150 ಕೋಟಿ ಮೊತ್ತದ ಡ್ರಗ್ಸ್‌ಗೆ ಬೆಂಕಿಯಿಟ್ಟ ಕರ್ನಾಟಕ ಪೊಲೀಸರು

ಕಳೆದ ಒಂದೂವರೆ ತಿಂಗಳಲ್ಲಿ ವಿವಿಧ ಪ್ರಕರಣಗಳಲ್ಲಿ ವಶಕ್ಕೆ ಪಡೆಯಲಾದ 150 ಕೋಟಿ ರೂ. ಬೆಲೆಯ ಡ್ರಗ್ಸ್‌ ವಸ್ತುಗಳನ್ನು ಪೊಲೀಸರು ಸುಟ್ಟು ಹಾಕಿದ್ದಾರೆ.

Karnataka police set fire to drugs worth 150 crores sat

ತುಮಕೂರು (ಜು.09): ರಾಜ್ಯದಲ್ಲಿ ಬೀಡುಬಿಟ್ಟಿರುವ ಡ್ರಗ್ಸ್‌ ದಂಧೆಯ ಕಡಿವಾಣಕ್ಕೆ ಸರ್ಕಾರಿಂದ ಕಠಿಣ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಕಳೆದ ಒಂದೂವರೆ ತಿಂಗಳಲ್ಲಿ ವಿವಿಧ ಪ್ರಕರಣಗಳಲ್ಲಿ ವಶಕ್ಕೆ ಪಡೆಯಲಾದ 150 ಕೋಟಿ ರೂ. ಬೆಲೆಯ ಡ್ರಗ್ಸ್‌ ವಸ್ತುಗಳನ್ನು ಪೊಲೀಸರು ಸುಟ್ಟು ಹಾಕಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ.

ಈ ಕುರಿತು ತುಮಕೂರು ಜಿಲ್ಲೆಯ ಕೊರಟಗೆರೆಯ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಡ್ರಗ್ಸ್ ದಂಧೆ ಕಡಿವಾಣಕ್ಕೆ ನಿರ್ಧಾರ ಮಾಡಿದ್ದೇನೆ. ಕಳೆದ ಒಂದೂವರೆ ತಿಂಗಳಲ್ಲಿ ರಾಜ್ಯದ ಪೊಲೀಸರು 150 ಕೋಟಿ ರೂ.ಗೂ ಅಧಿಕ ಮಾದಕ ವಸ್ತುಗಳನ್ನು ಸುಟ್ಟು ಹಾಕಿದ್ದಾರೆ. ಮೊದಲೆಲ್ಲಾ ಹಳ್ಳಿಗಳಲ್ಲಿ ಟೊಮ್ಯಾಟೊ ಗಿಡಗಳ ಮಧ್ಯೆ ಗಾಂಜಾ ಬೆಳೆಯುತಿದ್ದರು. ನಂತರ, ಅದನ್ನ ಒಣಗಿಸಿ ಸೇವಿಸುತ್ತಿದ್ದರು ಈಗ ಮಾತ್ರೆಗಳ ಬಂದಿರುವುದು ದುರಾದೃಷ್ಟಕರ ಎಂದು ಹೇಳಿದರು.

ಹೆಂಡ್ತಿ, ಮಕ್ಕಳ ಸಾವಿನ ಸ್ಮಾರಕವಾಗಿ ಬಡಜನರಿಗೆ ಮನೆ ನಿರ್ಮಿಸಿಕೊಟ್ಟ ಕುಟುಂಬ ಪ್ರೇಮಿ

ಡ್ರಗ್ಸ್‌ ಸೇವನೆಯಿಂದ ನರಮಂಡಲಕ್ಕೆ ನೇರ ಹಾನಿ: ಇನ್ನು ಗಾಂಜಾ ಹಾಗೂ ಇತರೆ ಮಾದಕ ವಸ್ತುಗಳು ಹಿಂದೆ ಗಿಡದ ರೂಪದಲ್ಲಿ ಬೆಳೆಯುತ್ತಿದ್ದರು. ಆದರೆ, ಈಗ ಮಾತ್ರೆಗಳ ಸೇವನೆ ಮಾಡುತ್ತಿದ್ದಾರೆ. ಗಾಂಜಾ, ಡ್ರಗ್ಸ್‌, ಕೊಕೇನ್‌, ಚರಸ್‌ ಹಾಗೂ ಹೆರಾಯಿನ್‌ ಸೇರಿದಂತೆ ವಿವಿಧ ಮಾದಕ ವಸ್ತುಗಳ ಸೇವನೆಯಿಂದ ನೇರವಾಗಿ ನರಮಂಡಲದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದರಿಂದಾಗಿ ಮಾದಕ  ವಸ್ತುಗಳ ಸಾಗಣೆಯನ್ನು ಹತ್ತಿಕ್ಕಲು ಸರ್ಕಾರ ಹಾಗೂ ಪೊಲೀಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಟೆಂಪೋ, ಬೈಕ್‌ ಡಿಕ್ಕಿ- ದಂಪತಿ ಸಾವು: ಚಿಕ್ಕಬಳ್ಳಾಪುರ (ಜು.09): ಟೆಂಪೋ ಹಾಗೂ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲಿಯೇ ದಂಪತಿ ಸಾವನ್ನಪ್ಪಿದ್ದಾರೆ. ಇನ್ನು ಬೈಕ್‌ನಲ್ಲಿ ಹೋಗುತ್ತಿದ್ದ ಮೂವರು ಮಕ್ಕಳಿಗೆ ಗಂಭೀರ ಗಾಯವಾಗಿದ್ದು, ಕೂಡಲೇ ಮಕ್ಕಳನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಟೊಮೆಟೋ ತುಂಬಿದ ವಾಹನಕ್ಕೆ ಡಿಕ್ಕಿ: ಬೈಕ್ ಹಾಗೂ ಸ್ಕೂಟಿಗೆ ಟೊಮೆಟೊ ತುಂಬಿದ ಟೆಂಪೊ ಡಿಕ್ಕಿ (Accident) ಹೊಡೆದು ದಂಪತಿ ಸಾವನ್ನಪ್ಪಿದ್ದಾರೆ. ಮೃತರನ್ನು ದಂಪತಿ ಶ್ಯಾಮಲಾ (35) ಮತ್ತು ಶ್ರೀರಾಮ್ (40) ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ದಂಪತಿಯ ಮೂವರು ಮಕ್ಕಳು ಗಾಯಗೊಂಡಿದ್ದು, ಈ ಪೈಕಿ ಒಂದು ಮಗುವಿನ ಸ್ಥಿತಿ ಗಂಭೀರವಾಗಿದೆ. ಸದ್ಯ ಮಕ್ಕಳನ್ನು ಚಿಂತಾಪಣಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ನಂತರ, ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಎಸ್.ಎನ್.ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅನ್ನಭಾಗ್ಯ ಯೋಜನೆಗೆ ಮತ್ತೆರಡು ಷರತ್ತುಗಳು ಅನ್ವಯ: ನೀವು ಹಣ ಪಡೆಯಲು ಅರ್ಹರೇ..

ಕೋಲಾರದಿಂದ ಚಿಂತಾಮಣಿಗೆ ಹೊರಟಿದ್ದ ದಂಪತಿ: ಕೋಲಾರ ಕಡೆಯಿಂದ ಚಿಂತಾಮಣಿ ಕಡೆಗೆ ದಂಪತಿ ಪ್ರತ್ಯೇಕ ವಾಹನದಲ್ಲಿ ಬರುತ್ತಿದ್ದರು. ಒಂದು ಮಗುವಿನ ಜೊತೆ ಶ್ಯಾಮಲ ಸ್ಕೂಟಿಯಲ್ಲಿ ಹಾಗೂ ಇಬ್ಬರು ಮಕ್ಕಳೊಂದಿಗೆ ಶ್ರೀರಾಮ್ ಬೈಕ್​ನಲ್ಲಿ ಹೋಗುತ್ತಿದ್ದರು. ಈ ವೇಳೆ ಮುಂಭಾಗದಿಂದ ಬಂದ ಟೊಮೆಟೊ ತುಂಬಿದ ಟೆಂಪೊ ಸ್ಕೂಟಿ ಹಾಗೂ ಬೈಕ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಶ್ಯಾಮಲ ಮತ್ತು ಶ್ರೀರಾಮ್ ಟೆಂಪೊ ಅಡಿಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೂವರು ಮಕ್ಕಳಿಗೆ ಗಾಯಗಳಾಗಿದ್ದು, ಈ ಪೈಕಿ ಒಂದು ಮಗುವಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಮಕ್ಕಳನ್ನು ಕೋಲಾರದ ಎಸ್​ಎನ್​ಆರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

Latest Videos
Follow Us:
Download App:
  • android
  • ios