08:18 AM (IST) Dec 08

Karnataka News Live 9 December 2025ಜಾಸ್ತಿ ಬೇಡ ಎರಡೇ ಮಕ್ಕಳನ್ನಷ್ಟೇ ಮಾಡಿಕೊಳ್ಳಿ - ನವದಂಪತಿಗಳಿಗೆ ಸಿಎಂ ಸಲಹೆ

ನವಲಗುಂದದಲ್ಲಿ ಶಾಸಕ ಎನ್.ಎಚ್.ಕೋನರಡ್ಡಿ ಆಯೋಜಿಸಿದ್ದ 75 ಜೋಡಿಗಳ ಸರ್ವಧರ್ಮ ಸಾಮೂಹಿಕ ವಿವಾಹದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡರು. ಈ ವೇಳೆ ನವದಂಪತಿಗೆ ಜನಸಂಖ್ಯಾ ನಿಯಂತ್ರಣದ ಬಗ್ಗೆ ಸಲಹೆ ನೀಡಿದ ಅವರು, ಸಮಾಜದಲ್ಲಿ ಸಮಾನತೆಗಾಗಿ ಅಂತರ್ಜಾತಿ ವಿವಾಹಗಳು ಹೆಚ್ಚಾಗಬೇಕು ಎಂದರು. 

Read Full Story
07:51 AM (IST) Dec 08

Karnataka News Live 9 December 2025ಇಂದು ಲೋಕಸಭೆಯಲ್ಲಿ ‘ವಂದೇ ಮಾತರಂ’ ಚರ್ಚೆ - ಮೋದಿ ಚಾಲನೆ

ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ಗೆ 150 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಲೋಕಸಭೆಯಲ್ಲಿ ಈ ಕುರಿತ ಚರ್ಚೆಗೆ ಸೋಮವಾರ ಚಾಲನೆ ಸಿಗಲಿದೆ. ಪ್ರಧಾನಿ ನರೇಂದ್ರ ಮೋದಿ ಚರ್ಚೆಯನ್ನು ಪ್ರಾರಂಭಿಸಲಿದ್ದು, 10 ಗಂಟೆಗಳ ಕಾಲ ಚರ್ಚೆ ನಡೆಯಲಿದೆ.

Read Full Story
07:49 AM (IST) Dec 08

Karnataka News Live 9 December 2025ಬೆಳಗಾವಿ ಅಧಿವೇಶನ - 89 ಸಂಘಟನೆಗಳಿಂದ ಪ್ರತಿಭಟನೆಗೆ ಕರೆ, 6000ಕ್ಕೂ ಹೆಚ್ಚು ಪೊಲೀಸರಿಂದ ಸರ್ಪಗಾವಲು

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ ಪ್ರತಿಭಟನೆಯ ಬಿಸಿ ತಟ್ಟಲಿದೆ. ಬಿಜೆಪಿ, ರೈತ ಸಂಘಟನೆಗಳು ಸೇರಿದಂತೆ 89 ಸಂಘಟನೆಗಳು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹೋರಾಟಕ್ಕೆ ಸಜ್ಜಾಗಿದ್ದು, ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
Read Full Story
07:49 AM (IST) Dec 08

Karnataka News Live 9 December 2025Karnataka Winter Session - ಬೆಳಗಾವಿ ಅಧಿವೇಶನದಲ್ಲಿ ಮಂಡನೆಯಾಗಲಿರುವ ವಿಧೇಯಕಗಳು

ಕಾಂಗ್ರೆಸ್‌ ಪಕ್ಷದಲ್ಲಿ ನಡೆದ ಅಧಿಕಾರ ಹಂಚಿಕೆ ತಿಕ್ಕಾಟ, ಬಿಜೆಪಿಯಲ್ಲಿನ ಒಳ ಬೇಗುದಿ ನಡುವೆಯೇ ಬೆಳಗಾವಿಯ ಚಳಿಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗಲಿದೆ.

Read Full Story
07:28 AM (IST) Dec 08

Karnataka News Live 9 December 2025ಅಭಿವೃದ್ಧಿಗಾಗಿ ಬೆಳಗಾವಿ ಜಿಲ್ಲೆ ವಿಭಜನೆ ಅತ್ಯಗತ್ಯ - ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಕಿತ್ತೂರು ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ರಾಜಕೀಯ ಬದಿಗಿಟ್ಟು ಎಲ್ಲಾ ಪಕ್ಷದ ಶಾಸಕರು ಒಗ್ಗೂಡಿ ಸದನದಲ್ಲಿ ಚರ್ಚಿಸಬೇಕೆಂದು ಕರೆ ನೀಡಿದ್ದಾರೆ. ಇದೇ ವೇಳೆ, ಬೆಳಗಾವಿ ಜಿಲ್ಲಾ ವಿಭಜನೆಯ ಅಗತ್ಯವನ್ನು ಪ್ರತಿಪಾದಿಸಿದರು. ಬಿಜೆಪಿ ವಿರುದ್ಧವೂ ಟೀಕೆ.

Read Full Story