Covid Vaccination: ಲಸಿಕೆ ನೀಡಿಕೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಕರ್ನಾಟಕ
* ಲಸಿಕೆ ನೀಡಿಕೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಕರ್ನಾಟಕ
* ಮೊದಲ ಡೋಸ್ ಲಸಿಕೆ ನೀಡಿಕೆಯಲ್ಲಿ ಕರ್ನಾಟಕವೇ ಪ್ರಥಮ
* ಟ್ವೀಟ್ ಮೂಲಕ ಆರೋಗ್ಯ ಸಚಿವ ಸುಧಾಕರ್ ಮಾಹಿತಿ
ಬೆಂಗಳೂರು, (ಡಿ.11): ಲಸಿಕೆ ನೀಡಿಕೆಯಲ್ಲಿ ಕರ್ನಾಟಕ ಮತ್ತೊಂದು ಹೊಸ ಮೈಲಿಗಲ್ಲು ಸಾಧಿಸಿದೆ. ಮೊದಲ ಡೋಸ್ ಲಸಿಕೆ ನೀಡಿಕೆಯಲ್ಲಿ ದೇಶದಲ್ಲಿ ಕರ್ನಾಟಕವೇ ಫಸ್ಟ್.
ಹೌದು....ರಾಜ್ಯದಲ್ಲಿ ಈವರೆಗೆ 8 ಕೋಟಿ ಡೋಸ್ ಲಸಿಕೆ ನೀಡಲಾಗಿದದ್ದು, ಮೊದಲ ಡೋಸ್ ಲಸಿಕೆ ನೀಡಿಕೆಯಲ್ಲಿ ದೇಶದಲ್ಲಿ ರಾಜ್ಯವೇ ಪ್ರಥಮ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.
Omicron Test Kit ವಾರಗಟ್ಟಲೇ ಕಾಯಬೇಕಿಲ್ಲ 2 ಗಂಟೆಯಲ್ಲಿ ರಿಸಲ್ಟ್, ICMR ಅಭಿವೃದ್ಧಿ ಪಡಿಸಿದ ಟೆಸ್ಟ್ ಕಿಟ್!
ಮೊದಲ ಡೋಸ್ ಲಸಿಕೆ ನೀಡಿಕೆಯಲ್ಲಿ ದೇಶದಲ್ಲಿ ರಾಜ್ಯವೇ ಪ್ರಥಮ ಆಗಿದೆ. 2ನೇ ಡೋಸ್ ಲಸಿಕೆ ನೀಡಿಕೆಯಲ್ಲಿ ರಾಜ್ಯಕ್ಕೆ 3ನೇ ಸ್ಥಾನ ಇದೆ. ಇದಕ್ಕಾಗಿ ಜಿಲ್ಲಾಡಳಿತಗಳು, ಆರೋಗ್ಯ ಇಲಾಖೆ ಸಿಬ್ಬಂದಿಗೆ ಡಾ.ಕೆ.ಸುಧಾಕರ್ ಧನ್ಯವಾದ ಹೇಳಿದ್ದಾರೆ.
ಕರ್ನಾಟಕದಲ್ಲಿ ಕೊರೋನಾ ಏರಿಳಿತ
ಕರ್ನಾಟಕದಲ್ಲಿ ಕೊರೋನಾ ವೈರಸ್ ಏರಿಳಿತವಾಗುತ್ತಿದ್ದು, ಇಂದು (ಡಿ.11) ಹೊಸದಾಗಿ 320 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಮೂಲಕ, ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 30,00,105 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,54,513 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು(ಶನಿವಾರ) ಕೊರೋನಾ ಸೋಂಕಿನಿಂದ 2 ಮಂದಿ ಮೃತಪಟ್ಟಿದ್ದಾರೆ.
ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೋನಾದಿಂದ 38,257 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 7,306 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಇನ್ನು ಬೆಂಗಳೂರಿನಲ್ಲಿ ಶನಿವಾರ ಒಂದೇ ದಿನ 190 ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು. ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.
ಇದರೊಂದಿಗೆ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಸೋಂಕಿತರ ಸಂಖ್ಯೆ 12,58,699 ಕ್ಕೆ ಏರಿಕೆಯಾಗಿದ್ರೆ, ಈವರೆಗೆ 16,362 ಜನರು ಸೋಂಕಿಗೆ ಬಲಿಯಾಗಿದ್ದಾರೆ. 12,58,699 ಸೋಂಕಿತರ ಪೈಕಿ 12,36,789 ಜನರು ಗುಣಮುಖರಾಗಿದ್ದು, ಸದ್ಯ ಬೆಂಗಳೂರಲ್ಲಿ 5,547 ಕೊರೋನಾ ಸಕ್ರಿಯ ಪ್ರಕರಣಗಳಿವೆ.
ಜಿಲ್ಲಾವಾರು ಕೊರೋ ಕೇಸ್
ಬಾಗಲಕೋಟೆ 0, ಬಳ್ಳಾರಿ 4, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 4, ಬೆಂಗಳೂರು ನಗರ 190, ಬೀದರ್ 0, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 10, ಚಿತ್ರದುರ್ಗ 0, ದಕ್ಷಿಣ ಕನ್ನಡ 20, ದಾವಣಗೆರೆ 1, ಧಾರವಾಡ 5, ಗದಗ 0, ಹಾಸನ 17, ಹಾವೇರಿ 0, ಕಲಬುರಗಿ 1, ಕೊಡಗು 21, ಕೋಲಾರ 0, ಕೊಪ್ಪಳ 0, ಮಂಡ್ಯ 4, ಮೈಸೂರು 14, ರಾಯಚೂರು 0, ರಾಮನಗರ 2, ಶಿವಮೊಗ್ಗ 3, ತುಮಕೂರು 9, ಉಡುಪಿ 2, ಉತ್ತರ ಕನ್ನಡ 4, ವಿಜಯಪುರ 3, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ