08:22 AM (IST) Sep 20

Karnataka News Live ಕೊಂಕಣ ರೈಲ್ವೆಗೆ ₹7760 ಕೋಟಿ ಥ್ಯಾಂಕ್ಸ್ - ಅಂಕೋಲಾ–ಹುಬ್ಬಳ್ಳಿ, ತಾಳಗುಪ್ಪ–ಹೊನ್ನಾವರ ಅನುಷ್ಠಾನ ಮಾಡಿ-ಕಾಗೇರಿ

ಕೊಂಕಣ ರೈಲ್ವೆಯ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ₹7,760 ಕೋಟಿ ವಿಶೇಷ ಅನುದಾನ ನೀಡಿದೆ. ಈ ಬಗ್ಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹರ್ಷ ವ್ಯಕ್ತಪಡಿಸಿದ್ದು, ರೈಲ್ವೆ ಸಚಿವರನ್ನು ಭೇಟಿಯಾಗಿ ಇತರ ಪ್ರಮುಖ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಮನವಿ ಮಾಡಿದ್ದಾರೆ.

Read Full Story
08:03 AM (IST) Sep 20

Karnataka News Live ಬೆಂಗಳೂರಿಗರೇ ಗಮನಿಸಿ - ಸೆ.22ರಂದು ಕಾವೇರಿ ನೀರು ಪೂರೈಕೆ ಸ್ಥಗಿತ; ನಿಮ್ಮ ಏರಿಯಾ ಇದೆನಾ ಚೆಕ್ ಮಾಡಿ

ಬೆಂಗಳೂರು ಜಲಮಂಡಳಿಯು ಕಾವೇರಿ ನೀರು ಸರಬರಾಜು ಯೋಜನೆಯ 1ನೇ ಹಂತದಲ್ಲಿ ತುರ್ತು ದುರಸ್ತಿ ಕಾಮಗಾರಿ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 22ರಂದು ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ನಗರದ ಹಲವು ಪ್ರದೇಶಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

Read Full Story
08:02 AM (IST) Sep 20

Karnataka News Live ತುಳುಗೆ ಎರಡನೇ ರಾಜ್ಯ ಭಾಷೆಯ ಮಾನ್ಯತೆ ಸಿಕ್ಕ ಬೆನ್ನಲ್ಲೇ ಇದೀಗ ಕೊಡವ ಪ್ರಾತಿನಿಧ್ಯದ ಕೂಗು! ಸಂಸದ ಯದುವೀರ್ ಒಡೆಯರ್ ಹೇಳಿದ್ದೇನು?

ರಾಜ್ಯ ಸರ್ಕಾರ ತುಳು ಭಾಷೆಯನ್ನು ಎರಡನೇ ಹೆಚ್ಚುವರಿ ಭಾಷೆಯಾಗಿ ಘೋಷಿಸಿದೆ. ಇದರ ಬೆನ್ನಲ್ಲೇ ಸಂಸದ ಯದುವೀರ್ ಅವರು ಕೊಡವ ಭಾಷೆಗೂ ಇದೇ ರೀತಿಯ ಮಾನ್ಯತೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೆ ಕರಾವಳಿ ಭಾಗದಲ್ಲಿ ಸರ್ಕಾರದ ಯೋಜನೆಗಳು ಕೇವಲ ಘೋಷಣೆಯಾಗಬಾರದು ಎಂದು ಒತ್ತಾಯಿಸಿದ್ದಾರೆ.
Read Full Story
07:36 AM (IST) Sep 20

Karnataka News Live ಕಸ್ತೂರಿ ರಂಗನ್ ವರದಿ: ಕೇರಳ ಮಾದರಿಯಲ್ಲಿ ಭೌತಿಕ ಸರ್ವೆ, ರೈತರಿಗೆ ಸಿಎಂ ಡಿ.ಕೆ.ಶಿವಕುಮಾರ್‌ ಅಭಯ!

ಕಸ್ತೂರಿ ರಂಗನ್ ವರದಿ ಜಾರಿಯಿಂದ ಉಂಟಾಗಬಹುದಾದ ಅನಾಹುತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಜನರ ಸಮಸ್ಯೆ ಹಾಗೂ ಭಾವನೆಗಳನ್ನು ಅರ್ಥಮಾಡಿಕೊಂಡು ಅವರ ರಕ್ಷಣೆಗೆ ಅಗತ್ಯ ಕಾರ್ಯಕ್ರಮ ರೂಪಿಸುತ್ತೇನೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭರವಸೆ ನೀಡಿದ್ದಾರೆ. ಅಲ್ಲದೆ, ಕೇರಳ ಮಾದರಿಯಲ್ಲೇ ಭೌತಿಕ ಸರ್ವೇ ನಡೆಸುವ ಬಗ್ಗೆ ಶಾಸಕರೊಂದಿಗೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಹಾಗೂ ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ಶನಿವಾರ ಅವರು ಕಸ್ತೂರಿ ರಂಗನ್ ವರದಿಯಿಂದ ಮಲೆನಾಡಿನ ಭಾಗದಲ್ಲಿ ಎದುರಾಗಿರುವ ಆತಂಕಗಳು ಹಾಗೂ ಪರಿಣಾಮಗಳ ಕುರಿತು ಸ್ಥಳೀಯ ರೈತರು, ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು. ಬಳಿಕ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿ, ಶುಕ್ರವಾರ ದಕ್ಷಿಣ ಕನ್ನಡ, ಶನಿವಾರ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಭೇಟಿ ನೀಡಿದ್ದೇನೆ. ಭಾನುವಾರ ಹಾಸನ ಜಿಲ್ಲೆಗೆ ತೆರಳಲಿದ್ದೇನೆ. ಈ ವೇಳೆ ಸ್ಥಳೀಯರ ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

Read Full Story