್‌ನಲ್ಲಿ ನಿರ್ದೇಶಕ ಶಂಕರ್ ಮುಂದಿನ ಸಿನಿಮಾ!
ಇಂಡಿಯನ್ 3 ಮುಗಿದ ನಂತರ 2026ರಲ್ಲಿ ಶಂಕರ್ ನಿರ್ದೇಶನದ ಹೊಸ ಚಿತ್ರದ ಶೂಟಿಂಗ್ ಶುರುವಾಗಲಿದೆ. ಈ ಚಿತ್ರದಲ್ಲಿ ಬಾಲಿವುಡ್‌ನ ಪ್ರಮುಖ ನಟರೊಬ್ಬರು ನಟಿಸಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
karnataka news live 4 december 2025ಬಂಡೀಪುರ ಸಫಾರಿ ಬಂದ್ ಪರಿಣಾಮ, ನಂಬಿದವರ ಬದುಕು ಸ್ಥಬ್ದ! ನೂರಾರು ಕುಟುಂಬಗಳ ಅಳಲು, ತೆರೆಯದಂತೆ ರೈತರ ವಿರೋಧ
karnataka news live 4 december 2025ಭಾರತೀಯರು 2025ರಲ್ಲಿ ಅತಿಹೆಚ್ಚು ಹುಡುಕಾಡಿದ ಪ್ರವಾಸಿ ಸ್ಥಳ ಯಾವುದು? ಟಾಪ್-10ರಲ್ಲಿ ಥೈಲ್ಯಾಂಡ್, ಮಾಲ್ಡೀವ್ಸ್
ಗೂಗಲ್ 2025ರ ಭಾರತೀಯರ ಅತಿ ಹೆಚ್ಚು ಹುಡುಕಿದ ಸ್ಥಳಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಧಾರ್ಮಿಕ ಸ್ಥಳ ಮೊದಲ ಸ್ಥಾನದಲ್ಲಿದೆ. ಇದರೊಂದಿಗೆ, ಬೀಚ್‌ಗಳು ಮತ್ತು ದ್ವೀಪಗಳೂ ಸಹ ಪ್ರಯಾಣಿಕರ ಆಯ್ಕೆಯಲ್ಲಿ ಪ್ರಾಬಲ್ಯ ಸಾಧಿಸಿವೆ.
karnataka news live 4 december 2025ವನ್ಯಜೀವಿ-ಮಾನವ ಸಂಘರ್ಷ ನಿಯಂತ್ರಣಕ್ಕೆ ತಂತ್ರಜ್ಞಾನ ಬಳಕೆ - ಸಚಿವ ಈಶ್ವರ್ ಖಂಡ್ರೆ
ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳ ಆಗುತ್ತಿರುವುದು ಮಾನವ-ವನ್ಯಜೀವಿ ಸಂಘರ್ಷಕ್ಕೆ ಕಾರಣವಾಗಿದೆ. ಅತ್ಯಾಧುನಿಕ ತಂತ್ರಜ್ಞಾನದ ಬಳಕೆ ಹಾಗೂ ಸಹಬಾಳ್ವೆಯಿಂದ ಮಾತ್ರ ಇದರ ನಿಯಂತ್ರಣ ಸಾಧ್ಯ ಎಂದು ಸಚಿವ ಈಶ್ವರ್ ಖಂಡ್ರೆ ಅಭಿಪ್ರಾಯ ಪಟ್ಟಿದ್ದಾರೆ.
karnataka news live 4 december 2025ಬೆಂಗಳೂರಿನ ಅಮರ್ ಸುಬ್ರಹ್ಮಣ್ಯ ಆಪಲ್ ಎಐ ಟೀಮ್‌ಗೆ ಉಪಾಧ್ಯಕ್ಷ!
ಬೆಂಗಳೂರಿನ ಎಂಜಿನಿಯರ್ ಅಮರ್ ಸುಬ್ರಹ್ಮಣ್ಯ ಅವರನ್ನು ಆಪಲ್ ತನ್ನ ಕೃತಕ ಬುದ್ಧಿಮತ್ತೆ (AI) ವಿಭಾಗದ ಉಪಾಧ್ಯಕ್ಷರನ್ನಾಗಿ ನೇಮಿಸಿದೆ. ಈ ಹಿಂದೆ ಗೂಗಲ್ ಮತ್ತು ಮೈಕ್ರೋಸಾಫ್ಟ್‌ನಂತಹ ದೈತ್ಯ ಕಂಪನಿಗಳಲ್ಲಿ ಸೇವೆ ಸಲ್ಲಿಸಿದ್ದ ಅಮರ್, ಈಗ ಆಪಲ್‌ನ AI ಮಾಡೆಲ್ ಸಂಶೋಧನೆಯನ್ನು ಮುನ್ನಡೆಸಲಿದ್ದಾರೆ.
karnataka news live 4 december 2025ಕೆಸಿ ಜನರಲ್ ಆಸ್ಪತ್ರೆಗೆ ಬಂತು CBNAAT ಯಂತ್ರ; 90 ನಿಮಿಷದಲ್ಲಿ ಕ್ಷಯ ರೋಗ ಪತ್ತೆ-ದಿನೇಶ್ ಗುಂಡೂರಾವ್
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಕ್ಷಯ ರೋಗ ಪರೀಕ್ಷಾ ಯಂತ್ರಕ್ಕೆ (CBNAAT) ಚಾಲನೆ ನೀಡಿದರು. 90 ನಿಮಿಷಗಳಲ್ಲಿ ನಿಖರವಾಗಿ ಕ್ಷಯ ರೋಗವನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚುವ ಸಾಮರ್ಥ್ಯ ಹೊಂದಿವೆ.
karnataka news live 4 december 2025ಮೋದಿ 10 ಲಕ್ಷ ರೂ ಕೋಟ್ ಹಾಕ್ತಾರೆ, ಕಾಂಗ್ರೆಸಿಗರ ಕೈ ಬದಲು, ಬಿಜೆಪಿಗರ ನೋಡಿ ಎಂದ ಸಂತೋಷ್ ಲಾಡ್
ಮೋದಿ 10 ಲಕ್ಷ ರೂ ಕೋಟ್ ಹಾಕ್ತಾರೆ, ಕಾಂಗ್ರೆಸಿಗರ ಕೈ ಬದಲು, ಬಿಜೆಪಿಗರ ನೋಡಿ ಎಂದ ಸಂತೋಷ್ ಲಾಡ್, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ದುಬಾರಿ ವಾಚ್ ಕಟ್ಟಿರುವ ಕುರಿತು ರಾಜ್ಯದಲ್ಲಿ ಭಾರಿ ಚರ್ಚೆಯಾಗಿದೆ. ಇದರ ಬೆನ್ನಲ್ಲೇ ಸಂತೋಷ್ ಲಾಡ್ ಪ್ರತಿಕ್ರಿಯಿಸಿದ್ದಾರೆ.
karnataka news live 4 december 2025ದೈವದ ಮಾತು ನಿಜವಾಯ್ತು, ಹರಕೆ ತೀರಿಸಲು ದಂಪತಿ ಸಮೇತ ಬಂದ ರಿಷಬ್ ಶೆಟ್ಟಿ
'ಕಾಂತಾರ' ಚಿತ್ರದ ಅಭೂತಪೂರ್ವ ಯಶಸ್ಸಿನ ಹಿನ್ನೆಲೆಯಲ್ಲಿ, ನಟ-ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಹೊಂಬಾಳೆ ಫಿಲ್ಮ್ಸ್ ತಂಡವು ಮಂಗಳೂರಿನ ದೈವಸ್ಥಾನದಲ್ಲಿ ಹರಕೆ ನೇಮೋತ್ಸವವನ್ನು ನೆರವೇರಿಸಿದರು. ಈ ಹಿಂದೆ ದೈವವು ನೀಡಿದ್ದ ಸೂಚನೆಯಂತೆ ದೈವದ ಆಶೀರ್ವಾದವನ್ನು ಪಡೆದುಕೊಂಡಿದೆ.
karnataka news live 4 december 2025ಕಾಂಗ್ರೆಸ್‌ನಲ್ಲಿ ಆಂತರಿಕ ಕಚ್ಚಾಟದಿಂದ ರಾಜ್ಯದ ಆಡಳಿತ ಕುಸಿತ - ಬಿ.ವೈ.ವಿಜಯೇಂದ್ರ
ಕಾಂಗ್ರೆಸ್‌ನಲ್ಲಿ ಆಂತರಿಕ ಕಚ್ಚಾಟದಿಂದ ರಾಜ್ಯದ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ಈ ನಾಡಿನ ರೈತರ ಬಗ್ಗೆ ಸರ್ಕಾರ ಅಸೆಡ್ಡೆ ತೋರುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.
karnataka news live 4 december 2025ಏನಿದು ಸತೀಶ್ ಜಾರಕಿಹೊಳಿ ನಡೆ - ಕೆಪಿಸಿಸಿ ಅಧ್ಯಕ್ಷ ಪಟ್ಟ ಖಚಿತವಾಯ್ತಾ? ಕಾಂಗ್ರೆಸ್‌ನಲ್ಲಿ ಹೊಸ ಚರ್ಚೆ!
ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಕೋಲಾರ ಜಿಲ್ಲೆ ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಯಾವುದೇ ಅಧಿಕೃತ ಪಕ್ಷದ ಹುದ್ದೆ ಇಲ್ಲದಿದ್ದರೂ ಈ ಸೇರ್ಪಡೆ ಕಾರ್ಯಕ್ರಮ ನಡೆಸಿದ್ದಾರೆ. ಇದು ಮುಂದಿನ ಕೆಪಿಸಿಸಿ ಅಧ್ಯಕ್ಷರಾಗುವ ಸಾಧ್ಯತೆ ಬಗ್ಗೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ ಹುಟ್ಟುಹಾಕಿದೆ.
karnataka news live 4 december 2025ಕೊನೆಯ ಕ್ಷಣದ ತೀರ್ಮಾನ.. ಲಾಕ್‌ಡೌನ್ ದಿನಾಂಕದಲ್ಲಿ ದಿಢೀರ್ ಬದಲಾವಣೆ - ಕಾರಣವೇನು?
ಲಾಕ್‌ಡೌನ್ ಎಂಬ ಪದ ಕೇಳಿದ ತಕ್ಷಣ ಜನರಲ್ಲಿ ಒಂದು ರೀತಿಯ ಆತಂಕ ಉಂಟಾಗುತ್ತದೆ. ಡಿ.5ರಿಂದ ಲಾಕ್‌ಡೌನ್ ಎಂದು ಈಗಾಗಲೇ ಘೋಷಿಸಲಾಗಿತ್ತು, ಆದರೆ ಇನ್ನು ಕೆಲವೇ ದಿನಗಳಿರುವಾಗ, ಅದನ್ನು ಬೇರೆ ದಿನಾಂಕಕ್ಕೆ ಮುಂದೂಡಲಾಗಿದೆ.