ಕರ್ನಾಟಕ ಪೊಲೀಸ್ ನೇಮಕಾತಿ: ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದ್ದು, ಸಬ್‌ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.  ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ. 

karnataka police recruitment 2019 Apply for 300 sub inspector posts

ಬೆಂಗಳೂರು, (ಅ.18): ಕರ್ನಾಟಕ ಪೊಲೀಸ್ ಇಲಾಖೆ 300 ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಸಿವಿಲ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. 

ಜಾಬ್ಸ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸಕ್ತರು ಹಾಗೂ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 6,2019ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

 ಹುದ್ದೆಗಳ ವಿವರ:
* ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಸಿವಿಲ್) ಪುರುಷ - 205 
* ಮಹಿಳಾ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಸಿವಿಲ್) - 63 
* ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಸಿವಿಲ್) ಸೇವೆಯಲ್ಲಿರುವವರಿಗೆ - 32 
* ಒಟ್ಟು 300 ಹುದ್ದೆಗಳು

ವಿದ್ಯಾರ್ಹತೆ: ಯು.ಜಿ.ಸಿಯಿಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:   ಅರ್ಜಿ ಸ್ವೀಕಾರ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು.
 * ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) 28 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗದವರಿಗೆ 30 ವರ್ಷಗಳು.
* ಸೇವಾ ನಿರತರಿಗೆ 35 ವರ್ಷಗಳು, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗದವರಿಗೆ 40 ವರ್ಷಗಳು ನಿಗದಿಪಡಿಸಲಾಗಿದೆ.

ವೇತನ ಶ್ರೇಣಿ: ಹುದ್ದೆಗಳಿಗೆ ಅಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,900 ರಿಂದ 70,850 ರೂ. ತಿಂಗಳಿಗೆ. 

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು. 

ಅರ್ಜಿ ಶುಲ್ಕ: 2ಎ,2ಬಿ,3ಎ ಮತ್ತು 3ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 250 ರೂ. ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ -1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದ್ದು, ಆನ್‌ಲೈನ್ ಮೂಲಕ ನವೆಂಬರ್ 8ರೊಳಗೆ ಪಾವತಿಸಬೇಕು. 

ಪ್ರಮುಖ ದಿನಾಂಕಗಳು: 
* ಅರ್ಜಿ ಸಲ್ಲಿಸಲು ಆರಂಭ ದಿನಾಂಕ : ಅಕ್ಟೋಬರ್ 16,2019 
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 6,2019 ಸಂಜೆ 6:00ಗಂಟೆ 
* ಅರ್ಜಿ ಶುಲ್ಕ ಪಾವತಿಸಲು ಕಡೆಯ ದಿನಾಂಕ: ನವೆಂಬರ್ 8,2019

ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದುಕೊಳ್ಳಲು ಅಧಿಕೃತ ಕಚೇರಿಯ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ.

Latest Videos
Follow Us:
Download App:
  • android
  • ios