ರಾಜ್ಯದಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯ ಮುನ್ಸೂಚನೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಜಾರಿಗೊಳಿಸಿದೆ.

ಬೆಂಗಳೂರು (ಮೇ.17): ರಾಜ್ಯದಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯ ಮುನ್ಸೂಚನೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಜಾರಿಗೊಳಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಾಳೆ (ಮೇ 18) ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಾದ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಗದಗ, ಬೆಳಗಾವಿ, ಧಾರವಾಡ, ಹಾವೇರಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 

 ಇದೇ ವೇಳೆ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಮುಂದಿನ ಎರಡು ದಿನಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Karnataka weather update: ಪೂರ್ವ ಮುಂಗಾರು, ಮಳೆ ಅಬ್ಬರಕ್ಕೆ ಮತ್ತೆರಡು ಬಲಿ!

ಜನರು ಮುಂಜಾಗ್ರತೆ ವಹಿಸಿ, ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಮುಂದಿನ ಅಪ್‌ಡೇಟ್‌ಗಾಗಿ ಸಂಪರ್ಕದಲ್ಲಿರಿ! 

ರಾಯಚೂರು ಅತಿ ಹೆಚ್ಚು ಉಷ್ಣಾಂಶ:

ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಿರುವ ಹವಾಮಾನ ಇಲಾಖೆ ವರದಿ ಪ್ರಕಾರ, ರಾಯಚೂರಿನಲ್ಲಿ ಅತಿ ಹೆಚ್ಚು 38 ಡಿ.ಸೆ. ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಜಗಳೂರು ಹಾಗೂ ಹರಪನಹಳ್ಳಿಯಲ್ಲಿ ಅತಿ ಹೆಚ್ಚು 11 ಸೆಂ.ಮೀ ಮಳೆಯಾಗಿದೆ. ಉಳಿದಂತೆ ಬೇಗೂರು 6, ಕೊಣನೂರು ಹಾಗೂ ಚಿಂತಾಮಣಿಯಲ್ಲಿ ತಲಾ 5, ಚಿತ್ತಾಪುರ, ಹುಣಸೂರಿನಲ್ಲಿ ತಲಾ 4, ಹೊಸಕೋಟೆ, ಕೋಲಾರ, ಚಾಮರಾಜನಗರ, ಲಕ್ಷ್ಮೇಶ್ವರ, ಬೀದರ್‌ ಹಾಗೂ ನಾಯಕನಹಟ್ಟಿಯಲ್ಲಿ ತಲಾ 3, ರಾಮನಗರ, ಹಿರಿಯೂರು, ಅರಕಲಗೂಡು, ಸೋಮವಾರಪೇಟೆಯಲ್ಲಿ ತಲಾ 2, ಕಳಸ ಮತ್ತಿತರ ಕಡೆ 1 ಸೆಂ.ಮೀ ಮಳೆಯಾಗಿದೆ.

ಶೇ.56 ರಷ್ಟು ಹೆಚ್ಚಿನ ಮಳೆ:

ರಾಜ್ಯದಲ್ಲಿ ಮಾರ್ಚ್‌ನಿಂದ ಈವರೆಗೆ ಸಾಮಾನ್ಯವಾಗಿ ವಾಡಿಕೆ ಪ್ರಕಾರ 69 ಮಿ.ಮೀ ಮಳೆಯಾಗಬೇಕು. ಆದರೆ, ಈ ಬಾರಿ 108 ಮಿ.ಮೀ ಮಳೆಯಾಗಿದೆ. ಒಟ್ಟಾರೆ ಶೇ.56ರಷ್ಟು ಹೆಚ್ಚಿನ ಮಳೆಯಾಗಿದೆ. ಕರಾವಳಿಯಲ್ಲಿ 89.8 ಮಿ.ಮೀ. ಮಳೆಯಾಗುವ ಮೂಲಕ ಶೇ.34ರಷ್ಟು ಹೆಚ್ಚಿನ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ 89.3 ಮಿ.ಮೀ ಮಳೆಯಾಗಿದ್ದು, ಶೇ.89ರಷ್ಟು ಹೆಚ್ಚಿನ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ 128 ಮಿ.ಮೀ ಮಳೆಯಾಗಿದ್ದು, ಶೇ.44 ರಷ್ಟು ಹೆಚ್ಚಿನ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.