ಮಳೆ ಆರ್ಭಟ ಮುಗೀತು ಎಂದುಕೊಂಡರೆ ತಪ್ಪು. ಹವಾಮಾನ ಇಲಾಖೆ ಮಹತ್ವದ ಸೂಚನೆ ನೀಡಿದೆ. ಮುಂದಿ ಮೂರು ದಿನ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಎಚ್ಚರಿಸಿದೆ. ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಿದೆ. 

ಬೆಂಗಳೂರು (ಸೆ.12) ಸೆಪ್ಟೆಂಬರ್ ತಿಂಗಳಲ್ಲಿ ಮಳೆರಾಯ ಕೆಲ ದಿನ ಬ್ರೇಕ್ ನೀಡಿ ಮತ್ತೆ ಅಬ್ಬರಿಸಿದ್ದ. ಇದೀಗ ಮತ್ತೆ ವಿರಾಮ ನೀಡಿದ್ದಾನೆ. ಆದರೆ ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ ನೀಡಿದೆ. ಮಳೆ ಆರ್ಭಟ ನಿಂತಿಲ್ಲ ಎಂದು ಸ್ಪಷ್ಟಪಡಿಸಿದೆ. ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಕರ್ನಾಟಕದ ಬಹುತೇಕ ಜೆಲ್ಲೆಗೆ ಮಳೆ ಅಲರ್ಟ್ ನೀಡಲಾಗಿದೆ. ಈ ಪೈಕಿ ಕರಾವಳಿ ಹೊರತುಪಡಿಸಿ ಇನ್ನುಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಇಂದು ನಾಳೆ ಯೆಲ್ಲೋ ಅಲರ್ಟ್

ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ. ಈ ಪೈಕಿ ಇಂದು ಹಾಗೂ ನಾಳೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹೊರತುಪಡಿಸಿ ಇನ್ನುಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಯೆಲ್ಲೋ ಅಲರ್ಟ್ ಜಿಲ್ಲೆಗಳಲ್ಲಿ ಮುಂಜಾಗ್ರತೆ ವಹಿಸಲು ಸೂಚಿಸಲಾಗಿದೆ. ರಾಜ್ಯದ ಎಲ್ಲಾ ಜಲಾಶಗಳು ಭರ್ತಿಯಾಗಿದೆ. ಹೀಗಾಗಿ ಹೆಚ್ಚುವರಿ ಮಳೆ ಪ್ರವಾಹ ಪರಿಸ್ಥಿತಿ ಸೃಷ್ಟಿಸಲಿದೆ ಎಂದು ಎಚ್ಚರಿಸಿದೆ.

ಸೆ.14ರಂದು ಆರೇಂಜ್ ಅಲರ್ಟ್

ಸೆಪ್ಟೆಂಬರ್ 14 ರಂದು ಉತ್ತರ ಒಳನಾಡಿನ ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕಲ್ಬುರ್ಗಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಹೀಗಾಗಿ ಈ ಭಾಗದ ಜನರು, ರೈತರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಬೆಂಗಳೂರು ನಗರದಲ್ಲಿ ಮಳೆ ಮುಂದುವರೆಯುವ ಸಾಧ್ಯತೆ : ಹವಾಮಾನ ಇಲಾಖೆ

ಬೆಂಗಳೂರಿನಲ್ಲೂ ಭಾರಿ ಮಳೆ

ಕಳೆದೆರಡು ದಿನಗಳಿಂದ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ. ಇದೀಗ ಶುಕ್ರವಾರ ಮಳೆ ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್ 12ರಂದು ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಇಂದು ಬೆಂಗಳೂರಿನಲ್ಲಿ ಗರಿಷ್ಠ 27 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಲಿದೆ ಎಂದಿದೆ. ಶುಕ್ರವಾರ ಮೋಡ ಮುಸುಕಿದ ವಾತಾವರಣ ಇರಲಿದೆ. ಜೊತೆಗೆ ಹಲವು ಭಾಗದಲ್ಲಿ ತುಂತುರು ಮಳೆಯಾಗಲಿದೆ. ಭಾನುವಾರದ ವರೆಗೆ ಬೆಂಗಳೂರಿನಲ್ಲಿ ತುಂತುರು ಮಳೆಯಾಗಲಿದೆ. ಜೊತಗೆ ಮೋಡ ಮುಸುಕಿದ ವಾತಾವರಣ ಇರಲಿದೆ. ಆದರೆ ಸೋಮವಾರದಿಂದ ( ಸೆ.15) ಬೆಂಗಳೂರಿನಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ದೇಶದ ಹಲವು ರಾಜ್ಯಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಪೈಕಿ ದಕ್ಷಿಣ ಭಾರತದ ರಾಜ್ಯಗಳಾದ ತೆಲಂಗಾಣ, ಕೇರಳ ಹಾಗೂ ಆಂಧ್ರ ಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ. ಈ ಮೂರು ರಾಜ್ಯಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದಿದೆ. ತಮಿಳುನಾಡಿನ ಹಲವು ಭಾಗದಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ದೇಶದ 10 ರಾಜ್ಯಗಳಲ್ಲಿ ಮಳೆ ಅಬ್ಬರ; ಪ್ರವಾಹದಿಂದಾಗಿ ದೆಹಲಿಯಲ್ಲಿ ವಾಯು ಮಾಲಿನ್ಯ ಇಳಿಕೆ