ಮುಂದಿನ 2 ದಿನಗಳಲ್ಲಿ ಕೇರಳದಲ್ಲಿ ಮಾನ್ಸೂನ್ ಪ್ರಾರಂಭವಾಗುವ ಸಾಧ್ಯತೆ ಇದೆ. ಮೇ 23 ರಿಂದ ಮುಂದಿನ 5 ದಿನಗಳಲ್ಲಿ ಧಾರವಾಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲಾಡಳಿತವು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ.
ವರದಿ : ಪರಮೇಶ್ ಅಂಗಡಿ ಏಷ್ಯಾನೆಟ್ ಸುವರ್ಣ ನ್ಯೂಸ್ ಧಾರವಾಡ
ಧಾರವಾಡ (ಮೇ.23): ಮುಂದಿನ 2 ದಿನಗಳಲ್ಲಿ ಕೇರಳದಲ್ಲಿ ಮಾನ್ಸೂನ್ ಪ್ರಾರಂಭವಾಗುವ ಸಾಧ್ಯತೆ ಇದೆ ದಕ್ಷಿಣ ಅರೇಬಿಯನ್ ಸಮುದ್ರದ ಕೆಲವು ಭಾಗಗಳು ಮಾಲ್ಡೀವ್ಸ್ ಮತ್ತು ಕೊಮೊರಿನೇರಿಯಾದ ಉಳಿದ ಭಾಗಗಳು, ಲಕ್ಷದ್ವೀಪದ ಕೆಲವು ಭಾಗಗಳು, ಕೇರಳ, ಕರ್ನಾಟಕದ ಕೆಲವು ಭಾಗಗಳು ಮತ್ತು ತಮಿಳುನಾಡಿನ ಕೆಲವು ಭಾಗಗಳು, ಬಂಗಾಳದ ದಕ್ಷಿಣ ಮತ್ತು ಮಧ್ಯ ಕೊಲ್ಲಿ, ಬಂಗಾಳದ ಉತ್ತರ ಕೊಲ್ಲಿ ಮತ್ತು ಈಶಾನ್ಯ ರಾಜ್ಯಗಳ ಕೆಲವು ಭಾಗಗಳಲ್ಲಿ ಇದೇ ಅವಧಿಯಲ್ಲಿ ಪರಿಸ್ಥಿತಿಗಳು ಮಾನ್ಸೂನ್ ಮಳೆಗೆ ಅನುಕೂಲಕರವಾಗುವ ಸಾಧ್ಯತೆಯಿದೆ.
ರಾಜ್ಯದ ವಿವಿದೆಡೆ ಮೇ 23, 2025 ರಂದು ಮುಂದಿನ 5 ದಿನಗಳಲ್ಲಿ ಹಗಲಿರುಳು ಭಾರೀ, ಅತಿ-ಭಾರೀ ಮಳೆ ಆಗುವ ಸಾಧ್ಯತೆ ಇದೆ ಇಂದು ಧಾರವಾಡ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಇದ್ದು, ಹಲವೆಡೆ ಸಾಧಾರಣ ಮಳೆ ಗುಡುಗು ಸಹಿತ ಮಳೆ, ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ (ಗಂಟೆಗೆ 40-50 ಕಿ.ಮೀ) ಮಳೆಯಾಗುವ ಸಾಧ್ಯತೆ ಇದೆ.
ಮೇ 24, 2025 ರಂದು ಧಾರವಾಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ (40-50 ಕಿ.ಮೀ.) ಭಾರೀ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಆರೆಂಜ್ ಅಲರ್ಟ್ ಎಂದು ಘೋಷಿಸಲಾಗಿದೆ.
ಇದನ್ನೂ ಓದಿ: Dharwad: 5 ದಿನಗಳ ಕಾಲ ಮಾವುಮೇಳ ಆಯೋಜನೆ
ಮೇ. 25, 2025 ರಂದು ಧಾರವಾಡ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ (40-50 ಕಿ.ಮೀ.) ಭಾರೀ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ (40-50 ಕಿ.ಮೀ.) ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅಂದು ಆರೆಂಜ್ ಅಲರ್ಟ್ ಎಂದು ಘೋಷಿಸಲಾಗಿದೆ.
ಮೇ. 26, 2025 ರಂದು ಧಾರವಾಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ (ಗಂಟೆಗೆ 40-50 ಕಿ.ಮೀ) ಭಾರೀ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅಂದು ಸಹ ಆರೆಂಜ್ ಅಲರ್ಟ್ ಎಂದು ಘೋಷಿಸಲಾಗಿದೆ.
ಮೇ. 27, 2025 ರಂದು ಧಾರವಾಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ (ಗಂಟೆಗೆ 40-50 ಕಿ.ಮೀ) ಭಾರೀ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅಂದು ಆರೆಂಜ್ ಅಲರ್ಟ್ ಎಂದು ಘೋಷಿಸಲಾಗಿದೆ.
ಆದುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳು ಸಭೆಯಲ್ಲಿ ನೀಡಿದ ಸೂಚನೆಯಂತೆ ಧಾರವಾಡ ಜಿಲ್ಲೆಯ ಬೆಣ್ಣಿ-ಹಳ್ಳ ಮತ್ತು ತುಪ್ಪರಿ ಹಳ್ಳದ ಪ್ರವಾಹಕ್ಕೆ ಒಳಪಡುವ ಗ್ರಾಮಗಳಲ್ಲಿ ಹಾಗೂ ಧಾರವಾಡ ಜಿಲ್ಲೆಯಲ್ಲಿ ಹೆಚ್ಚು ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮನವಿ ಮಾಡಿದ್ದಾರೆ.
