ಬೆಂಗಳೂರು :  ದೋಸ್ತಿ ಸರ್ಕಾರ ಉಳಿಸಲು ಅಂತಿಮ ಹಂತದ ಕಸರತ್ತು ನಡೆಯುತ್ತಿದೆ. ಒಂದು ಕಡೆ ಬಂಡಾಯ ಶಾಸಕರನ್ನು ಕಾಂಗ್ರೆಸ್ ಅನರ್ಹ ಮಾಡುವ ಮಟ್ಟಕ್ಕೆ ತೀರ್ಮಾನ ತೆಗೆದುಕೊಂಡಿದೆ.  ಇನ್ನೊಂದು ಕಡೆ ಸುರಕ್ಷಾ ತಂತ್ರ ಎಂಬ ಕಾರಣಕ್ಕೆ ನಾಲ್ವರು ಜನ ಸಚಿವರನ್ನು ರಾಜೀನಾಮೆ ಪಡೆದುಕೊಳ್ಳಲು ಕಾಂಗ್ರೆಸ್ ಮುಂದಾಗಿದೆ ಎನ್ನಲಾಗಿದೆ. 

ಈಗಾಗಲೇ ಅತೃಪ್ತ ಶಾಸಕರ ವಿರುದ್ಧ ಅನರ್ಹತೆ ಅಸ್ತ್ರ ಪ್ರಯೋಗಿಸಲು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ನಿರ್ಧಾರ ಮಾಡಿದ್ದು ಇದೀಗ ಮತ್ತೊಮ್ಮೆ ಸಚಿವ ಸಂಪುಟ ವಿಸ್ತರಣೆ ಮಾಡುವ ಬಗ್ಗೆಯೂ ಕೂಡ ಚರ್ಚೆ ನಡೆದಿದೆ ಎನ್ನಲಾಗಿದೆ. 

ಆಪರೇಷನ್ ಕಮಲ ಸಾಬೀತು ಮಾಡಿದ್ರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ: ಬಿಎಸ್‌ವೈ

ಹಿಂದಿನ ಸರಕಾರದಲ್ಲಿಯೂ ಸಚಿವರಾಗಿದ್ದ ಯು.ಟಿ ಖಾದರ್, ಕೃಷ್ಣ ಭೈರೇಗೌಡ, ಕೆ.ಜೆ ಜಾರ್ಜ್, ಆರ್ ವಿ ದೇಶಪಾಂಡೆ ರಾಜೀನಾಮೆ ಪಡೆಯಲಾಗುತ್ತದೆ ಎಂಬ ಮಾತು ಕೇಳಿ ಬಂದಿದೆ. 

ನಾಲ್ವರು ಕಾಂಗ್ರೆಸ್ ಅತೃಪ್ತ ಶಾಸಕರು ಅನರ್ಹ?

ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಗಂಭೀರ ಚಿಂತನೆ ನಡೆಸಿ, ನಾಲ್ವರು ಹಿರಿಯ ಸಚಿವರಿಗೆ ಕೋಕ್ ನೀಡಲಾಗುತ್ತದೆ ಎನ್ನಲಾಗುತ್ತಿದೆ.  ಇವರನ್ನು ಲೋಕಸಭಾ ಚುನಾವಣೆಗೆ ಬಳಸಿಕೊಳ್ಳುವುದಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಈ ಬಗ್ಗೆ ಸ್ವತಃ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರೇ ಮಾತನಾಡಿದ್ದು, ಸುದ್ದಿ ಪಕ್ಕಾ ಎನ್ನುವಂತೆ ಹೇಳಿದ್ದಾರೆ.