ರಾಜಕಾರಣಿಗಳು ಸೇರಿದಂತೆ ಅಕ್ಷರಸ್ಥರೇ ಸಮಾಜಕ್ಕೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್ತು ಸದಸ್ಯ ಎಚ್. ವಿಶ್ವನಾಥ್ ಕಳವಳ ವ್ಯಕ್ತಪಡಿಸಿದರು.
ಪೂರ್ತಿ ಓದಿ- Home
- News
- State
- Karnataka News Live: ಅಕ್ಷರಸ್ಥರೇ ಸಮಾಜಕ್ಕೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ: ಎಚ್.ವಿಶ್ವನಾಥ್ ಕಳವಳ
Karnataka News Live: ಅಕ್ಷರಸ್ಥರೇ ಸಮಾಜಕ್ಕೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ: ಎಚ್.ವಿಶ್ವನಾಥ್ ಕಳವಳ

ಬೆಂಗಳೂರು: ವಿಧಾನಪರಿಷತ್ ನೇಮಕ, ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಹಾಗೂ ಹನಿಟ್ರ್ಯಾಪ್ ಪ್ರಕರಣ ಸೇರಿದಂತೆ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ಮುಖಂಡ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಗುರುವಾರ ದೆಹಲಿಯಲ್ಲಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಸೇರಿ 300 ದಿನಗಳು ಕಳೆದಿವೆ. ಇತ್ತ ರಾಜ್ಯದಲ್ಲಿನ ಬೆಲೆ ಏರಿಕೆ ಖಂಡಿಸಿ ಬಿಜೆಪಿ ದೊಡ್ಡಮಟ್ಟದ ಪ್ರತಿಭಟನೆ ನಡೆಸಿತ್ತು. ಇಂದಿನ ರಾಜ್ಯ ಮತ್ತು ರಾಜಕೀಯ ಕುರಿತ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ.
ಅಕ್ಷರಸ್ಥರೇ ಸಮಾಜಕ್ಕೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ: ಎಚ್.ವಿಶ್ವನಾಥ್ ಕಳವಳ
ಇಂದು ರಾತ್ರಿ 11ಕ್ಕೆ ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವಕ್ಕೆ ಚಾಲನೆ: ಯಾವಾಗ ಏನೇನು ಕಾರ್ಯಕ್ರಮ?
ಹನ್ನೊಂದು ದಿನ ಕಾಲ ನಡೆಯುವ ವಿಶ್ವ ವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ (ಶುಕ್ರವಾರ) ಇಂದು ರಾತ್ರಿ 11 ಗಂಟೆಗೆ ಧ್ವಜಾರೋಹಣ ಮುಖಾಂತರ ಅಧಿಕೃತ ಚಾಲನೆ ದೊರೆಯಲಿದ್ದು, ಏ.12ರ ಚೈತ್ರ ಪೌರ್ಣಮಿಯಂದು ಕರಗ ಉತ್ಸವ ನಡೆಯಲಿದೆ.
ಪೂರ್ತಿ ಓದಿಸರ್ಕಾರದ ಖಜಾನೆ ತುಂಬಿಸಿಕೊಳ್ಳಲು ಬೆಲೆ ಏರಿಕೆ ಅಸ್ತ್ರ: ಎಂಟಿಬಿ ನಾಗರಾಜ್ ವಾಗ್ದಾಳಿ
ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರದ ಗದ್ದುಗೆಗಾಗಿ ಅವ್ಶೆಜ್ಞಾನಿಕವಾಗಿ ಪಂಚ ಗ್ಯಾರಂಟಿಗಳನ್ನು ಕೊಟ್ಟು ಈಗ ಅಗತ್ಯ ವಸ್ತುಗಳ ಬೆಲೆ ಏರಿಸಿ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡಿದೆ ಎಂದು ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿಗೆ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ವಾಗ್ದಾಳಿ ಮಾಡಿದರು.
ಪೂರ್ತಿ ಓದಿಗಿಗ್ ಕಾರ್ಮಿಕರ ಕಲ್ಯಾಣಕ್ಕೆ ಸಂಸ್ಥೆಗಳಿಗೆ 5% ಸೆಸ್: ಸಿಎಂ ಸಿದ್ದರಾಮಯ್ಯ
ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ ಮತ್ತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಪೂರ್ತಿ ಓದಿಹಿಂದೂ ಹುಲಿಯನ್ನು ಬೋನಿಗೆ ಹಾಕಿದ ಅಪ್ಪ ಮಕ್ಕಳು: ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪ
ಬಿಜೆಪಿ ತತ್ವ ಸಿದ್ಧಾಂತವನ್ನು ಉಳಿಸಿಕೊಂಡಿಲ್ಲ. ಯಡಿಯೂರಪ್ಪ ಅವರ ಹಡಬೆ ದುಡ್ಡಿನಿಂದ ವಿಜಯೇಂದ್ರ ಅಧ್ಯಕ್ಷನಾಗಿದ್ದಾನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದರು.
ಪೂರ್ತಿ ಓದಿವಕ್ಫ್ ಮಸೂದೆ ಅಂಗೀಕಾರ ಐತಿಹಾಸಿಕ ಕ್ಷಣ.. ಮುಸ್ಲಿಮರೂ ವಿಧೇಯಕ ಸ್ವಾಗತಿಸಿದ್ದಾರೆ: ವಿಜಯೇಂದ್ರ
ಲೋಕಸಭೆಯಲ್ಲಿ ಐತಿಹಾಸಿಕ ಮಸೂದೆಗೆ ಅಂಗೀಕಾರ ಲಭಿಸಿದ್ದು, ಕಾಂಗ್ರೆಸ್ ಪಕ್ಷ ವಕ್ಫ್ ಕಾಯ್ದೆ ತಿದ್ದುಪಡಿಯನ್ನು ರಾಜ್ಯ ಮತ್ತು ದೇಶದಲ್ಲಿ ವಿರೋಧಿಸುವುದು ಒಂದು ದುರಂತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಪೂರ್ತಿ ಓದಿಕೆಪಿಸಿಸಿ ಅಧ್ಯಕ್ಷತೆಗೆ ಸತೀಶ್, ಖಂಡ್ರೆ ಹೆಸರು ಶಿಫಾರಸು ಮಾಡಿದ ಸಿಎಂ ಸಿದ್ದರಾಮಯ್ಯ?
ವಿಧಾನಪರಿಷತ್ ನೇಮಕ, ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಹಾಗೂ ಹನಿಟ್ರ್ಯಾಪ್ ಪ್ರಕರಣ ಸೇರಿದಂತೆ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ಮುಖಂಡ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ದೆಹಲಿಯಲ್ಲಿ ಮಹತ್ವದ ಮಾತುಕತೆ ನಡೆಸಿದ್ದಾರೆ.
ನಿಮ್ಮ ಅಡುಗೆ ಮನೆಯ ಚಿಮಣಿಗೆ ಜಿಡ್ಡು ಹಿಡಿದಿದೆಯೇ? ಇಲ್ಲಿದೆ ಸ್ವಚ್ಛಗೊಳಿಸುವ 5 ಸುಲಭ ವಿಧಾನ!
ಅಡುಗೆಮನೆಯ ಚಿಮಣಿಯನ್ನು ಸ್ವಚ್ಛಗೊಳಿಸಲು ವಿನೆಗರ್, ಡಿಶ್ ವಾಶ್ ಲಿಕ್ವಿಡ್, ಬೇಕಿಂಗ್ ಸೋಡಾ ಮತ್ತು ಸೋಪು ಪುಡಿಯಂತಹ ವಸ್ತುಗಳನ್ನು ಬಳಸಬಹುದು. ಈ ವಸ್ತುಗಳು ಚಿಮಣಿಯಲ್ಲಿರುವ ಎಣ್ಣೆಯಂಶ ಮತ್ತು ಕೊಳೆಯನ್ನು ತೆಗೆದುಹಾಕಲು ಸಹಾಯ ಮಾಡುತ್ತವೆ.
ಪೂರ್ತಿ ಓದಿಬಂಡೀಪುರದಲ್ಲಿ ರಾತ್ರಿ ಸಂಚಾರ ನಿರ್ಬಂಧ ತೆರವು ಬೇಡ: ಸಂಸದ ಯದುವೀರ್ ಒಡೆಯರ್
ಕರ್ನಾಟಕದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಂಚಾರ ನಿಷೇಧ ತೆರವುಗೊಳಿಸುವಂತೆ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮೇಲೆ ಒತ್ತಡ ಹೇರುತ್ತಿದೆ. ಪರಿಣಾಮ ಕರ್ನಾಟಕ ಸರ್ಕಾರ, ರಾತ್ರಿ ಸಂಚಾರ ತೆರವುಗೊಳಿಸಲು ಮುಂದಾಗಿದೆ ಎಂದು ಸಂಸದ ಯದುವೀರ್ ಒಡೆಯರ್ ಆರೋಪಿಸಿದ್ದಾರೆ.
ಪೂರ್ತಿ ಓದಿViral Video: 400 ಎಕರೆ ಗುಳುಂ ಮಾಡಲು ಮುಂದಾದ ಕಾಂಗ್ರೆಸ್ ಸರ್ಕಾರ, ಪ್ರಾಣಿ-ಪಕ್ಷಿಗಳ ಆರ್ತನಾದ ಕೇಳಿ ಮರುಗಿದ ಜನ!
ತೆಲಂಗಾಣದ 400 ಎಕರೆ ಅರಣ್ಯ ಪ್ರದೇಶವನ್ನು ಮಾರಾಟ ಮಾಡುವ ಕಾಂಗ್ರೆಸ್ ಸರ್ಕಾರದ ಯೋಜನೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಹೈದರಾಬಾದ್ ವಿಶ್ವವಿದ್ಯಾಲಯದ ಬಳಿಯ ಅರಣ್ಯದಲ್ಲಿ ಅಪರೂಪದ ಪ್ರಾಣಿ ಪಕ್ಷಿಗಳಿವೆ, ಆದರೆ ಸರ್ಕಾರವು ಶೇ.40ರಷ್ಟು ಮರಗಳನ್ನು ಕಡಿದಿದೆ.
ಪೂರ್ತಿ ಓದಿ38.39 ಕೋಟಿ ದುಬೈಗೆ ಸಾಗಿಸಿ 49.6 ಕೆ.ಜಿ.ಚಿನ್ನ ಖರೀದಿಸಿದ್ದ ನಟಿ ರನ್ಯಾ ರಾವ್
ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತ ನಟಿ ರನ್ಯಾ ರಾವ್ ಕಳೆದ ನಾಲ್ಕು ತಿಂಗಳಲ್ಲಿ ಸುಮಾರು 38.39 ಕೋಟಿ ರು. ಹಣವನ್ನು ಹವಾಲಾ ಮೂಲಕ ದುಬೈಗೆ ವರ್ಗಾಹಿಸಿ 49.6 ಕೆ.ಜಿ. ಚಿನ್ನ ಖರೀದಿಸಿದ್ದರು.
ಪೂರ್ತಿ ಓದಿರಾಜಕೀಯ ಕಿರುಕುಳಕ್ಕೆ ವಿನಯ್ ಸೋಮಯ್ಯ ಬಲಿ?: ಮಡಿಕೇರಿಯಲ್ಲಿ ಬಿಜೆಪಿಯಿಂದ ಹೆದ್ದಾರಿ ಬಂದ್!
ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡುತಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಪೂರ್ತಿ ಓದಿಪೊನ್ನಣ್ಣ..ಇದೇನಣ್ಣ.. ಅಭಿವೃದ್ಧಿ ಬಗ್ಗೆ ಪ್ರಶ್ನೆ ಮಾಡಿದ್ರೆ ಕಿರುಕುಳ; ನೇಣಿಗೆ ಕೊರಳುಕೊಟ್ಟ ಬಿಜೆಪಿ ಕಾರ್ಯಕರ್ತ!
ಮಡಿಕೇರಿಯ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್‌ನೋಟ್‌ನಲ್ಲಿ ಕಾಂಗ್ರೆಸ್ ಶಾಸಕ ಪೊನ್ನಣ್ಣ ಹೆಸರು ಉಲ್ಲೇಖಿಸಿದ್ದಾರೆ. ರಾಜಕೀಯ ಪ್ರೇರಿತ ಎಫ್‌ಐಆರ್‌ನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ.
ಪೂರ್ತಿ ಓದಿಮತ್ತೆ ಮುಂಬೈನಲ್ಲಿ ಬೆಳಗಾವಿ ಸಾಹುಕಾರ; ಏನಿದು ರಮೇಶ್ ಜಾರಕಿಹೊಳಿ ಹೊಸ ರಣತಂತ್ರ?
Karnataka BJP: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ ಬಳಿಕ ಬಿಜೆಪಿ ಅಂಗಳದಲ್ಲಿ ಕ್ಷಿಪ್ರ ಬೆಳವಣಿಗೆ ನಡೆಯುತ್ತಿವೆ. ಯತ್ನಾಳ್ ಬಣದಲ್ಲಿ ಗುರುತಿಸಿಕೊಂಡಿದ್ದ ನಾಯಕರ ಮುಂದಿನ ನಡೆ ತೀವ್ರ ಕುತೂಹಲ ಕೆರಳಿಸಿದೆ.
ಪೂರ್ತಿ ಓದಿಇಂದಿನಿಂದ 3 ದಿನ ಮಳೆ; ಈ ಭಾಗದಲ್ಲಿ ಯೆಲ್ಲೋ ಅಲರ್ಟ್; ಮನೆಯಿಂದ ಹೊರ ಹೋಗುವಾಗ ಕೈಯಲ್ಲಿರಲಿ ಛತ್ರಿ!
Karnataka Summer Rain: ರಾಜ್ಯದಲ್ಲಿ ಮೂರು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರದಲ್ಲಿ ಮಳೆಯಿಂದ ಬಾಳೆ ಬೆಳೆ ನಾಶವಾಗಿದೆ.
ಪೂರ್ತಿ ಓದಿ