ದಕ್ಷಿಣ ಕನ್ನಡ: ಜಿಲ್ಲೆಯಾದ್ಯಂತ ನಾಳೆಯೂ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ, ದ.ಕ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ ಮತ್ತು ನಾಡಿದ್ದು ರಜೆ ಘೋಷಿಸಲಾಗಿದೆ. ಜುಲೈ 08 ಮತ್ತು ಜುಲೈ 09 ರಂದು ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಹಾಗೂ ಪದವಿ ತರಗತಿಗಳಿಗೆ ರಜೆ ಘೋಷಿಸಲಾಗಿದೆ. ಶಾಲಾ ರಜಾ ದಿನಗಳನ್ನು ಮುಂದಿನ ಬಾರಿ ಶನಿವಾರ ಅರ್ಧ ದಿನಗಳಲ್ಲಿ ಸರಿದೂಗಿಸಲು ಸೂಚನೆ ನೀಡಲಾಗಿದೆ. ಮಳೆ ನಿಂತ ಬಳಿಕ ಶನಿವಾರ ಪೂರ್ಣ ದಿನ ತರಗತಿ ನಡೆಸಲು ಸೂಚಿಸಲಾಗಿದೆ.



