ಕರ್ನಾಟಕ ಜನತೆಗೆ ಬಸ್ ಮತ್ತೊಂದು ದರ ಏರಿಕೆ ಶಾಕ್ ಎದುರಾಗಿದೆ. ಸಾರಿಗೆ ಸಚಿವ ಬೈರತಿ ಸುರೇಶ್ ಬಸ್ ಪ್ರಯಾಣ ದರಿಕೆ ಸೂಚನೆ ನೀಡಿದ್ದಾರೆ. ಸಾರಿಗೆ ಸಂಸ್ಥೆಗಳ ನಷ್ಟ ಸರಿದೂಗಿಸಲು ದರ ಏರಿಕೆ ಅನಿವಾರ್ಯ ಎಂದಿದ್ದಾರೆ.

ಬೆಂಗಳೂರು (ಸೆ.04) ಬರಗಾಲದ ನಡುವೆ ಬಸ್ ದರ ಏರಿಕೆ ಸೂಚನೆಗಳು ಲಭ್ಯವಾಗಿದೆ. ಕಳೆದ ಎಂಟು ತಿಂಗಳಲ್ಲಿ ತೈಲ ಬೆಲೆ ಏರಿಕೆಯಿಂದ ರಾಜ್ಯ ಸಾರಿಗೆ ನಿಗಮದ ಮೇಲೆ ಹೆಚ್ಚಿನ ಹೊರೆಯಾಗಿದೆ. ಆದರೆ ದರ ಏರಿಕೆ ಮಾಡದೇ ಪ್ರಯಾಣಿಕರ ಅನುಕೂಲ ಮಾಡಿದ್ದೇವೆ. ಇದೀಗ ನಾಲ್ಕು ಸಾರಿಗೆ ನಿಮಗಳು ನಷ್ಟ ಅನುಭವಿಸುತ್ತಿರುವ ಹಿನ್ನಲೆಯಲ್ಲಿ ಬಸ್ ದರ ಏರಿಕೆ ಅನಿವಾರ್ಯತೆ ಎದುರಾಗಿದೆ ಎಂದು ಸಚಿವ ಸಾರಿಗೆ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಅಲ್ಪ ಪ್ರಮಾಣದಲ್ಲಿ ದರ ಏರಿಕೆ ಮಾಡುವ ಕುರಿತು ಬೈರತಿ ಸುರೇಶ್ ಪ್ರಸ್ತಾಪಿಸಿದ್ದಾರೆ.

ದರ ಪರಿಷ್ಕರಣೆಗೆ ಸಮಿತಿ ರಚನೆ

ರಾಜ್ಯದಲ್ಲಿ ಬಸ್ ಪ್ರಯಾಣ ಏರಿಕೆಗೆ ಬಹುತೇಕ ಖಚಿತವಾಗುತ್ತಿದೆ. ಎಷ್ಟು ಪ್ರಮಾಣದಲ್ಲಿ ದರ ಏರಿಕೆ ಮಾಡಬೇಕು ಅನ್ನೋ ಕುರಿತು ಪರಾಮರ್ಶಿಸಲು ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಅತುಲ್ ತಿವಾರಿ ನೇತೃತ್ವದ ಸಮಿತಿ ಅಧ್ಯಯನ ನಡೆಸಿ ವರದಿ ನೀಡಲಿದೆ. ಸದ್ಯದಲ್ಲಿ ಈ ವರದಿ ಸರ್ಕಾರದ ಕೈಸೇರಲಿದೆ. ಈ ವರದಿ ಆಧರಿಸಿ ಸರ್ಕಾರ ದರ ಏರಿಕೆ ಹಾಗೂ ಪ್ರಮಾಣ ನಿಗದಿ ಮಾಡಲಿದೆ.

ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಹೆಚ್ಚು ಹೊರೆಯಾಗದ ರೀತಿಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ದರ ಪರಿಷ್ಕರಣೆ ಮಾಡಲಾಗುತ್ತದೆ. ಇದರಿಂದ ಆಗುವ ಹೊರೆಯನ್ನು ಸರಿದೂಗಿಸಲು ಸರ್ಕಾರದಿಂದ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭರವಸೆ ನೀಡಿದ್ದಾರೆ ಎಂದು ಬೈರತಿ ಸುರೇಶ್ ಹೇಳಿದ್ದಾರೆ.

ನಾಲ್ಕು ಸಾರಿಗೆ ನಿಗಮಗಳಿಗೆ ತೀವ್ರ ನಷ್ಟವಾಗುತ್ತಿದೆ. ಕೇಂದ್ರ ಸರ್ಕಾರ ಕಳೆದ 8 ತಿಂಗಳಲ್ಲಿ ಹಲವು ಬಾರಿ ಇಂಧನ ದರ ಹೆಚ್ಚಳ ಮಾಡಿದೆ. ಯುದ್ಧ ಸೇರಿದಂತೆ ಹಲವು ಕಾರಣಗಳಿಂದ ತೈಲ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಈ ವೇಳೆ ಅಗತ್ಯ ವಸ್ತು ಸೇರಿದಂತೆ ಎಲ್ಲಾ ವಸ್ತುಗಳ ಬೆಲೆ ಏರಿಕೆಯಾಗಿದೆ. ಆದರೆ ಸಾರಿಗೆ ಬಸ್ ಪ್ರಯಾಣ ದರ ಏರಿಕೆ ಮಾಡಿರಲಿಲ್ಲ. ಇದೀಗ ಸಾರಿಗೆ ನಿಗಮಗಳ ನಷ್ಟ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬೆಲೆ ಏರಿಕೆ ಕುರಿತು ಬೈರತಿ ಸುರೇಶ್ ಪ್ರಸ್ತಾಪಿಸಿದ್ದಾರೆ. ಸಾರಿಗೆ ನಿಗಮಗಳ ನಿರ್ವಹಣೆಗೆ ಈಗಾಗಲೇ ಸರ್ಕಾರ 8000 ಕೋಟಿ ರೂಪಾಯಿ ಅನುದಾನ ನೀಡಿದೆ. ಆದರೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬಸ್ ಪ್ರಯಾಣ ದರ ಏರಿಕ ಮಾಡಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.