ಕಾವೇರಿ ಜಲಾನಯನದ ಯಾವುದೇ ಜಲಾಶಯಗಳಿಂದ ತಮಿಳುನಾಡಿಗೆ ನೀರನ್ನು ಹರಿಸುವ ಸ್ಥಿತಿಯಲ್ಲಿಲ್ಲ ಎಂದು ಸಿಡಬ್ಯೂಆರ್‌ಸಿ ಸಭೆಯಲ್ಲಿ ಕರ್ನಾಟಕ ವಾದ ಮಂಡನೆ ಮಾಡಿದೆ.

ನವದೆಹಲಿ (ಸೆ.26): ಕರ್ನಾಟಕವು ತನ್ನ ಜಲಾಶಯಗಳಿಂದ ಯಾವುದೇ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವ ಸ್ಥಿತಿಯಲ್ಲಿಲ್ಲ. ರಾಜ್ಯದಲ್ಲಿ 161 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದ್ದು, ಈ ಪೈಕಿ ಕಾವೇರಿ ಜಲಾನಯನ ಪ್ರದೇಶದಲ್ಲಿಯೇ 32 ಜಿಲ್ಲೆಗಳಿವೆ ಎಂದು ಕರ್ನಾಟಕದ ಅಧಿಕಾರಿಗಳು ಕಾವೇರಿ ನೀರಿ ನಿಯಂತ್ರಣ ಸಮಿತಿ ಮುಂದೆ ವಾದ ಮಂಡನೆ ಮಾಡಿದ್ದಾರೆ.

Add Asianetnews Kannada as a Preferred SourcegooglePreferred

ನವದೆಹಲಿಯಲ್ಲಿ ಇಂದು ನಡೆಯುತ್ತಿರುವ ಕಾವೇರಿ ನೀರಿ ನಿಯಂತ್ರಣ ಸಮಿತಿ (CWRC) ಸಭೆಯಲ್ಲಿ ಕರ್ನಾಟಕದ ಪರವಾಗಿ ಅಧಿಕಾರಿಗಳು ವಾದ ಮಂಡನೆ ಮಾಡಿದ್ದಾರೆ. ಈ ವೇಳೆ ಕರ್ನಾಟಕದ ವಾಸ್ತವ ಸ್ಥಿತಿಯನ್ನು ಸಮಿತಿಯ ಮುಂದೆ ಇಡುವ ಪ್ರಯತ್ನ ಮಾಡಿದ್ದಾರೆ. ಸೆ.25ರವರೆಗೆ ಕರ್ನಾಟಕದ ಕಾವೇರಿ ಜಲಾನಯನ ವ್ಯಾಪ್ತಿಗೊಳಪಡುವ 4 ಜಲಾಶಯಗಳಿಗೆ ಶೇ.53.04 ಪರ್ಸೆಂಟ್‌ ಒಳ ಹರಿವಿನ ಕೊರತೆಯಾಗಿದೆ. ಕರ್ನಾಟಕ ಸರ್ಕಾರವು ಕಳೆದ ಸೆ.13ರಂದು ರಾಜ್ಯದ 161 ತಾಲೂಕುಗಳನ್ನು ಬರ ಎಂದು ಘೋಷಣೆ ಮಾಡಲಾಗಿದೆ. ಕರ್ನಾಟಕದಲ್ಲಿ ಮಳೆ ಕೊರತೆಯಾಗಿದೆ ಎಂದು ವಾದ ಮಂಡಿಸಲಾಗಿದೆ.

ಕಾವೇರಿ ನೀರಿಗಾಗಿ ಕರ್ನಾಟಕಕ್ಕೆ ಪ್ರಾಣಸಂಕಟ, ತಮಿಳುನಾಡಿಗೆ ಚೆಲ್ಲಾಟ: ನಿತ್ಯ 12,500 ನೀರು ಹರಿಸುವಂತೆ ಪಟ್ಟು

ಕರ್ನಾಟಕ ಬರಪೀಡಿದ ತಾಲೂಕುಗಳಲ್ಲಿ 34 ಬರ ಪೀಡಿತ ತಾಲೂಕುಗಳು ಕಾವೇರಿ ಜಲಾನಯನ ಪ್ರದೇಶದಲ್ಲಿದೆ. ಅದರಲ್ಲಿಯೂ 32 ತೀವ್ರ ಬರ ಪೀಡಿತ ತಾಲೂಕುಗಳಾಗಿವೆ. ಉಳಿದಂತೆ 15 ಸಾಧಾರಣ ಬರ ಪೀಡಿತ ತಾಲೂಕುಗಳು ಕಾವೇರಿ ಜಲಾನಯನ ಪ್ರದೇಶದಲ್ಲಿವೆ. ಈ ಅಂಶವನ್ನು ಕಾವೇರಿ ನೀರು ನಿಯಂತ್ರಣ ಸಮಿತಿಯು ಗಂಭೀರವಾಗಿ ಪರಿಗಣಿಸಬೇಕು. ಕರ್ನಾಟಕವು ತನ್ನ ಜಲಾಶಯಗಳಿಂದ ಯಾವುದೇ ನೀರನ್ನು ಬಿಡುಗಡೆ ಮಾಡುವ ಸ್ಥಿತಿಯಲ್ಲಿಲ್ಲ ಎಂದು ವಾದ ಮಂಡನೆಯನ್ನು ಮಾಡಲಾಗಿದೆ.